ಒಳಗೊಳಗೆ ಇನ್ನೂ ಇದೆ ಅಸಮಾಧಾನ
Team Udayavani, Jun 11, 2018, 6:45 AM IST
ಬೆಂಗಳೂರು: ಸಚಿವ ಸ್ಥಾನ ಸಿಗದ ಕಾರಣ ಸಿಡಿದೆದ್ದಿದ್ದ ಮಾಜಿ ಸಚಿವ ಕಾಂಗ್ರೆಸ್‌ನ ಎಂ.ಬಿ.ಪಾಟೀಲ್ ದೆಹಲಿಗೆ ಹೋಗಿ ಬಂದ ನಂತರ ಸ್ವಲ್ಪ ಮೆತ್ತಗಾದಂತೆ ಕಂಡುಬಂದಿದ್ದರೂ ತಮ್ಮ ಸೇವೆಯನ್ನು ಪಕ್ಷ ಪರಿಗಣಿಸದೇ ಇರುವ ಬಗ್ಗೆ ಅವರಲ್ಲಿ ಇನ್ನೂ ಅಸಮಾಧಾನ ಉಳಿದುಕೊಂಡಿರುವುದು ಸ್ಪಷ್ಟವಾಗಿದೆ.
ತಮಗೆ ಉಪಮುಖ್ಯಮಂತ್ರಿ ಸ್ಥಾನವೇ ಬೇಕೆಂದು ಪಟ್ಟು ಹಿಡಿದಿದ್ದ ಮತ್ತು ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ
ಸಚಿವ ಸ್ಥಾನ ತೆಗೆದುಕೊಳ್ಳಲು ನಾನು ಸೆಕೆಂಡ್ ಕ್ಲಾಸ್ ಸಿಟಿಜನ್ ಅಲ್ಲ ಎಂದು ಹೇಳಿದ್ದ ಎಂ.ಬಿ.ಪಾಟೀಲ್, ಮತ್ತೂಂದು ಉಪಮುಖ್ಯಮಂತ್ರಿ ಸ್ಥಾನ ಇಲ್ಲವೆಂಬ ವರಿಷ್ಠರ ಹೇಳಿಕೆಯಿಂದಾಗಿ ಮತ್ತಷ್ಟು ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಆದರೆ, ಅದನ್ನು ಬಹಿರಂಗವಾಗಿ ತೋರಿಸಿಕೊಳ್ಳದೆ, ತಾವು ಸ್ಥಾನಮಾನದ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿಯೇ ಇಲ್ಲ. ನನ್ನಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಹೇಳಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ನಾನು ಕಾಂಗ್ರೆಸ್‌ನಲ್ಲೇ ಇರುತ್ತೇನೆ. ದೊಡ್ಡ ಹುದ್ದೆ ನನಗೇಕೆ ಬೇಕು? ಪಕ್ಷ ನನ್ನನ್ನು ಶಾಸಕನನ್ನಾಗಿ ಮಾಡಿದ್ದು, ಈ ಸ್ಥಾನವೇ ಸಾಕು. ಇದರಲ್ಲೇ ತೃಪ್ತಿ ಇದೆ ಎಂದು ಒಗಟಾಗಿ ಮಾತನಾಡಿದ್ದಾರೆ. ಅಲ್ಲದೆ, ನಾನು ಸೆಕೆಂಡ್‌ಕ್ಲಾಸ್ ಸಿಟಿಜನ್ ಅಲ್ಲ ಎಂಬ ಮಾತನ್ನು ಪುನರುತ್ಛರಿಸುವ ಮೂಲಕ ಕೇವಲ ಸಚಿವ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳುವುದಿಲ್ಲ ಎಂಬ ಸಂದೇಶವನ್ನೂ ರವಾನಿಸಿದ್ದಾರೆ.
ಸೋನಿಯಾ ಗಾಂಧಿಯವರ ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರ ಅಹ್ವಾನದ ಮೇರೆಗೆ ದೆಹಲಿಗೆ ಹೋಗಿದ್ದೆ. ಈ ವೇಳೆ ರಾಹುಲ್‌ಗಾಂಧಿ ಅವರೊಂದಿಗೆ ಚರ್ಚಿಸಿದ್ದೇನೆ.
ವೈಯಕ್ತಿಕವಾಗಿ ಅನ್ಯಾಯ ಆಗಿರುವುದರ ಕುರಿತು ಹೇಳಿಕೊಂಡಿದ್ದೇನೆ. ಪಕ್ಷಕ್ಕಾಗಿ ಮಾಡಿರುವ ಸೇವೆ, ನಾನು
ಮಾಡಿರುವ ನೀರಾವರಿ ಕೆಲಸಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ಆದರೆ, ಯಾವುದೇ ಹುದ್ದೆಗೂ ಬೇಡಿಕೆ ಇಟ್ಟಿಲ್ಲ. ಮಂತ್ರಿ ಸ್ಥಾನ, ಉಪಮುಖ್ಯಮಂತ್ರಿ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಗಳನ್ನು ಕೇಳಿಲ್ಲ. ನನ್ನ ಭಾವನೆಗಳನ್ನು ರಾಹುಲ್ ಗಾಂಧಿ ಅವರೊಂದಿಗೆ ಹಂಚಿಕೊಂಡಿದ್ದೇನೆ ಎಂದರು.
