ಹುತಾತ್ಮ ಯೋಧರ ಭಾವುಕ ಸ್ಮರಣೆ
Team Udayavani, Jul 27, 2019, 7:30 AM IST
ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಬಿ.ಎಸ್. ಯಡಿಯೂರಪ್ಪ ಅವರು ನಗರದಲ್ಲಿನ ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬೆಂಗಳೂರು: ಯೋಧರ ತ್ಯಾಗ ಬಲಿದಾನ ಸ್ಮರಣೆಯ ಮೂಲಕ ಶುಕ್ರವಾರ ರಾಜಧಾನಿಯ ಹಲವೆಡೆ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
ಪಾಕಿಸ್ತಾನದ ವಿರುದ್ಧ ಭಾರತದ ಸೈನಿಕರು ಹೋರಾಟ ನಡೆಸಿ ತಮ್ಮ ತ್ಯಾಗ ಬಲಿದಾನದ ಮೂಲಕ ಭಾರತಕ್ಕೆ ಜಯ ತಂದುಕೊಟ್ಟರು. ಆ ವೀರ ಯೋಧರಿಗೆ ನಮನ ಸಲ್ಲಿಸಲು ಪ್ರತಿ ವರ್ಷ ಜುಲೈ 26 ಅನ್ನು ಪ್ರತಿ ವರ್ಷ ಕಾರ್ಗಿಲ್ ವಿಜಯ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಬಾರಿಯದ್ದು 20ನೇ ಕಾರ್ಗಿಲ್ ವಿಜಯ ದಿವಸ ಸಂಭ್ರಮವಾಗಿದ್ದು, ನಗರದ ವಿವಿಧ ಸೇನಾ ಸ್ಥಳಗಳು, ಶಾಲಾ ಕಾಲೇಜುಗಳು, ಕಚೇರಿಗಳಲ್ಲಿ ಹುತಾತ್ಮ ಯೋಧರು ಹಾಗೂ ಯುದ್ಧದಲ್ಲಿ ಭಾಗವಹಿಸಿದ್ದ ಎಲ್ಲಾ ಸೇನಾನಿಗಳಿಗೂ ನಮನ ಸಲ್ಲಿಸಲಾಯಿತು.
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಗರದ ಇಂದಿರಾಗಾಂಧಿ ಸಂಗೀತ ಕಾರಂಜಿ ಉದ್ಯಾನದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉದ್ಯಾನದ ಸೇನಾ ಸ್ಮಾರಕಕ್ಕೆ ಮಾಜಿ ಸೈನಿಕರು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಮಕ್ಕಳು ಪುಪ್ಪ ನಮನ ಸಲ್ಲಿಸಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ನಗರ ಪೊಲೀಸ್ ಕಮಿಷನರ್ ಅಲೋಕ್ ಕುರ್ಮಾ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಸಿಂಗ್ ಹಾಗೂ ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ವೇಳೆ ಅಲೋಕ್ ಕುಮಾರ್ ಮಾತನಾಡಿ, ನಮ್ಮ ಸೈನಿಕರು 20 ವರ್ಷದ ಹಿಂದೆ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದರು. ಇದರಿಂದಾಗಿ ಕಾರ್ಗಿಲ್ ಯುದ್ಧದಲ್ಲಿ ಭಾರತ ಜಯ ಗಳಿಸಿತು. ಈ ಯುದ್ಧದಲ್ಲಿ 500ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದು, ಅವರ ಧೈರ್ಯ, ಸಾಹಸದ ಹೋರಾಟಕ್ಕೆ ಅನಂತ ನಮನಗಳು ಎಂದರು.
ನಿವೃತ್ತ ಅಧಿಕಾರಿ ಕರ್ನಲ್ ರಾಜನ್ ಮಾತನಾಡಿ, ಭಾರತದ ಪಾಲಿಗೆ ಜು.26 ಐತಿಹಾಸಿಕ ದಿನ. ಒಟ್ಟು 83 ದಿನಗಳು ನಡೆದ ಯುದ್ಧದಲ್ಲಿ ನಮ್ಮೆಲ್ಲಾ ಸೈನಿಕರು ಎದೆಗುಂದದೆ ಹೋರಾಟ ನಡೆಸಿ ಪಾಕಿಸ್ತಾನಿಗಳನ್ನು ಕಾರ್ಗಿಲ್ ಪ್ರದೇಶದಿಂದ ಓಡಿಸಿದರು. ಇನ್ನು ಈ ಯುದ್ಧದಲ್ಲಿ ಹಲವು ಯೋಧರನ್ನು ನಾವು ಕಳೆದುಕೊಳ್ಳಬೇಕಾಯಿತು. ಇಂದಿಗೂ ಲಕ್ಷಾಂತರ ಯೋಧರು ದೇಶದ ಗಡಿ ಕಾಯುತ್ತಿದ್ದಾರೆ. ಪ್ರತಿಯೊಬ್ಬರೂ ಯೋಧರಿಗೆ ಗೌರವ ಸಲ್ಲಿಸಬೇಕು ಎಂದರು.
