ಕಾಡ್ಗಿಚ್ಚು ಘಟನೆ ಬಗ್ಗೆ ಸಿಎಂ ಕೆಂಡಾಮಂಡಲ
Team Udayavani, Jul 10, 2017, 11:36 AM IST
ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಬೆಂಕಿ ಪ್ರಕರಣಗಳ ಬಗ್ಗೆ ಕೆಂಡ ಕಾರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಡ್ಗಿಚ್ಚು ಘಟನೆಗಳಿಗೆ ಅಧಿಕಾರಗಳ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ.
ಅರಣ್ಯ ಇಲಾಖೆ ಭಾನುವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ “ನೀರಿಗಾಗಿ ಅರಣ್ಯ’ ಘೋಷ ವಾಕ್ಯದಡಿ ಹಮ್ಮಿಕೊಂಡಿದ್ದ “ವನಮಹೋತ್ಸವ-2017′ ಉದ್ಘಾಟಿಸಿ ಅವರು ಮಾತನಾಡಿದರು. ಕಾಡ್ಗಿಚ್ಚು ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈಗಿನ ಅರಣ್ಯ ಅಧಿಕಾರಿಗಳಿಗೆ ಕಾಡಿನ ಬಗ್ಗೆ ಮಾಹಿತಿ ಇರುವುದಿಲ್ಲ. ಬಹುತೇಕ ಅಧಿಕಾರಿಗಳು ಕಾಡಿಗೆ ಹೋಗದೆ ಜಿಲ್ಲಾ ಕೇಂದ್ರಗಳಲ್ಲಿರುವ ಹವಾನಿಯಂತ್ರಿತ ಕಚೇರಿಗಳಲ್ಲಿ ಠಿಕಾಣಿ ಹೂಡಿರುತ್ತಾರೆ. ಅಧಿಕಾರಿಗಳ ಈ ನಿರ್ಲಕ್ಷದಿಂದಲೇ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸೇರಿದಂತೆ ಅನೇಕ ಅಹಿತಕರ ಘಟನೆಗಳು ನಡೆಯುತ್ತವೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರ ಕಾನೂನುಗಳನ್ನು ತರಬಹುದು.
ಆದರೆ, ಅಧಿಕಾರಿಗಳು ಕಾಳಜಿ ತೋರಿ, ಗಂಭೀರವಾಗಿ ಪರಿಗಣಿಸಿ ಅದನ್ನು ಅನುಷ್ಠಾನಗೊಳಿಸಿದರೆ ಮಾತ್ರ ಅರಣ್ಯ ರಕ್ಷಣೆ ಸಾಧ್ಯ. ಆದ್ದರಿಂದ ಅಧಿಕಾರಿಗಳಿಗೆ ಕಾಡಿಗೆ ಹೋಗುವಂತೆ ಅರಣ್ಯ ಸಚಿವರು ಸೂಚನೆ ನೀಡಬೇಕು ಎಂದರು. ರಾಜ್ಯದಲ್ಲಿ ಸತತ ಆರು ವರ್ಷಗಳಿಂದ ಭೀಕರ ಬರಗಾಲ ಇರುವುದರಿಂದ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿರುವ ಕೆರೆ ಮತ್ತು ಕಾಲುವೆಗಳು ಬತ್ತಿ ಹೋಗಿವೆ.
ಇದರಿಂದಾಗಿ ಕಾಡುಪ್ರಾಣಿಗಳು ಕುಡಿಯುಲು ನೀರು ಮತ್ತು ತಿನ್ನಲು ಆಹಾರ ಸಿಗದಂತಾಗಿದೆ. ಹಾಗಾಗಿ ಅವರು ನೀರು ಮತ್ತು ಆಹಾರ ಹುಡುಕಿಕೊಂಡು ನಾಡಿಗೆ ಬರುತ್ತಿವೆ. ಇದು ಅನೇಕ ಸಂದರ್ಭಗಳಲ್ಲಿ ಮಾನವ ಪ್ರಾಣ ಮತ್ತು ಬೆಳೆ ನಷ್ಟಕ್ಕೆ ಕಾರಣವಾಗುತ್ತದೆ. ಆದ್ದರಿಂದ ಕಾಡುಪ್ರಾಣಿಗಳಿಗೆ ಅಗತ್ಯ ಪ್ರಮಾಣದಲ್ಲಿ ನೀರು ಮತ್ತು ಆಹಾರದ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
ಒಟ್ಟು ಭೂಪ್ರದೇಶದ ಶೇ.33ರಷ್ಟು ಅರಣ್ಯ ಪ್ರದೇಶ ಇರಬೇಕು ಎಂಬ ನಿಯಮವಿದೆ. ಆದರೆ. ರಾಜ್ಯದಲ್ಲಿ ಶೇ.22ರಷ್ಟು ಮಾತ್ರ ಅರಣ್ಯ ಪ್ರದೇಶವಿದೆ. ಅರಣ್ಯ ಪ್ರದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾಡು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ. ಈ ನಿಟ್ಟಿನಲ್ಲಿ ಸರ್ಕಾರದ ಜತೆಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು, ಶಾಲಾ ವಿದ್ಯಾರ್ಥಿಗಳು ಕೈಜೋಡಿಸಬೇಕು.
