ಕೈ ಶಾಸಕರ ರಕ್ಷಣೆ ಅನಿವಾರ್ಯವಾಗಿತ್ತು
Team Udayavani, Jul 31, 2017, 6:20 AM IST
ಬೆಂಗಳೂರು: ಗುಜರಾತ್‌ನ ಕಾಂಗ್ರೆಸ್ ಶಾಸಕರನ್ನು ತಮ್ಮತ್ತ ಸೆಳೆದುಕೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ತಲಾ 10 ಕೋಟಿ ರೂ. ಆಮಿಷ ಒಡ್ಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದರು.
ನಗರದ ಅರಮನೆ ಮೈದಾನದಲ್ಲಿ ಕರ್ನಾಟಕ ನಾಡರ್ ಸಂಘದಿಂದ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗುಜರಾತ್‌ನಲ್ಲಿ ಕಾಂಗ್ರೆಸ್ ಶಾಸಕರನ್ನು ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿದ್ದರಿಂದ ಕರ್ನಾಟಕಕ್ಕೆ ಕರೆ ತಂದಿದ್ದೇವೆ. 40 ಶಾಸಕರು ಈಗಾಗಲೇ ಬಂದಿದ್ದು, ಕಾರಣಾಂತರಗಳಿಂದ ಮೂವರು ಶಾಸಕರು ಬಂದಿಲ್ಲ. ಕಾಂಗ್ರೆಸ್ ಶಾಸಕರನ್ನು ಬಿಜೆಪಿಯತ್ತ ಸೆಳೆದುಕೊಳ್ಳಲು ಅಮಿತ್ ಶಾ ತಲಾ 10 ಕೋಟಿ ರೂ. ಆಫರ್ ಮಾಡಿದ್ದಾರೆ.
ಹೀಗಾಗಿ, ಕಾಂಗ್ರೆಸ್ ಶಾಸಕರನ್ನು ರಕ್ಷಿಸುವುದು ಅನಿವಾರ್ಯವಾಗಿದೆ ಎಂದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಗುಜರಾತ್‌ನ ಪ್ರಭಾವಿ ಮುಖಂಡ ಅಹ್ಮದ್ ಪಟೇಲ್ ಅವರನ್ನು ರಾಜ್ಯಸಭಾ ಚುನಾವಣೆಯಲ್ಲಿ ಸೋಲಿಸಲೇ ಬೇಕು ಎಂಬುದೇ ಅಮಿತ್ ಶಾ ಅವರ ಸಿಂಗಲ್ ಅಜೆಂಡವಾಗಿದೆ. ಈ ಹಿನ್ನೆಲೆಯಲ್ಲಿ ಗುಜರಾತ್‌ನ ಕಾಂಗ್ರೆಸ್ ಶಾಸಕರಿಗೆ ಹಲವು ರೀತಿಯ ಆಮಿಷ ಒಡ್ಡಿ, ಖರೀದಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಯೊಬ್ಬ ಶಾಸಕರಿಗೂ ತಲಾ 10 ಕೋಟಿ ರೂ.ನೀಡುವುದಾಗಿ ಆಸೆ ತೋರಿಸಿದ್ದಾರೆ ಎಂದು ದೂರಿದರು.
ಬಿಜೆಪಿ ನಾಯಕರು ವಿನಾಃ ಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್‌ನ ಎಲ್ಲಾ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಗುಜರಾತ್‌ನಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಖಚಿತವಾಗಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.