ರಾಜ್ಯದ ವಿದ್ಯಮಾನಗಳನ್ನು ರಾಹುಲ್ ಗಾಂಧಿಯವರ ಗಮನಕ್ಕೆ ತಂದಿದ್ದೇನೆ. ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ.
ಬಿಜೆಪಿಯಿಂದ ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಹೇಳಿದ ಅವರು, ನಾಲ್ಕು ಗೋಡೆಗಳ ಮಧ್ಯೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ನಡೆಸಿದ್ದು, ಚರ್ಚೆಯ ಯಾವ ವಿಷಯವನ್ನೂ ಬಹಿರಂಗ ಪಡಿಸುವುದಿಲ್ಲ. ನನಗೆ ಆಪ್ತರಾಗಿರುವ ಒಂದಷ್ಟು ಮುಖಂಡರ ಜತೆಗೆ ರಾಹುಲ್ ಗಾಂಧಿ ಜತೆಗಿನ ಮಾಹಿತಿ ಹಂಚಿಕೊಳ್ಳುತ್ತೇನೆ ಎಂದರು.
ಪಕ್ಷದಲ್ಲಿ ಉಂಟಾಗಿರುವ ಬೆಳವಣಿಗೆಗಳ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದ್ದಾರೆಂಬ ವರದಿಗಳ
ಕುರಿತಂತೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ನನಗೇನೂಗೊತ್ತಿಲ್ಲ. ಇದಕ್ಕೆ ಸಿದ್ದರಾಮಯ್ಯ ಅವರೇ ಉತ್ತರಿಸಬೇಕು. ನನಗಾಗಿರುವ ಅನ್ಯಾಯದ ಬಗ್ಗೆ ಸಿದ್ದರಾಮಯ್ಯ ಅವರಲ್ಲಿ ಹೇಳಿಕೊಂಡಿದ್ದೇನೆ ಅಷ್ಟೆ ಎಂದು ತಿಳಿಸಿದರು.
ಸಂಸದ ಪ್ರಕಾಶ್ ಹುಕ್ಕೇರಿ ಭೇಟಿ: ಈ ಮಧ್ಯೆ ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ ಭಾನುವಾರ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಪ್ರಕಾಶ್ ಹುಕ್ಕೇರಿ ಅವರು ಮುನಿಸಿಕೊಂಡಿರುವ ಪಾಟೀಲರನ್ನು ಸಮಾಧಾನಪಡಿಸುವ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಚರ್ಚೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ಹುಕ್ಕೇರಿ, ರಾಜಕೀಯ ವಿಚಾರಗಳ ಬಗ್ಗೆ ಎಂ.ಬಿ.ಪಾಟೀಲರೊಂದಿಗೆ ಚರ್ಚಿಸಿಲ್ಲ. ನಮ್ಮ ಭಾಗದಲ್ಲಿ ನೀರಾವರಿಗೆ ಸಂಬಂಧಿಸಿದಂತೆ ಅವರು ಸಾಕಷ್ಟು ಕೆಲಸ ಮಾಡಿದ್ದು, ಆ ಕುರಿತಂತೆ ಸಮಾಲೋಚನೆ ನಡೆಸಿದ್ದೇನೆ. ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ. ನಾನು ಶಾಸಕನಲ್ಲ, ಸಂಸದ ಎಂದರು.
ಪಾಟೀಲ್ ಭೇಟಿ ಮಾಡಿದ ಬಿಜೆಪಿ ಶಾಸಕ
ಉಪಮುಖ್ಯಮಂತ್ರಿ ಅಥವಾ ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ ಎಂ.ಬಿ.ಪಾಟೀಲ್ ಅವರನ್ನು
ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂಬ ಊಹಾಪೋಹಗಳ ಮಧ್ಯೆಯೇ ರಾಯಚೂರು ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಭಾನುವಾರ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಯಿತು. ಎಂ.ಬಿ.ಪಾಟೀಲರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ ಶಿವರಾಜ್ ಪಾಟೀಲ್ ಐದು ನಿಮಿಷ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೆ, ಭೇಟಿ ವೇಳೆ ರಾಜಕೀಯ ಚರ್ಚೆ ನಡೆಸಿಲ್ಲ. ಎಂ.ಬಿ.ಪಾಟೀಲ್ ನಮಗೆ ಸಂಬಂಧಿಕರಾಗಬೇಕಿದ್ದು, ಔಪಚಾರಿಕ ಮಾತುಕತೆ ನಡೆಸಿದ್ದೇನೆ. ನಮ್ಮದು ಪಕ್ಷ ಮೀರಿದ ಸಂಬಂಧ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.