ಸಾಧನೆ ಹೇಳಿ ಮತ ಪಡೆವ ವಿಶ್ವಾಸ ಕಾಂಗ್ರೆಸ್‌ಗಿಲ್ಲ


Team Udayavani, May 8, 2018, 12:33 PM IST

sadhane.jpg

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಯಾವುದೇ ಕಾಂಗ್ರೆಸ್‌ ನಾಯಕರಿಗೆ ತಾವು ಮಾಡಿರುವ ಸಾಧನೆಗಳನ್ನು ಮುಂದಿಟ್ಟು ಮತ ಪಡೆಯುವ ವಿಶ್ವಾಸವಿಲ್ಲ. ಹೀಗಾಗಿ, ನರೇಂದ್ರ ಮೋದಿ, ಅಮಿತ್‌ ಶಾ, ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದದಾರೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಂಗಳೂರು ಪ್ರಸ್‌ಕ್ಲಬ್‌ ಹಾಗೂ ವರದಿಗಾರರ ಕೂಟ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್‌ನ ಯಾವೊಬ್ಬ ನಾಯಕರಿಗೂ ಸಾಧನೆ ಹೇಳಿಕೊಳ್ಳುವ ವಿಶ್ವಾಸವೇ ಇಲ್ಲ. ಯಾಕೆಂದರೆ ಅವರು ಏನೂ ಮಾಡಿಲ್ಲ ಎಂದು ತಿಳಿಸಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೆಲ್ಲುವ ವಿಶ್ವಾಸವಿಲ್ಲ. ಹೀಗಾಗಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ. ಹತ್ತು ದಿನ ಚಾಮುಂಡೇಶ್ವರಿಯಲ್ಲಿ ಹೋಗಿ ಕೆಂಪಯ್ಯ ಸಹಿತ ಎಲ್ಲರಿಂದ ಮಾಹಿತಿ ಪಡೆದು ಸೋಲುವುದು ಖಚಿತ ಎಂದು ತಿಳಿದಾಗ ಬದಾಮಿಗೆ ಹೋಗಿದ್ದಾರೆ. ನಾವು ಕೊಪ್ಪಳಕ್ಕೂ ಹೋಗಬಹುದು ಎಂದುಕೊಂಡಿದ್ದೆವು. ಆದರೆ, ಹೈಕಮಾಂಡ್‌ ಅನುಮತಿ ಕೊಟ್ಟಿಲ್ಲವೋ ಏನೋ, ಪಾಪ ಬದಾಮಿಯಲ್ಲೂ ಸೋಲ್ತಾರೆ,’ ಎಂದು ಹೇಳಿದರು.

“ಪಕ್ಷದಲ್ಲಿ ನಾನೇ ಎಲ್ಲ, ನನ್ನಿಂದಲೇ ಎಲ್ಲ ಭಾಗ್ಯ ಜನತೆಗೆ ಸಿಕ್ಕಿದೆ ಎಂದು ಹಿರಿಯ ನಾಯಕರನ್ನು ಕಡೆಗಣಿಸಿರುವ ಸಿದ್ದರಾಮಯ್ಯ, ಈ ಬಾರಿ ಚುನಾವಣೆಯಲ್ಲಿ ಸೂಕ್ತ ಪಾಠ ಕಲಿಯಲಿದ್ದಾರೆ. ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿಯೊಬ್ಬರು ಸಿಎಂಗೆ ದುಬಾರಿ ಉಡುಗೊರೆ ಕೊಟ್ಟಿರುವ ಬಗ್ಗೆ ನಮಗೆ ಮಾಹಿತಿಯಿದ್ದು, ಅದು ವಾಚ್‌ ಅಥವಾ ಬೇರೆ ಏನು ಎಂಬುದನ್ನು ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಬೇಕು,’ ಎಂದು ಆಗ್ರಹಿಸಿದರು.

ಬಿಜೆಪಿ ಅಲೆಯಿದೆ: “ರಾಜ್ಯದಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಬೆಳೆದು ನಿಂತಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲದೆ, ನಮ್ಮ ಸಂಘಟನೆ ನಿರಂತರವಾಗಿರುತ್ತದೆ. ಹೀಗಾಗಿಯೇ 55 ಸಾವಿರ ಬೂತ್‌ಗಳಲ್ಲಿ ನಮಗೆ ಸಮಿತಿಯಿಗಳಿವೆ,’ ಎಂದ ಶೋಭಾ, “ರಾಜ್ಯದಲ್ಲಿ ಬಿಜೆಪಿ ಅಲೆಯಿದೆ. ಕೇಂದ್ರ ನಾಯಕರು ನಮಗೆ ಎಲ್ಲ ರೀತಿಯ ಸಹಕಾರ ಕೊಡುತ್ತಿದ್ದಾರೆ.

