ಹೆಣ್ಮಕ್ಕಳ  ಪ್ರೋತ್ಸಾಹಧನ ಸದ್ದಿಲ್ಲದೇ ಸ್ತಬ್ಧ


Team Udayavani, Nov 20, 2017, 6:00 AM IST

girls-school-government.jpg

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಹೆಣ್ಮಕ್ಕಳ ಹಾಜರಾತಿಯನ್ನು ಕಾಯ್ದುಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ “2ರೂ. ಪ್ರೋತ್ಸಾಹಧನ ಯೋಜನೆ’ ಸದ್ದಿಲ್ಲದೇ ಸ್ತಬ್ಧಗೊಂಡಿದೆ.

ವಿದ್ಯಾಭ್ಯಾಸದಿಂದ ದೂರ ಉಳಿವ ಹೆಣ್ಣು ಮಕ್ಕಳನ್ನು ಸರ್ಕಾರಿ ಶಾಲೆಗೆ ಆಕರ್ಷಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ತಕ್ಷಣದ ಬಜೆಟ್‌ನಲ್ಲಿ ಘೋಷಿಸಿದ್ದ ಈ ಯೋಜನೆ ಇದೀಗ ಅನುದಾನದ ಕೊರತೆಯಿಂದ ಹಳ್ಳ ಹಿಡಿದಿದೆ.

ಯೋಜನೆಯ ಆರಂಭದ ವರ್ಷಗಳಲ್ಲಿ ಸರ್ಕಾರ ಅನುದಾನ ನೀಡಿದ ತಕ್ಷಣವೇ ಬಿಇಒಗಳ ಮೂಲಕ ಶಾಲಾ ಶಿಕ್ಷಕರು ಹೆಣ್ಣು ಮಕ್ಕಳಿಗೆ ಚೆಕ್‌ ವಿತರಿಸಿದ್ದರು. 2014-15 ಮತ್ತು 2015-16ರಲ್ಲೂ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಸಮರ್ಪಕವಾಗಿ ಹಂಚಿಕೆ ಮಾಡದಿದ್ದರೂ, ತಕ್ಕಮಟ್ಟಿಗೆ ವಿತರಣೆಯಾಗಿದೆ. ಆದರೆ, 2016-17 ಮತ್ತು 2017-18ನೇ ಸಾಲಿನಲ್ಲಿ ಒಂದನೇ ತರಗತಿಗೆ ಸೇರಿದ ಹೆಣ್ಣುಮಕ್ಕಳಿಗೆ ನಯಾಪೈಸೆ ನೀಡಿಲ್ಲ.

ಸರ್ಕಾರ ಅನುದಾನ ನೀಡದೇ ಇರುವುದರಿಂದ ಇಲಾಖೆಯ ಅಧಿಕಾರಿಗಳು ಯೋಜನೆಯನ್ನೇ ರದ್ದು ಮಾಡಿದ್ದಾರೆ. 2017-18ನೇ ಸಾಲಿನಿಂದ ಈ ಯೋಜನೆ ಜಾರಿಯಲ್ಲಿ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳೇ “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಮತ್ತೂಂದೆಡೆ, 2013ರಿಂದ 2015ರವೆರೆಗೆ ಯೋಜನೆ ಸಮರ್ಪಕವಾಗಿ ನಡೆದಿದ್ದರೂ, ಹಲವು ಜಿಲ್ಲೆಗಳಲ್ಲಿ ಶಾಲಾ ಮುಖ್ಯಶಿಕ್ಷಕರು ಹೆಣ್ಣು ಮಕ್ಕಳಿಗೆ ನೀಡಬೇಕಾದ ಪ್ರೋತ್ಸಾಹ ಧನವನ್ನು ತಮ್ಮ ಖಾತೆಯಲ್ಲಿ ಇಟ್ಟುಕೊಂಡಿರುವುದು ಲೋಕಾಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನೀಡಿರುವ ವರದಿಯಲ್ಲಿ ಬಹಿರಂಗೊಂಡಿದೆ. ಈ ಮಧ್ಯೆ, ಕುಂಟುತ್ತಾ ಸಾಗುತ್ತಿದ್ದ ಪ್ರೋತ್ಸಾಹ ಧನ ಯೋಜನೆಗೆ 2016ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡುವ ಗೋಜಿಗೆ ಹೋಗಿಲ್ಲ. 2017ರ ಮಾರ್ಚ್‌ ವೇಳೆಗೆ ಎಲ್ಲಾ ಜಿಲ್ಲೆಗಳಿಗೆ ಅನುದಾನ ಬಿಡುಗಡೆಯಾಗಬೇಕಿತ್ತು. 2017-18ರ ಶೈಕ್ಷಣಿಕ ವರ್ಷ ಆರಂಭವಾಗಿ ಆರು ತಿಂಗಳಾದರೂ ಅನುದಾನ ಬಂದಿಲ್ಲ. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಯೋಜನೆಯನ್ನು ಮುಂದುವರಿಸದೇ ಇರಲು ಇಲಾಖೆಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ಪ್ರತಿವರ್ಷ ಲಕ್ಷಾಂತರ ಹೆಣ್ಣುಮಕ್ಕಳು ಪ್ರೋತ್ಸಾಹ ಧನದಿಂದ ವಂಚಿತರಾಗುತ್ತಿದ್ದರು. ಇನ್ನೂ ಹಲವು ಜಿಲ್ಲೆಗಳಲ್ಲಿ ಸರ್ಕಾರ ಬಿಡುಗಡೆಗೊಳಿಸಿದ ಅನುದಾನವನ್ನು ಶಾಲೆಯ ಮುಖ್ಯ ಶಿಕ್ಷಕರು ತಮ್ಮ ಬ್ಯಾಂಕ್‌ ಖಾತೆಯಲ್ಲಿ ಇಟ್ಟುಕೊಂಡು ಕಾಲ ದೂಡುತ್ತಿದ್ದರು.

ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು:
ಕೆಲ ಜಿಲ್ಲೆಗಳಲ್ಲಿ ಹೆಣ್ಣುಮಕ್ಕಳಿಗೆ ಪ್ರೋತ್ಸಾಹಧನ ವಿತರಿಸದೇ ಇರುವ ಬಗ್ಗೆ “ಉದಯವಾಣಿ’ 2017ರ ಏ.17ರಂದು ವಿಶೇಷ ವರದಿ ಪ್ರಕಟಿಸಿತ್ತು. ಪರಿಣಾಮ ಲೋಕಾಯಕ್ತ ಪಿ. ವಿಶ್ವನಾಥ ಶೆಟ್ಟಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಹೆಣ್ಣುಮಕ್ಕಳಿಗೆ ಪ್ರೋತ್ಸಾಹ ಧನ ನೀಡದೇ ಬಾಕಿ ಉಳಿಸಿಕೊಂಡಿರುವ ಸಂಬಂಧ ವರದಿ ನೀಡುವಂತೆ ಸೂಚನೆ ನೀಡಿದ್ದರು. ಲೋಕಾಯುಕ್ತರಿಗೆ ಸಲ್ಲಿಕೆಯಾಗಿರುವ ವರದಿಯಲ್ಲಿ ಕೆಲ ಜಿಲ್ಲೆಗಳಲ್ಲಿ ಅನುದಾನ ಬಿಡುಗಡೆಯಾದರೂ ಹೆಣ್ಣುಮಕ್ಕಳಿಗೆ ನೀಡದೇ ಇರುವ ಸಂಗತಿ ಬೆಳಕಿಗೆ ಬಂದಿದೆ.

ಹಣ ಬಳಕೆಯಾಗಿಲ್ಲ: ರಾಜ್ಯದ 26 ಜಿಲ್ಲೆಗಳಿಂದ ಶಿಕ್ಷಣ ಇಲಾಖೆಯು ರಾಜ್ಯ ಲೋಕಾಯುಕ್ತರಿಗೆ ವರದಿ ಸಲ್ಲಿಸಿದೆ. ಹಾವೇರಿ ಜಿಲ್ಲೆಯಲ್ಲಿ 2014-15ನೇ ಸಾಲಿನ ವರೆಗೆ ಸರ್ಕಾರದಿಂದ ಬಿಡುಗಡೆಗೊಂಡ 43,40,250 ರೂ.ಗಳಲ್ಲಿ ನಯಾಪೈಸೆ ಬಳಕೆಯಾಗಿಲ್ಲ. 2015-16ನೇ ಸಾಲಿನಲ್ಲಿ ಬಿಡುಗಡೆಗೊಂಡ 42,55,200 ರೂ.ಗಳನ್ನು ಹೆಣ್ಣುಮಕ್ಕಳಿಗೆ ಹಂಚಿಕೆ ಮಾಡಿಲ್ಲ. ಪರಿಣಾಮ 9 ಸಾವಿರಕ್ಕೂ ಅಧಿಕ  ಮಂದಿ 1ನೇ ತರಗತಿಗೆ ದಾಖಲಾಗಿದ್ದ ಹೆಣ್ಣುಮಕ್ಕಳು ಪ್ರೋತ್ಸಾಹಧನದಿಂದ ವಂಚಿತರಾಗಿದ್ದಾರೆ. ಸದ್ಭಳಕೆಯಾಗದ ಅನುದಾನವನ್ನು ಸರ್ಕಾರಕ್ಕೆ ಹಿಂತಿರುಗಿಸುವ ಗೋಜಿಗೂ ಕೆಲವು ಜಿಲ್ಲೆಯ ಅಧಿಕಾರಿಗಳು ಮುಂದಾಗಿಲ್ಲ.

