ದಂಪತಿ ಜಗಳ ಕೊಲೆಯಲ್ಲಿ ಅಂತ್ಯ
Team Udayavani, Feb 21, 2018, 12:44 PM IST
ಬೆಂಗಳೂರು: ದಂಪತಿ ಜಗಳಕ್ಕೆ ಮಧ್ಯಪ್ರವೇಶಿಸಿದಂತೆ ಎಚ್ಚರಿಕೆ ನೀಡಿದ್ದಕ್ಕೆ ನೆರೆ ಮನೆ ನಿವಾಸಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಚಂದ್ರಲೇಔಟ್ನ ಅರುಂಧತಿನಗರದಲ್ಲಿ ನಡೆದಿದೆ. ಅರುಂಧತಿ ನಗರದ ನಿವಾಸಿ ಸೈಯದ್ (37) ಕೊಲೆಯಾದ ವ್ಯಕ್ತಿ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಅಮೀನ್ (33)ನನ್ನು ಪೊಲೀಸರು ಬಂಧಿಸಿದ್ದಾರೆ.
ಒಡಿಶಾ ಮೂಲದ ಸೈಯದ್ಗೆ ಮದುವೆಯಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳ ಜತೆ ಅರುಂಧತಿ ನಗರದಲ್ಲಿ ವಾಸವಿದ್ದಾನೆ. ಗಾರೆ ಕೆಲಸಗಾರನಾಗಿದ್ದ ಸೈಯದ್ ನಿತ್ಯ ಮದ್ಯ ಸೇವಿಸಿ ಬರುತ್ತಿದ್ದ. ಇದೇ ವಿಚಾರವಾಗಿ ಪತ್ನಿ ಜತೆ ಜಗಳವಾಡುತ್ತಿದ್ದ.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ದಂಪತಿ ಜಗಳ ಮಾಡುತ್ತಿದ್ದರು. ಆಗ ನೆರೆಮನೆ ನಿವಾಸಿ ಅಮಿನ್ ದಂಪತಿಗೆ ಜಗಳ ಮಾಡದಂತೆ ಎಚ್ಚರಿಕೆ ನೀಡಿದ್ದ. ದಂಪತಿ ಜಗಳದ ಮಧ್ಯೆ ಪ್ರವೇಶಿಸಲು ನೀನ್ಯಾರು ಎಂದು ಸೈಯದ್ ಪ್ರಶ್ನಿಸಿದಲ್ಲದೇ, ಅಮಿನ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.
ಆಗ ಸ್ಥಳೀಯರು ಜಗಳ ಬಿಡಿಸಿ ಕಳುಹಿಸಿದ್ದರು. ಇದರಿಂದ ಆಕ್ರೋಶಗೊಂಡ ಅಮಿನ್ ಮನೆಯಿಂದ ಚಾಕು ತಂದ ಸೈಯದ್ ಹೊಟ್ಟೆಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಕೆಳಗೆ ಬಿದ್ದ ಸೈಯದ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದರು. ಪ್ರಕರಣ ಚಂದ್ರಲೇಔಟ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.