ಕಳೆದ ಚುನಾವಣೆಗಳಿಗೆ ಹೋಲಿಸಿದರೆ ಹತ್ತು ಪಟ್ಟು ಹೆಚ್ಚು ಸಹಕಾರ ಕೇಂದ್ರ ನಾಯಕರಿಂದ ಸಿಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಆಗುತ್ತಿರುವ ಸಣ್ಣಪುಟ್ಟ ತಪ್ಪು ಪತ್ತೆ ಹಚ್ಚಿ ತಿದ್ದಿಕೊಳ್ಳಲು ಅವರೇ ಹೇಳುತ್ತಿದ್ದಾರೆ. ನಮ್ಮ ಸಲಹೆಗಳನ್ನೂ ಗಂಭೀರವಾಗಿ ಪರಿಗಣಿಸುತ್ತಿದ್ದಾರೆ,’ ಎಂದು ತಿಳಿಸಿದರು.

ಯಡಿಯೂರಪ್ಪಗೆ ಬೇಡಿಕೆ: ಬಿಜೆಪಿ ಕೇವಲ ನರೇಂದ್ರ ಮೋದಿ ಅಲೆ ಹಾಗೂ ಅಮಿತ್‌ ಶಾ ತಂತ್ರಗಾರಿಕೆ ನಂಬಿದೆ. ಅವರಿಬ್ಬರೇ ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಶೋಭಾ, “ಯಡಿಯೂರಪ್ಪ ಅವರು ಪರಿವರ್ತನೆಯಾತ್ರೆ ಮೂಲಕ 224 ಕ್ಷೇತ್ರ ಸುತ್ತಾಡಿ ಇದೀಗ ಎರಡನೇ ಸುತ್ತಿನಲ್ಲಿ 125 ಕ್ಷೇತ್ರ ಪ್ರವಾಸ ಮಾಡಿದ್ದಾರೆ.

ಯಡಿಯೂರಪ್ಪ ಪ್ರಚಾರಕ್ಕೆ ಬರಬೇಕು ಎಂಬುದು ಎಲ್ಲ ಕ್ಷೇತ್ರಗಳ ಕಾರ್ಯಕರ್ತರ ಬೇಡಿಕೆಯಾಗಿದೆ. ಬಿಎಸ್‌ವೈ, ನರೇಂದ್ರಮೋದಿ, ಅಮಿತ್‌ ಶಾ ಸೇರಿ ರಾಜ್ಯ ಹಾಗೂ ಕೇಂದ್ರ ನಾಯಕರೆಲ್ಲರೂ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪಕ್ಷದ ಗೆಲುವಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚು ಸ್ಥಾನ ನೀಡದ ಬಗ್ಗೆ ಪ್ರತಿಕ್ರಿಯಿಸಿ, ಗೆಲ್ಲುವ ಮಾನದಂಡ ಹಾಗೂ ಅನಿವಾರ್ಯ ಕಾರಣಗಳಿಂದ ಕೊಟ್ಟಿಲ್ಲ. ಯಶವಂತಪುರ ಕ್ಷೇತ್ರದಲ್ಲಿ ನಿಲ್ಲುವಂತೆ ನನಗೆ ಒತ್ತಡ ಇತ್ತು. ಆದರೆ, ಪಕ್ಷದ ಚುನಾವಣೆ ನಿರ್ವಹಣೆ ಕೆಲಸದ ಹಿನ್ನೆಲೆಯಲ್ಲಿ ತ್ಯಾಗ ಮಾಡಬೇಕಾಯಿತು ಎಂದು ತಿಳಿಸಿದರು.

ನಾನು ಬಿಜೆಪಿ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ, ಇಂಧನ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಖಾತೆ ನಿರ್ವಹಿಸಿ ಇಲಾಖೆಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ಬೇರೆಯವರ ಖಾತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದೆ ಎಂಬುದು ಕೇವಲ ಆರೋಪವೇ ಹೊರತು ನಿಜವಲ್ಲ. ಆರೋಪ ಮಾಡಿದವರು ಇದುವರೆಗೂ ಒಂದೇ ಒಂದು ಸಾಕ್ಷಿ ಕೊಟ್ಟಿಲ್ಲ.
-ಶೋಭಾ ಕರಂದ್ಲಾಜೆ

ಟಾಪ್ ನ್ಯೂಸ್

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.