Bangalore: ಕೆಲಸಕ್ಕಿದ್ದ ಕಂಪನಿಯಲ್ಲೇ ಲ್ಯಾಪ್ಟಾಪ್ ಕದ್ದ ನೌಕರರು
Team Udayavani, Mar 13, 2024, 9:37 AM IST
ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಲ್ಯಾಪ್ಟಾಪ್ ಹಾಗೂ ಕ್ರೋಮ್ ಬಾಕ್ಸ್ಗಳನ್ನು ಕಳವು ಮಾಡಿದ್ದ ಸಂಸ್ಥೆಯ ಇಬ್ಬರು ನೌಕರರು ಸೇರಿ ಐವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ದರ್ಶನ್, ಸುಜಯ್, ಕಾರ್ತಿಕ್, ಶಶಿಕುಮಾರ್ ಅಲಿಯಾಸ್ ಶಶಿ, ನಿಲೇಶ್ ಬಂಧಿತರು. ಆರೋಪಿಗಳಿಂದ 16 ಲಕ್ಷ ರೂ. ಮೌಲ್ಯದ 29 ವಿವಿಧ ಕಂಪನಿಯ ಲ್ಯಾಪ್ಟಾಪ್, 59 ಕ್ರೋಮ್ ಬಾಕ್ಸ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕುಮಾರಸ್ವಾಮಿ ಲೇಔಟ್ನ ನ್ಯೂ ಜೈಸಾ ಟೆಕ್ನಾಲಜಿಸ್ ಕಂಪನಿಯಲ್ಲಿ ಹಲವಾರು ದಿನಗಳಿಂದ ಲ್ಯಾಪ್ಟಾಪ್ ಹಾಗೂ ಕ್ರೋಮ್ ಬಾಕ್ಸಗಳು ಕಳ್ಳತನವಾಗುತ್ತಿತ್ತು. ಕಂಪನಿಯ ಮ್ಯಾನೇಜರ್ ಈ ಬಗ್ಗೆ ಕೆಎಸ್ ಲೇಔಟ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಲ್ಯಾಪ್ ಟಾಪ್ ರಿಪೇರಿ ಮಾಡುವ ಕೆಲಸ ಮಾಡುತ್ತಿದ್ದ ಆರೋಪಿ ಕಾರ್ತಿಕ್ ಹಾಗೂ ಸುಜಯ್ ಲ್ಯಾಪ್ಟಾಪ್ ತೆಗೆದುಕೊಂಡು ಕಾರ್ತಿಕ್ಗೆ ಕೊಟ್ಟಿದ್ದರು. ಕದ್ದ ಲ್ಯಾಪ್ ಟಾಪ್ ಅನ್ನು ಐವರು ಸೇರಿ ಮಾರಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.