ಅರಣ್ಯ ರಕ್ಷಣೆ ಮತ್ತು ಪರಿಸರದ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ. ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸದರೆ ಅದು ಸಮಾಜದ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ. ಮಳೆ ಪ್ರಮಾಣ ಕಡಿಮೆ ಆಗಲಿಕ್ಕೂ ಅರಣ್ಯ ನಾಶ ಕಾರಣ. ಅರಣ್ಯ ಪ್ರದೇಶ ಹೆಚ್ಚಿರುವ ಮಲೆನಾಡು ಭಾಗದಲ್ಲೇ ಮಳೆ ಕಡಿಮೆ ಆಗುತ್ತಿದೆ. ಅರಣ್ಯ ಪ್ರದೇಶ ಹೆಚ್ಚಿಸಿದರೆ ನೀರಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಹೇಳಿದರು.
ಅರಣ್ಯ ಪ್ರದೇಶ ಹೆಚ್ಚಳ: ಅರಣ್ಯ ಸಚಿವ ರಮಾನಾಥ್‌ರೈ ಮಾತನಾಡಿ, ಕಾಡಿನ ಅಂಚಿನಲ್ಲಿರುವ ಸುಮಾರು 2 ಲಕ್ಷ ಕುಟುಂಬಗಳಿಗೆ ಗ್ಯಾಸ್ ಸೌಲಭ್ಯಕಲ್ಪಿಸಿ ಉರುವಲು ಪಡೆಯಲು ಅರಣ್ಯ ಅವಲಂಬಿಸದಂತೆ ನೋಡಿಕೊಳ್ಳಲಾಗಿದೆ. ಅಲ್ಲದೆ, ಈ ವರ್ಷ ಸುಮಾರು ಅರಣ್ಯ ಉತ್ಪನ್ನಗಳಿಂದ ಸರ್ಕಾರ 780 ಕೋಟಿ ರೂ. ಲಾಭ ಗಳಿಸಿದೆ. ವನಹಮೋತ್ಸವ ಆಚರಣೆಯಿಂದ 29 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶ ಹೆಚ್ಚಳವಾಗಿದೆ. 6 ಕೋಟಿ ಗಿಡ ನೆಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ವನಮಹೋತ್ಸವದಲ್ಲಿ ನಿಲಗಿರಿ ಗಿಡ ನೆಡಲು ಅವಕಾಶವಿಲ್ಲ ಎಂದರು.
ಗಾಂಧಿನಗರ ಶಾಸಕ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸ್ಥಳೀಯ ಬಿಬಿಎಂಪಿ ಸದಸ್ಯ ಲತಾ ಕುಮಾರ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ. ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮತ್ತಿತರರು ಇದ್ದರು.
ವನಮಹೋತ್ಸವಕ್ಕೆ ಜನರ “ಬರ’
ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ವನಮಹೋತ್ಸವಕ್ಕೆ ಜನರ “ಬರ’ ಎದುರಾಗಿತ್ತು. ಆಯೋಜಕರು ಒಂದು ಸಾವಿರ ಕುರ್ಚಿಗಳ ವ್ಯವಸ್ಥೆ ಮಾಡಿದ್ದರೆ ಅಲ್ಲಿ ತುಂಬಿದ್ದು ಬರೀ 200 ಕುರ್ಚಿಗಳು. ಅದೂ ಶಾಲಾ ಮಕ್ಕಳಿಂದ. ವೇದಿಕೆಗೆ ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇದು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ. ಇಂತಹ ಕಾರ್ಯಕ್ರಮಕ್ಕೂ ಜನ ಏಕೆ ಬಂದಿಲ್ಲ? ಜನರನ್ನು ಕರೆಸಬೇಕಲ್ವಾ ಎಂದು ಅಲ್ಲಿದ್ದ ಹಿರಿಯ ಅಧಿಕಾರಿಗಳನ್ನು ಪ್ರಶ್ನಿಸಿದರು. ಇದಕ್ಕೆ ದನಿಗೂಡಿಸಿದ ಅರಣ್ಯ ಸಚಿವ ರಮಾನಾಥ ರೈ, ಕೇವಲ ಶಾಲಾ ಮಕ್ಕಳು ಮಾತ್ರ ಬಂದಿದ್ದಾರೆ. ಜನರಿಗೆ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ಯಾಕೆ ನೀಡಿಲ್ಲ ಎಂದು ಅಧಿಕಾರಿಗಳನ್ನು ಗದರಿದರು. ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರ ಮಾತಿಗೆ ಉತ್ತರಿಸಲಾಗದೆ ಅಧಿಕಾರಿಗಳು ತಲೆ ತಗ್ಗಿಸಿ ನಿಂತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.