ಅಪಾರ್ಟ್‌ಮೆಂಟಲ್ಲಿ ಕಾಣಿಸಿದ ಬಿರುಕು
Team Udayavani, May 29, 2017, 12:49 PM IST
ಬೆಂಗಳೂರು: ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯ ಕಾಡುಬಿಸನಹಳ್ಳಿಯ ಒರಾಕಲ್ ಅಪಾರ್ಟ್‌ಮೆಂಟ್‌ನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ನಿವಾಸಿಗಳಲ್ಲಿ ಆತಂಕ ಉಂಟು ಮಾಡಿದೆ. ಒರಾಕಲ್ ಸಂಸ್ಥೆಗೆ ಸೇರಿದ ಯುಟಿಯೋಪಿಯಾ ಅಪಾರ್ಟ್‌ಮೆಂಟ್‌ನಲ್ಲಿ ಬಿರುಕು ಕಂಡು ಬಂದಿದ್ದು. ನಿವಾಸಿಗಳನ್ನು ಬೇರೆಡೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು 119 ಫ್ಲಾಟ್‌ಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ನೂರಾರು ಮಂದಿ ನೆಲೆಸಿದ್ದಾರೆ. ಇದೀಗ ತಜ್ಞರ ಸಲಹೆ ಮೇರೆಗೆ 80 ಫ್ಲಾಟ್‌ನ ನಿವಾಸಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ನಾರಾಯಣ, ಜಂಟಿ ಆಯುಕ್ತೆ ವಾಸಂತಿ ಅಮರ್ ಹಾಗೂ ಬಿಬಿಎಂಪಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹೆಚ್ಚಿನ ಕಾರ್ಯಾಚರಣೆ ನಡೆಸಲು ಸ್ಥಳಕ್ಕೆ ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಪೊಲೀಸರು ನಿಯೋಜಿಸಲಾಗಿದೆ. ಘಟನೆ ಸಂಬಂಧ ವೈಟ್‌ಫೀಲ್ಡ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪಾರ್ಟ್‌ಮೆಂಟ್ ಪಕ್ಕದಲ್ಲಿ ಸಲಾರ್‌ಪುರಿಯಾ ಕಟ್ಟಡ ನಿರ್ಮಾಣ ಸಂಸ್ಥೆ ಸಾಫ್ಟ್ವೇರ್ ಪಾರ್ಕ್ ನಿರ್ಮಾಣ ಮಾಡುತ್ತಿದ್ದು, ಸುಮಾರು 40 ಅಡಿ ಆಳದ ಗುಂಡಿ ತೋಡಿದ್ದಾರೆ.
ಕಾಮಗಾರಿ ವೇಳೆ ಕಲ್ಲು ಹೊಡೆಯಲು ಡೈನಮೈಟ್‌ಗಳನ್ನು ಬಳಸಲಾಗಿದೆ. ಈ ಸಂಬಂಧ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಶನಿವಾರ ರಾತ್ರಿ ಸುರಿದ ಬಾರಿ ಮಳೆಗೆ ತಡೆ ಗೋಡೆ ಕುಸಿದಿದ್ದು, ಅಪಾರ್ಟ್‌ಮೆಂಟ್‌ನ ಗೋಡೆಗಳು ಬಿರುಕು ಬಿಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.