ಶಾಸಕನ ವರ್ತನೆಗೆ ಕೋರ್ಟ್ ಕೆಂಡ
Team Udayavani, Mar 16, 2019, 6:33 AM IST
ಬೆಂಗಳೂರು: ನ್ಯಾಯಾಲಯಕ್ಕೆ ನಗುತ್ತಾ ಪ್ರವೇಶಿಸಿದ ಬಿಜೆಪಿ ಶಾಸಕ ಶಿವನಗೌಡ ನಾಯಕ್ ವರ್ತನೆಗೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜರುಗಿತು.
2008 ರಿಂದ 2013ರ ಅವಧಿಯ ಪುಸ್ತಕ ಖರೀದಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಹೇಳಲು ಆಗಮಿಸಿದ್ದ ಶಾಸಕ ಶಿವನಗೌಡ ನಾಯಕ್, ನ್ಯಾಯಾಲಯಕ್ಕೆ ನಗುತ್ತಾ ಆಗಮಿಸಿದರು. ಶಾಸಕರ ಈ ವರ್ತನೆಗೆ ನ್ಯಾಯಾಧೀಶರಾದ ರಾಮಚಂದ್ರ ಡಿ. ಹುದ್ದಾರ್ ಅಸಮಾಧಾನ ವ್ಯಕ್ತಪಡಿಸಿದರು.
‘ನ್ಯಾಯಾಲಯದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಪರಿಜ್ಞಾನ ನಿಮಗಿಲ್ಲವೆ. ಶಾಸಕರಾಗಿ ಹೀಗೆ ಹಗುರವಾಗಿ ನಡೆದುಕೊಳ್ತೀರ? ಪೊಲೀಸ್ ಕಸ್ಟಡಿಗೆ ಒಪ್ಪಿಸಬೇಕೆ?’ ಎಂದು ಶಾಸಕರಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಶಿವನಗೌಡ ಪರ ವಕೀಲರು ಮಧ್ಯಪ್ರವೇಶಿಸಿ, ನ್ಯಾಯಾಧೀಶರ ಕ್ಷಮೆ ಕೋರುವಂತೆ ಸಲಹೆ ನೀಡಿದರು. ಬಳಿಕ ಶಾಸಕರು ತಮ್ಮ ವಕೀಲರ ಮುಖೇನ ಕ್ಷಮಾಪಣೆ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.