ಎಚ್ಡಿಕೆಗೆ ಕಾಂಗ್ರೆಸ್ ವಿಷ ಕುಡಿಸುತ್ತಿದೆ
Team Udayavani, Jul 26, 2018, 6:15 AM IST
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಲು ಕಾಂಗ್ರೆಸ್ ವಿಷ ಕುಡಿಸುತ್ತಿದೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಲೋಕಸಭೆಯಲ್ಲಿ ಹೇಳಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿ ಬರ ಮತ್ತು ಪ್ರವಾಹ ಕುರಿತಂತೆ ಚರ್ಚೆಯೊಂದರಲ್ಲಿ ಕರ್ನಾಟಕದ ವಿಚಾರವನ್ನು ಪ್ರಸ್ತಾಪಿಸಿದ ಪ್ರತಾಪ್ ಸಿಂಹ, ತಾನು ವಿಷ ಸೇವಿಸುತ್ತಿದ್ದೇನೆಂದು ಕರ್ನಾಟಕ ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ ಅವರು ವಿಷ ಸೇವಿಸುತ್ತಿರುವುದು ಅಧಿಕಾರಲ್ಲಿರುವುದಕ್ಕಾಗಿದೆ.
ರಾಜ್ಯದ ಅಧಿಕಾರದ ಮೇಲೆ ಹೆಚ್ಚು ನಿಯಂತ್ರಣ ಸಾಧಿಸಲು ಕಾಂಗ್ರೆಸ್ ಅವರಿಗೆ ಹೆಚ್ಚು ಹೆಚ್ಚು ವಿಷವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ. ಇದಕ್ಕೆ ಕರ್ನಾಟಕದ ಕಾಂಗ್ರೆಸ್ ಸಂಸದರಿಂದ ತೀವ್ರ ಆಕ್ಷೇಪ ವ್ಯಕ್ತವಾಯಿತು. ಪ್ರತಾಪ್ ಸಿಂಹ ಅಪರೂಪಕ್ಕೆ ಸದನದಲ್ಲಿ ಮಾತನಾಡುತ್ತಿದ್ದಾರೆಂದು ಹೇಳುವ ಮೂಲಕ ಸಂಸದೀಯ ಸಚಿವ ಅನಂತಕುಮಾರ್ ಸಮರ್ಥಿಸಿಕೊಂಡರು. ತಮಿಳುನಾಡಿನ ಜನರು ನನ್ನ ಲೋಕಸಭೆ ಕ್ಷೇತ್ರಕ್ಕೆ ಕೃತಜ್ಞರಾಗಿರಬೇಕು. ಯಾಕೆಂದರೆ ಕಾವೇರಿ ಇಲ್ಲೇ ಹುಟ್ಟುತ್ತದೆ ಎಂದೂ ಪ್ರತಾಪ್ ಸಿಂಹ ಚರ್ಚೆಯ ವೇಳೆ ಹೇಳಿದರು. ಇದೇ ವೇಳೆ ಕರ್ನಾಟಕ ಸರ್ಕಾರ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ನೆರವು ನೀಡುತ್ತಿಲ್ಲ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.