ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕೋರ್ಟ್‌ ಸೂಚನೆ


Team Udayavani, Dec 16, 2017, 4:19 PM IST

highcourt2.jpg

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಅಹಿತಕರ ಘಟನೆ ಜರುಗದಂತೆ ಕಟ್ಟುನಿಟ್ಟಿನ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಹಾಗೇ ಹೊಸ ವರ್ಷಾಚರಣೆಗೆ ಎಂ.ಜಿ.ರಸ್ತೆ, ಪ್ರಿಗೇಡ್‌ರಸ್ತೆಗೇ ಏಕೆ ಹೋಗಬೇಕು ಎಂದು ಪ್ರಶ್ನಿಸಿದೆ.

ಡಿ.31, ಜ.1ರಂದು ನಗರಾದ್ಯಂತ ಮದ್ಯ ಮಾರಾಟ ನಿರ್ಬಂಧಿಸಲು ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್‌ ಇತ್ಯರ್ಥಪಡಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ನ್ಯಾ ಪಿ.ಎಸ್‌ ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ, ರಾಜ್ಯಸರ್ಕಾರ ಹಾಗೂ ಪೊಲೀಸ್‌ ಇಲಾಖೆಗೆ ಈ ನಿರ್ದೇಶನ ನೀಡಿತು.

ನಗರದಲ್ಲಿ ಹೊಸವರ್ಷಾಚರಣೆ ವೇಳೆ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ  ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ಕುಮಾರ್‌ ಸಲ್ಲಿಸಿದ ಅಫಿಡವಿಟ್‌ ಪರಿಶೀಲಿಸಿದ ನ್ಯಾಯಪೀಠ, ಕಳೆದ ಬಾರಿ ನಗರದಲ್ಲಿ ನಡೆದ ಕೆಲ ಘಟನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಬಾರಿ ಅಂತಹ ಘಟನೆಗಳಿಗೆ ಅವಕಾಶ ಕೊಡಬೇಡಿ. ನಗರ ಪೊಲೀಸ್‌ ಆಯುಕ್ತರು ಸೇರಿದಂತೆ ಇಲಾಖೆ ಸಿಬ್ಬಂದಿ ಇದನ್ನು ಸವಾಲೆಂದು ಸ್ವೀಕರಿಸಬೇಕು ಎಂದು ತಾಕೀತು ಮಾಡಿತು.

ಇದಕ್ಕೂ ಮೊದಲು ನಡೆದ ವಿಚಾರಣೆ ವೇಳೆ, ಬ್ರಿಗೇಡ್‌ ಹಾಗೂ ಎಂ.ಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆ ವೇಳೆ ಮದ್ಯ ಸೇವಿಸುವ ದುಷ್ಕರ್ಮಿಗಳು ದುಷ್ಕೃತ್ಯ ಎಸಗುತ್ತಾರೆ ಎಂದು ಅರ್ಜಿದಾರರು ಹೇಳಿದ್ದಾರೆ. ಇದೊಂದು ಗಂಭೀರ ವಿಚಾರ. ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳುತ್ತೀರಿ. ಆದರೆ ಪ್ರತಿ ವರ್ಷ ಅಹಿತಕರ ಘಟನೆಗಳು ಪುನಾರವರ್ತನೆಯಾಗುತ್ತಿವೆ.

ಈ ಎರಡೂ ರಸ್ತೆಗಳಲ್ಲಿ ಎಷ್ಟು ಜನ ಸೇರಲಿದ್ದಾರೆ?  ನಿರೀಕ್ಷೆಗೂ ಮೀರಿ ಜನ ಬಂದರೆ ಏನು ಮಾಡುತ್ತೀರಿ? ನಿಮಗೆ ನಿಯಂತ್ರಿಸಲು ಆಗದು ಎಂದಾದರೆ ಎರಡೂ ರಸ್ತೆಗಳಲ್ಲಿ ಹೊಸವರ್ಷಾಚರಣೆಗೆ ನಿರ್ಬಂಧ ಹೇರಬಹುದಲ್ಲವೇ ಎಂದು  ಸರ್ಕಾರದ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು.

ಗಾಂಧೀಜಯಂತಿ ಹಾಗೂ ಕೆಲ ಸಂದರ್ಭಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗುತ್ತದೆ. ಅದೇ ರೀತಿ, ಈ ಎರಡೂ ದಿನ ಮದ್ಯಮಾರಾಟ ನಿಷೇಧ ಸಂಬಂಧ ಸರ್ಕಾರ ಚಿಂತನೆ ನಡೆಸಬಹುದಲ್ಲವೇ ಎಂದೂ ನ್ಯಾಯಪೀಠ ಪ್ರಶ್ನಿಸಿತು. ಜೊತೆಗೆ ಈಗಾಗಲೇ ಹೊಸ ವರ್ಷಾಚರಣೆಗೆ ಯಾವ ರೀತಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಪೊಲೀಸ್‌ ಆಯುಕ್ತರು ಅಫಿಡವಿಟ್‌ ಸಲ್ಲಿಸುವಂತೆ ತಾಕೀತು ಮಾಡಿತ್ತು.

ಟಾಪ್ ನ್ಯೂಸ್

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.