ಭಗವಾನ್‌ ಹತ್ಯೆಗೆ ಸಂಚು:ದೋಷಾರೋಪ ಪಟ್ಟಿ ಸಲ್ಲಿಕೆ


Team Udayavani, Jul 22, 2018, 11:10 AM IST

bhagawan.jpg

ಬೆಂಗಳೂರು: ಚಿಂತಕ ಪ್ರೊ ಕೆ.ಎಸ್‌.ಭಗವಾನ್‌ ಕೊಲೆಗೆ ಸಂಚು ರೂಪಿಸಿದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಉಪ್ಪಾರಪೇಟೆ ಠಾಣೆ ಪೊಲೀಸರು ಆರೋಪಿಗಳ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 730 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 

ಆರೋಪಿಗಳಾದ ಮದ್ದೂರಿನ ನವೀನ್‌ ಕುಮಾರ್‌ ಅಲಿಯಾಸ್‌ ಹೊಟ್ಟೆ ಮಂಜ, ಶಿಕಾರಿಪುರದ ಪ್ರವೀಣ್‌ ಕುಮಾರ್‌, ಮಹಾರಾಷ್ಟ್ರದ ಅಮೋಲ್‌ ಕಾಳೆ, ಅಮಿತ್‌ ದೇಗ್ವೇಕರ್‌ ಹಾಗೂ ವಿಜಯಪುರದ ಮನೋಹರ್‌ ಯಡವೆ, ಭಗವಾನ್‌ ಹತ್ಯೆಗೆ ಸಂಚು ರೂಪಿಸಿದ್ದು, ಈ ಕುರಿತು ನವೀನ್‌ ಕುಮಾರ್‌, ಶ್ರೀರಂಗಪಟ್ಟಣದ ಅನಿಲ್‌ ಕುಮಾರ್‌ ಸೇರಿ 160 ಸಾಕ್ಷಿಗಳ ಹೇಳಿಕೆ ಹಾಗೂ ವಿಧಿ ವಿಜ್ಞಾನ ಪರೀಕ್ಷಾ ಕೇಂದ್ರದ ವರದಿ ಸೇರಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಫೆ.18ರಂದು ಮೆಜೆಸ್ಟಿಕ್‌ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಆರೋಪದ ಮೇಲೆ ನವೀನ್‌ ಕುಮಾರ್‌ನನ್ನು ವಶಕ್ಕೆ ಪಡೆದಿದ್ದರು. ಈ ವೇಳೆ ಇತರೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಐಡೆಂಟಿಫಿಕೇಷನ್‌ ಪರೇಡ್‌’: ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂ ಪರ ಸಂಘಟನೆ ಮುಖಂಡ ಮೋಹನ್‌ ನಾಯಕ್‌ನನ್ನು ಶನಿವಾರ ಸಂಜೆ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದೊಯ್ದು, “ಐಡೆಂಟಿಫಿಕೇಷನ್‌ ಪರೇಡ್‌’ ನಡೆಸಲಾಗಿದೆ.

ಈಗಾಗಲೇ ಪ್ರಕರಣದಲ್ಲಿ ಬಂಧಿತರಾಗಿರುವ ನವೀನ್‌ ಕುಮಾರ್‌, ಪ್ರವೀಣ್‌ ಕುಮಾರ್‌, ಅಮೋಲ್‌ ಕಾಳೆ, ಅಮಿತ್‌ ದೇಗ್ವೇಕರ್‌, ಮನೋಹರ್‌ ಯಡವೆ ಹಾಗೂ ಶೂಟರ್‌ ಪರಶುರಾಮ್‌ ವಾಗ್ಮೋರೆಯನ್ನು ಸಾಲಾಗಿ ನಿಲ್ಲಿಸಿ ಪರೇಡ್‌ ಮಾಡಲಾಗಿದೆ. ಈ ವೇಳೆ ಪ್ರವೀಣ್‌ ಕುಮಾರ್‌ ಹಾಗೂ ನವೀನ್‌ ಕುಮಾರ್‌ನನ್ನು ಮೋಹನ್‌ ನಾಯಕ್‌ ಗುರುತಿಸಿದ್ದಾನೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ಹಂತಕರು ಬೆಂಗಳೂರಿನಲ್ಲಿ ನೆಲೆಸಲು ಸಹಾಯ ಮಾಡಿದ ಆರೋಪದ ಮೇಲೆ ಮೋಹನ್‌ ನಾಯಕ್‌ನನ್ನು ಗುರುವಾರ ಬಂಧಿಸಲಾಗಿತ್ತು.

ಟಾಪ್ ನ್ಯೂಸ್

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.