ಮಾಜಿ ಸೈನಿಕರು ಹಾಗೂ ಹುತಾತ್ಮಯೋಧರ ಕುಟುಂಬದ ಸದಸ್ಯರು ಕಾರ್ಗಿಲ್ ಯುದ್ಧದ ದಿನಗಳನ್ನು ನೆನಪಿಸಿಕೊಂಡು ಭಾವುಕರಾದರು. ಭೂಸೇನೆ, ವಾಯುಸೇನೆ ಹಾಗೂ ನೌಕಾ ಸೇನೆಯ ರಾಜ್ಯ ಶಾಖೆಯ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಮಿಲಿಟರಿ ಸ್ಮಾರಕಕ್ಕೆ ಗೌರವ ಸೂಚಿಸಿದರು.
ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಗಿರಿನಗರ ಶಾಂತಿನಿಕೇತನ ಫೌಂಡೇಶನ್ ಸ್ಕೂಲ್ನ ವಿದ್ಯಾರ್ಥಿಗಳಿಂದ ನಗರದ ಬ್ರಿಗೇಡ್ ರಸ್ತೆಯ ‘ದ ಗ್ರೇಟ್ ವಾರ್’ ಸ್ಮಾರಕದ ಎದುರು ವಿದ್ಯಾರ್ಥಿಗಳು ದೇಶಕ್ಕಾಗಿ ಹುತಾತ್ಮರಾದವರ ಪ್ರತಿಯೊಂದು ಕ್ಷಣವನ್ನು ನಾಟಕದ ಮೂಲಕ ಪ್ರದರ್ಶಿಸಿದರು. ಈ ಮೂಲಕ 20 ವರ್ಷಗಳ ಹಿಂದೆ ಕಾರ್ಗಿಲ್ ಯುದ್ದದಲ್ಲಿ ಯೋಧರು ಹೋರಾಡಿರುವ ಸನ್ನಿವೇಶವನ್ನು ಪ್ರೇಕ್ಷಕರ ಕಣ್ಣೆದುರು ತಂದುಕೊಟ್ಟು, ಯೋಧರ ದೇಶಪ್ರೇಮದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಬಳಿಕ ಸಹಿ ಸಂಗ್ರಹ, ರಾಷ್ಟ್ರಧ್ವಜ ಹಾಗೂ ಯೋಧರ ಭಾವಚಿತ್ರಗಳಿಗೆ ನಮನಸಲ್ಲಿಸಿ ವಿಜಯೋತ್ಸವದ ಘೋಷಣೆ ಕೂಗಿದರು.
ಈ ವೇಳೆ ಫೌಂಡೇಶನ್‌ನ ಉಪಾಧ್ಯಕ್ಷ ಸುಮಂತ್ ನಾರಾಯಣ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕಾರ್ಗಿಲ್ ವಿಜಯ್ ದಿನವನ್ನು ಆಚರಿಸಿಕೊಂಡು ಬರುತ್ತಿದ್ದು, ಈ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ. ಯೋಧರು ಭಾರತದ ಗಡಿ ಕಾಯುತ್ತಿರುವುದರಿಂದಲೇ ದೇಶದೊಳಗೆ ನಾವೆಲ್ಲ ನೆಮ್ಮದಿ ಹಾಗೂ ಭದ್ರತೆಯಿಂದ ಜೀವನ ನಡೆಸಲು ಸಾಧ್ಯವಾಗಿದೆ. ಹೀಗಾಗಿ, ಅವರನ್ನು ಸ್ಮರಿಸುವುದು, ಅವರಿಗೆ ಬೆಂಬಲ ಸೂಚಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇನ್ನು ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಫೌಂಡೇಶನ್ ವತಿಯಿಂದ ಹಾರೈಸುತ್ತೇವೆ ಎಂದು ತಿಳಿಸಿದರು. ನೂರಾರು ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.