ಸಮನ್ವಯ ಸಮಿತಿಯಲ್ಲಿ ಕಾಂಗ್ರೆಸ್,ಜೆಡಿಎಸ್ ರಾಜ್ಯಾಧ್ಯಕ್ಷರು ಇರಬೇಕು
Team Udayavani, Sep 28, 2018, 6:45 AM IST
ಬೆಂಗಳೂರು: ಸಮನ್ವಯ ಸಮಿತಿಯಲ್ಲಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ರಾಜ್ಯಾಧ್ಯಕ್ಷರು ಇರಲೇಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ ಪ್ರತಿಪಾದಿಸಿದ್ದಾರೆ.
ಈ ಮೂಲಕ ಸಮನ್ವಯ ಸಮಿತಿಗೆ ತಮ್ಮನ್ನು ಸೇರಿಸಲು ಅಡ್ಡಗಾಲು ಹಾಕುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷ ಅಸಮಾಧಾನ ಹೊರಹಾಕಿದ್ದಾರೆ. ಶೀಘ್ರದಲ್ಲೇ ಸಮನ್ವಯ ಸಮಿತಿಗೆ ಸೇರ್ಪಡೆಯಾಗಲಿದ್ದೇನೆ ಎಂದು ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎರಡೂ ಪಕ್ಷದ ಅಧ್ಯಕ್ಷರು ಇದ್ದಾಗಲೇ ಸಮನ್ವಯ ಸಮಿತಿ ಪರಿಪೂರ್ಣ. ಎರಡು ಪಕ್ಷದ ಕಾರ್ಯಕ್ರಮಗಳ ಜಾರಿಗೂ ಇದು ಅನುಕೂಲವಾಗಲಿದೆ ಎಂದು ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷನಾಗಿ ಸಮನ್ವಯ ಸಮಿತಿಯಲ್ಲಿ ನನಗೆ ಸ್ಥಾನ ಸಿಗಬೇಕು. ಈ ಬಗ್ಗೆ ಬಹಿರಂಗವಾಗಿಯೂ ಹಲವಾರು ಬಾರಿ ಹೇಳಿದ್ದೇನೆ. ಶೀಘ್ರದಲ್ಲೇ ಸಮನ್ವಯ ಸಮಿತಿಗೆ ಸೇರ್ಪಡೆಯಾಗುವ ವಿಶ್ವಾಸವಿದೆ ಎಂದು ತಿಳಿಸಿದರು.
ಸಮ್ಮಿಶ್ರ ಸರ್ಕಾರಕ್ಕೆ ಇದ್ದ ಎಲ್ಲ ಆತಂಕ, ಕಾರ್ಮೋಡಗಳು ತೆರೆಗೆ ಸರಿದಿವೆ. ಎಲ್ಲವೂ ಬೆಳ್ಳಗೆ ಇದೆ. ಇನ್ಮುಂದೆಯೂ ಸುಸೂತ್ರವಾಗಿರಲಿದೆ. ಯಾರಿಗೂ ಯಾವುದೇ ರೀತಿಯ ಆತಂಕ ಬೇಡ ಎಂದರು.
ನಿಮ್ಮ ಹಾಗೂ ಸಿದ್ದರಾಮಯ್ಯ ಅವರ ನಡುವಿನ ಸಂಬಂಧವೂ ಸುಧಾರಣೆಯಾಗಿದೆಯಾ ಎಂಬ ಪ್ರಶ್ನೆಗೆ ಮುಗುಳ್ನಕ್ಕು ಸುಮ್ಮನಾದರು. ಕೆಲವು ವಿಷಯಗಳು ನನಗೆ ಸರಿಯಾಗಿ ಕೇಳಿಸುವುದಿಲ್ಲ ಎಂದು ಚಟಾಕಿ ಹಾರಿಸಿದರು.
ವಿಧಾನಪರಿಷತ್‌ಗೆ ರಮೇಶ್‌ಗೌಡ ಆಯ್ಕೆ ಕುರಿತ ಪ್ರಶ್ನೆಗೆ, ರಾಷ್ಟ್ರೀಯ ಅಧ್ಯಕ್ಷರು ಒಪ್ಪಿದ ಮೇಲೆ ಅದು ಮುಗಿದ ಅಧ್ಯಾಯ. ದೊಡ್ಡವರು ಎಲ್ಲರ ಸಹಮತ ಪಡೆದು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.
ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವ ಆರೋಪ ಪ್ರತ್ಯಾರೋಪ ಸಹಜ. ಒಮ್ಮೊಮ್ಮೆ ರಾಜಕೀಯದಲ್ಲಿ ಇದೆಲ್ಲ ಆಗುತ್ತದೆ. ಇದು ಎಲ್ಲ ಪಕ್ಷಗಳಲ್ಲೂ ಇರುತ್ತದೆ. ಪಂಚಾಯಿತಿ ಮಟ್ಟದಿಂದ ಪಾರ್ಲಿಮೆಂಟ್‌ವರೆಗೆ ಎಷ್ಟು ಜನ ಕ್ರಿಮಿನಲ್ ಹಿನ್ನೆಲೆಯವರಿಲ್ಲ ಹೇಳಿ ಎಂದು ಪ್ರಶ್ನಿಸಿದರು.
ಹಳ್ಳಿಹಕ್ಕಿಯ ಏಳನೇ ಪುಸ್ತಕ ಅಥೇನ್ಸ್ ರಾಜ್ಯಾಡಳಿತ
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಬರೆದಿರುವ “ಅಥೇನ್ಸ್‌ನ ರಾಜ್ಯಾಡಳಿತ’ ಪುಸ್ತಕ ಸೆ.29 ರಂದು ಬೆಳಗ್ಗೆ 11 ಗಂಟೆಗೆ ಭಾರತೀಯ ವಿದ್ಯಾಭವನದಲ್ಲಿ ಬಿಡುಗಡೆಯಾಗಲಿದೆ. ಗ್ರೀಸ್ ದೇಶಕ್ಕೆ ಹೋಗಿ ಅಲ್ಲಿನ ಆಡಳಿತ ವ್ಯವಸ್ಥೆ ಅಧ್ಯಯನ ಮಾಡಿ ಬರೆದಿರುವ ಕೃತಿ ಇದಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪುಸ್ತಕ ಬಿಡುಗಡೆಮಾಡಲಿದ್ದಾರೆ.
ಕೃತಿಯಲ್ಲಿ ಎರಡು ಸಾವಿರ ವರ್ಷಗಳ ಹಿಂದೆಯೇ ಜನಾಡಳಿತ ಇದ್ದ ಬಗ್ಗೆ ಉಲ್ಲೇಖವಿದೆ. ಗ್ರೀಸ್ ದೇಶದ ಪಾರ್ಲಿಮೆಂಟ್‌ಗೆ ಪುಸ್ತಕ ಸಲ್ಲಿಸುವಂತೆಯೂ ಕೇಳಿದ್ದಾರೆ. ಬಿಡುಗಡೆ ನಂತರ ಗ್ರೀಸ್‌ಗೆ ಪ್ರವಾಸ ಹೊರಡಲಿದ್ದೇನೆ ಎಂದು ವಿಶ್ವನಾಥ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.