ಪ್ರೋತ್ಸಾಹಧನ ನೀಡಿಲ್ಲ: ಬೆಂಗಳೂರು ಉತ್ತರ ತಾಲೂಕಿನಲ್ಲಿ 2014 -15ನೇ ಸಾಲಿನಲ್ಲಿ ಬಿಡುಗಡೆಯಾದ 18,85,950  ರೂ. ಅನುದಾನ ಸದ್ಬಳಕೆ ಮಾಡಿಕೊಂಡಿಲ್ಲ. ಪರಿಣಾಮ  ಆ ವರ್ಷ 4191 ವಿದ್ಯಾರ್ಥಿನಿಯರಿಗೆ ಯೋಜನೆ ಲಾಭ ಸಿಕ್ಕಿಲ್ಲ. ಸೋಜಿಗದ ಸಂಗತಿಯೆಂದರೆ ಬಳಕೆಯಾಗದ ಅನುದಾನವನ್ನು 2015-16ನೇ ಸಾಲಿನಲ್ಲಿ ದಾಖಲಾದ ವಿದ್ಯಾರ್ಥಿನಿಯರಿಗೆ ಹಂಚಿಕೆ ಮಾಡಿ ಅಧಿಕಾರಿಗಳು ಜಾಣ್ಮೆ ಮೆರೆದಿದ್ದಾರೆ. ಲೋಕಾಯುಕ್ತರ ನೋಟಿಸ್‌ ಬಳಿಕ ಎಲ್ಲಾ ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ವರದಿಯನ್ನು ಸಲ್ಲಿಸಿದರೂ, ಇದುವರೆಗೂ ಯಾದಗಿರಿ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಲೋಕಾಯುಕ್ತರಿಗೆ ವರದಿ ಸಲ್ಲಿಕೆಯಾಗಿಲ್ಲ. ಹೀಗಾಗಿ ತಕ್ಷಣ ವರದಿ ನೀಡುವಂತೆ ಲೋಕಾಯುಕ್ತರು ನಾಲ್ಕು ಜಿಲ್ಲೆಗಳ ಜಿಲ್ಲಾ ಶಿಕ್ಷಣ ಆಯುಕ್ತರುಗಳಿಗೆ ನೋಟಿಸ್‌  ಜಾರಿಗೊಳಿಸಿದ್ದಾರೆ.

ಉಳಿಕೆ ಅನುದಾನ
ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಮತ್ತು ಹಾಜರಾತಿ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಉಳಿಕೆಯಾಗಿದ ಅನುದಾನವನ್ನು ವಾಪಾಸ್‌ ಸರ್ಕಾರಕ್ಕೆ ನೀಡಿಲ್ಲ. ಬಳ್ಳಾರಿಯಲ್ಲಿ 3,80,306 ರೂ., ರಾಯಚೂರಿನಲ್ಲಿ 10,44,084 ರೂ., ಬೆಳಗಾವಿಯಲ್ಲಿ 29,410 ರೂ. ಚಿಕ್ಕಮಗಳೂರಿನಲ್ಲಿ 27,703 ರೂ. ಬೆಂ.ಗ್ರಾಮಾಂತರ 1,34,550 ರೂ., ಗದಗದಲ್ಲಿ 2,85,750, ಕೊಡಗಿನಲ್ಲಿ 41,994, ಉಡುಪಿಯಲ್ಲಿ 1,64,073, ರಾಮನಗರದಲ್ಲಿ 2,957 ರೂ. ಮೊದಲಾದ ಜಿಲ್ಲೆಗಳು ಅನುದಾನವನ್ನು ತಮ್ಮಲ್ಲೇ ಉಳಿಸಿಕೊಂಡಿದೆ. ಮಂಡ್ಯ, ವಿಜಯಪುರ, ಮೈಸೂರು, ದಾವಣಗೆರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮೊದಲಾದ ಜಿಲ್ಲೆಗಳು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಹಂಚಿಕೆಯ ನಂತರ ಉಳಿದ ಹಣವನ್ನು ಹಲವು ಜಿಲ್ಲೆಗಳಿಂದ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ

ಯೋಜನೆಯ ಉದ್ದೇಶವೇನು?
ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಗೆ ಹೆಣ್ಣು ಮಕ್ಕಳ ದಾಖಲಾತಿ ಮತ್ತು ಹಾಜರಾತಿ ಉತ್ತೇಜಿಸಲು ಪ್ರತಿ ದಿನದ ಹಾಜರಾತಿಗೆ 2 ರೂ. ಪ್ರೋತ್ಸಾಹಧನ(ಹೆಣ್ಣು ಮಕ್ಕಳಿಗೆ ಮಾತ್ರ) ನೀಡುವ ಯೋಜನೆಗೆ ರಾಜ್ಯದ ವಿವಿಧ ಭಾಗದಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಶಾಲಾ ಮುಖ್ಯಶಿಕ್ಷಕರ ಮೂಲಕ ವಿದ್ಯಾರ್ಥಿಗಳ ಅಥವಾ ಅವರ ಹೆತ್ತವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಬೇಕಾದ ವ್ಯವಸ್ಥೆಯನ್ನು ರೂಪಿಸಿದ್ದರು.

ಒಂದನೇ ತರಗತಿಗೆ ಹೆಣ್ಮಕ್ಕಳ ಹಾಜರಾತಿ:
ವರ್ಷ           ಸಂಖ್ಯೆ
2013  -14         4,19,450
2014-15         4,10,733
2015-16         3,95,597
2016-17         2,34,526
2017-18         2,00000(ಅಂದಾಜು)

ಕಳೆದ ಸಾಲಿನ ಹಣ ಇನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನಿಂದ ಒಂದನೇ ತರಗತಿಗೆ  ಹೆಣ್ಣುಮಕ್ಕಳ ಹಾಜರಾತಿಗೆ ನೀಡುವ ಎರಡು ರೂಪಾಯಿ ಪ್ರೋತ್ಸಾಹ ಧನ ಯೋಜನೆಯನ್ನು ನಿಲ್ಲಿಸಿದ್ದೇವೆ.   
-ಬಿ.ಕೆ.ಬಸವರಾಜು, ನಿರ್ದೇಶಕ ಪ್ರಾಥಮಿಕ ಶಿಕ್ಷಣ

ಮುಖ್ಯಶಿಕ್ಷಕರ ಕರ್ತವ್ಯ ಲೋಪ ತೋರಿಸುತ್ತದೆ. ಈಗಾಗಲೇ ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಿಂದ ವರದಿ ಬಂದಿದೆ.ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗೊಂದಿಗೆ ಚರ್ಚಿಸಿ, ಅನುದಾನ ದುರ್ಬಳಕೆ ಸಾಬೀತಾದರೆ ತನಿಖೆಗೆ ಆದೇಶಿಸಲಾಗುವುದು.
– ನ್ಯಾ. ಪಿ.ವಿಶ್ವನಾಥ ಶೆಟ್ಟಿ, ಲೋಕಾಯುಕ್ತ

ಅನೇಕರು ಗಂಡುಮಕ್ಕಳನ್ನು ಖಾಸಗಿ ಹಾಗೂ ಹೆಣ್ಣು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಾರೆ. ಗ್ರಾಮೀಣ ಭಾಗದಲ್ಲಿ ಅಸಮಾನತೆ ನಿವಾರಣೆಗೆ ಪ್ರೋತ್ಸಾಹಧನ ಯೋಜನೆ ಅತಿ ಮುಖ್ಯ. ಹೆಣ್ಮಕ್ಕಳಿಗೆ ಶಿಕ್ಷಣ ನೀಡಲು ಇನ್ನಷ್ಟು ಯೋಜನೆಯನ್ನು ಸರ್ಕಾರ ನೀಡಬೇಕೇ ವಿನಃ ಇರುವ ಯೋಜನೆ  ರದ್ದು ಮಾಡುವುದು ಸರಿಯಲ್ಲ.
 -ಡಾ.ವಿ.ಪಿ.ನಿರಂಜನಾರಾಧ್ಯ, ಶಿಕ್ಷಣ ತಜ್ಞ

– ಮಂಜುನಾಥ್‌ ಲಘುಮೇನಳ್ಳಿ/ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.