ಪಠ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ವಿಷಯ ಅಳವಡಿಕೆ
Team Udayavani, Jan 24, 2017, 12:01 PM IST
ಬೆಂಗಳೂರು: ರಸ್ತೆ ಸುರಕ್ಷತೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಅಗತ್ಯವಿರುವ ಹಿನ್ನೆಲೆಯಲ್ಲಿ ಪಠ್ಯಕ್ರಮದಲ್ಲಿ ಈ ಬಗ್ಗೆ ಅಳವಡಿಸುವ ಚಿಂತನೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಾರಿಗೆ ಇಲಾಖೆ ವತಿಯಿಂದ ಪುರಭವನದಲ್ಲಿ ಹಮ್ಮಿಕೊಂಡಿದ್ದ 28ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಲಾ ದಿನದಲ್ಲಿಯೇ ಮಕ್ಕಳಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸಬೇಕಾದ ಅಗತ್ಯ ಇದೆ. ಚಿಕ್ಕ ವಯಸ್ಸಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ತಿಳಿಸಿದರೆ ಅವರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ. ಹೀಗಾಗಿ ಪಠ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಕುರಿತು ಮಕ್ಕಳಿಗೆ ಮಾಹಿತಿ ಒದಗಿಸಲು ಅಧ್ಯಯನ ವಿಷಯವನ್ನಾಗಿ ಇಡುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿವೆ. ಪ್ರತಿನಿತ್ಯ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಪ್ರಾಣಹಾನಿ ಉಂಟಾಗುತ್ತಿದೆ. ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ 12 ಲಕ್ಷ ವಾಹನಗಳು ಸೇರ್ಪಡೆಯಾಗಿದೆ. ಕೇವಲ ದಂಡ ಅಥವಾ ಕಾನೂನಿನ ಮೂಲಕ ರಸ್ತೆ ಸುರಕ್ಷತೆ ಕುರಿತು ಕಲಿಸಲು ಸಾಧ್ಯವಿಲ್ಲ ಎಂದರು.
ನಟ ಶಿವರಾಜ್ ಕುಮಾರ್ ಮಾತನಾಡಿ, ಶಿಷ್ಟಾಚಾ ರದ ಹೆಸರಲ್ಲಿ ಮುಖ್ಯಮಂತ್ರಿ, ಗೃಹಸಚಿವರಿಗೆ ಸಂಚಾರ ಮುಕ್ತ ವ್ಯವಸ್ಥೆ ಇದೆ. ಇದರಿಂದ ಜನಸಾಮಾ ನ್ಯರು ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಟ ನಡೆಸಬೇಕಾಗಿದೆ. ಆ್ಯಂಬುಲೆನ್ಸ್‌ಗಳು ಬಂದರೂ ಬಿಡುವುದಿಲ್ಲ. ಸಂಚಾರ ದಟ್ಟಣೆಯಲ್ಲಿ ಆ್ಯಂಬುಲೆನ್ಸ್‌ಗಳು ಸಿಲುಕಿ ಮುಖ್ಯಮಂತ್ರಿ, ಗೃಹ ಸಚಿವರು ಹೋಗುವ ವರೆಗೆ ಕಾಯಲೇಬೇಕಾದ ಅನಿವಾರ್ಯ ಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಚಾರ ದಟ್ಟಣೆ ನಿವಾರಣೆಯತ್ತ ರಾಜ್ಯ ಸರ್ಕಾರವು ಹೆಚ್ಚಿನ ಗಮನಹರಿಸಬೇಕಿದೆ. ಟ್ರಾಫಿಕ್‌ನಿಂದ ನಗರದ ಪ್ರತಿಯೊಬ್ಬ ನಾಗರಿಕರು ಕಿರಿಕಿರಿ ಅನುಭವಿಸುವಂತಾಗಿದೆ. ಸಂಚಾರ ದಟ್ಟಣೆಯ ಬಿಸಿ ತಮಗೂ ತಟ್ಟಿದ್ದು, ಈ ಹಿಂದೆ ಎದೆ ನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ತಲುಪಲು ಹರಸಾಹಸ ಪಡಬೇಕಾಗಿತ್ತು ಎಂದು ಹೇಳಿದ ಅವರು, ಇತ್ತೀಚೆಗೆ ಯುವಕರು ರಸ್ತೆಗಳಲ್ಲಿ ಬೈಕ್‌ನಲ್ಲಿ ಸ್ಟಂಟ್‌ಗಳನ್ನು ಮಾಡುತ್ತಿರುವುದು ಹೆಚ್ಚಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.
ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ಹಮ್ಮಿಕೊಳ್ಳ ಲಾಗಿದ್ದ ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಇದೇ ವೇಳೆ ಪ್ರಶಸ್ತಿ ನೀಡಿ ಗೌರವಿಸ ಲಾಯಿತು. ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು, ಆಯುಕ್ತ ಎಂ.ಕೆ.ಅಯ್ಯಪ್ಪ, ಬೆಂಗಳೂರು ನಗರ ಜಂಟಿ ಸಾರಿಗೆ ಆಯುಕ್ತ ಜೆ.ಜ್ಞಾನೇಂದ್ರ ಕುಮಾರ್, ನಟಿ ದೀಪಿಕಾ ದಾಸ್, ಕ್ರಿಕೆಟಿಗ ರೋಜರ್ ಬಿನ್ನಿ ಸೇರಿದಂತೆ ನೂರಾರು ಶಾಲಾ ಮಕ್ಕಳು ಭಾಗವಹಿಸಿದ್ದರು.
ಶೀಘ್ರ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆ
ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿರುವ ರಾಜ್ಯ ಸರ್ಕಾರ ರಸ್ತೆ ಸುರಕ್ಷತಾ ಪ್ರಾಧಿಕಾರ ರಚಿಸಲು ಮುಂದಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು ಹೇಳಿದ್ದಾರೆ.
ಸಾರಿಗೆ ವ್ಯವಸ್ಥೆ ಸುಗಮವಾಗಲು ಸಾರಿಗೆ ಇಲಾಖೆ, ಲೋಕೋಪಯೋಗಿ, ಆರೋಗ್ಯ, ಪೋಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯಗಳ ಸಹಕಾರ ಅಗತ್ಯ ಇದೆ. ಎಲ್ಲ ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವಹಿಸುವ ಸಂಬಂಧ ಪ್ರಾಧಿಕಾರ ರಚನೆಗೆ ಚಿಂತನೆ ನಡೆದಿದೆ ಎಂದರು.
ಕೇರಳ ರಾಜ್ಯದಲ್ಲಿ ಇಂತಹ ಪ್ರಾಧಿಕಾರ ಈಗಾಗಲೇ ರಚನೆಯಾಗಿದ್ದು, ರಾಜ್ಯದ ಅಧಿಕಾರಿಗಳ ತಂಡ ಕೇರಳಕ್ಕೆ ಭೇಟಿ ನೀಡಿ ಪ್ರಾಧಿಕಾರದ ಕಾರ್ಯವೈಖರಿ ಬಗ್ಗೆ ವರದಿ ತಯಾರಿಸಿದ್ದಾರೆ. ರಸ್ತೆ ಸುರಕ್ಷತೆಗಾಗಿ ನಿಗದಿಯಾಗುವಂತಹ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಲು ಪ್ರಾಧಿಕಾರ ರಚನೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.