ಅಕ್ರಮ ಗಣಿಗಾರಿಕೆ ಸ್ಥಗಿತಗೊಳಿಸಲು ಆಗ್ರಹ
Team Udayavani, Sep 27, 2018, 12:27 PM IST
ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನ ಉಲ್ಲಂಘಿಸಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸೂಕ್ಷ್ಮ ವಲಯದಲ್ಲಿ ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಲಾಗಿದ್ದು, ಕೂಡಲೇ ಸ್ಥಗಿತಗೊಳಿಸಬೇಕು ಎಂದು ಯುನೈಟೆಡ್ ಬೆಂಗಳೂರು ಆಗ್ರಹಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾತಂತ್ರ್ಯ ಹೋರಾಟಗಾರ ಡಾ.ಎಚ್.ಎಸ್.ದೊರೆಸ್ವಾಮಿ, ರಾಷ್ಟ್ರೀಯ ಉದ್ಯಾನವನದ 10 ಕಿ.ಮೀ. ಸುತ್ತ ಮುತ್ತಲಿನ ಪ್ರದೇಶದಲ್ಲಿ ಯಾವುದೇ ಗಣಿಗಾರಿಕೆ ಹಾಗೂ ರಸ್ತೆ ವಿಸ್ತರಣೆಯಂತಹ ಕಾರ್ಯಗಳನ್ನು ಕೈಗೊಳ್ಳಬಾರದು ಎಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಆದರೆ ಈ ನಿರ್ದೇಶನಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ.
ಇದಕ್ಕೆ ಅಧಿಕಾರಿಗಳು ಬೆಂಬಲ ನೀಡುತ್ತಿರುವುದು ವಿಪರ್ಯಾಸ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಷ್ಟ್ರೀಯ ಉದ್ಯಾನವನಗಳ ಸಂರಕ್ಷಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬೆಂಗಳೂರಿಗೆ ಸಮೀಪವಾಗಿರುವ ಬನ್ನೇರುಘಟ್ಟದಲ್ಲಿ ರಾಷ್ಟ್ರೀಯ ಉದ್ಯಾನವನದಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಇದರಿಂದಾಗಿ ಪ್ರಾಣಿಗಳಿಗೆ ತೊಂದರೆ
ಯಾಗುತ್ತಿದೆ. ಆದರೂ ಅರಣ್ಯ ಇಲಾಖೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
ಯುನೈಟೆಡ್ ಬೆಂಗಳೂರು ಸಂಸ್ಥೆಯ ಸಂಚಾಲಕ ಸುರೇಶ್ ಮಾತನಾಡಿ, ಗಣಿಗಾರಿಕೆ ಅವಶೇಷಗಳನ್ನು ಕಂಪನಿಗಳು ಹಳ್ಳಕೊಳ್ಳಗಳಲ್ಲಿ ಎಸೆಯುತ್ತಿವೆ. ಸ್ಫೋಟಕ ಬಳಸುವುದರಿಂದ ವನ್ಯ ಜೀವಿಗಳ ಸಹಜ ಓಡಟಕ್ಕೂ ತೊಂದರೆ ಯಾಗಿದೆ.
ಬಫರ್ ಝೋನ್‌ನ ಸುತ್ತ ರುವ ಗ್ರಾಮಗಳಲ್ಲಿ ಕೃಷಿಗೂ ಗಣಿಕಾರಿಕೆ ತೊಡಕುಂಟು ಮಾಡುತ್ತಿದೆ. ಇದು ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಆದರೂ ಅಧಿಕಾರಿಗಳು ಏನೂ ನಡೆಯುತ್ತಿಲ್ಲ ಎಂಬ ಹೇಳಿಕೆ ನೀಡುತ್ತಿದಾರೆ. ಈ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಈ ಕುರಿತಂತೆ ಚರ್ಚಿಸಲು ಸೆ.29ರಂದು ಬೆಳಗ್ಗೆ 10 ಗಂಟೆಗೆ ಇಂದಿರಾನಗರದ ಕ್ಲಬ್‌ನಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.