ಚಟುವಟಿಕೆಯ ನೆಲೆಯಲ್ಲೂ ಅಂತಿಮ ನಮನ
Team Udayavani, Nov 14, 2018, 11:52 AM IST
ಬೆಂಗಳೂರು: ಅವಕಾಶ, ಸಂದರ್ಭ ಸಿಕ್ಕಾಗಲೆಲ್ಲಾ, ಪ್ರಧಾನಿ ಆದಿಯಾಗಿ ರಾಷ್ಟ್ರೀಯ ನಾಯಕರನ್ನು ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನಕ್ಕೆ ಕರೆಸಿ ಸಾರ್ವಜನಿಕ ಸಭೆ ಆಯೋಜಿಸಿ ಕ್ರಿಯಾಶೀಲವಾಗಿ ಓಡಾಡುತ್ತಿದ್ದ ಬಿಜೆಪಿ ಹಿರಿಯ ನಾಯಕ ಎಚ್.ಎನ್.ಅನಂತಕುಮಾರ್ ಮಂಗಳವಾರ ಅದೇ ಮೈದಾನದಲ್ಲಿ ಚಿರನಿದ್ರೆಗೆ ಜಾರಿದ ದೃಶ್ಯ ಮನಕಲಕುವಂತಿತ್ತು.
ಸೋಮವಾರ ವಿಧಿವಶರಾದ ಅನಂತ ಕುಮಾರ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಗ್ಗೆ 10.50ರ ಹೊತ್ತಿಗೆ ನ್ಯಾಷನಲ್ ಹೈಸ್ಕೂಲ್ ಮೈದಾನಕ್ಕೆ ಸೇನಾ ವಾಹನದಲ್ಲಿ ಮೆರವಣಿಗೆಯಲ್ಲಿ ತಂದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಸರತಿ ಸಾಲಿನಲ್ಲಿ ಕಾದಿದ್ದ ಸಾರ್ವಜನಿಕರು ಅಗಲಿದ ನಾಯಕನ ಅಂತಿಮ ದರ್ಶನ ಪಡೆದರು. ನೂರಾರು ಶಾಲಾ ಮಕ್ಕಳು ವಿದ್ಯಾರ್ಥಿಗಳು ತಂಡೋಪತಂಡವಾಗಿ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
ಸಚಿವರಾದ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು, ಸಂಸದರಾದ ಎಂ.ವೀರಪ್ಪ ಮೊಯಿಲಿ, ಬಿ.ವೈ.ರಾಘವೇಂದ್ರ ಇತರರು ಅಂತಿಮ ದರ್ಶನ ಪಡೆದರು. ಮಧ್ಯಾಹ್ನ 12.05ರ ಹೊತ್ತಿಗೆ ಸಾಮೂಹಿಕವಾಗಿ ವಂದೇ ಮಾತರಂ ಗೀತೆ ಹಾಡಲಾಯಿತು. ನಂತರ ವಿಶೇಷವಾಗಿ ಹೂವಿನಿಂದ ಅಲಂಕೃತವಾಗಿದ್ದ ಸೇನಾ ಟ್ರಕ್‌ನಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯಿತು.
ಅನಂತ ಕುಮಾರ್ ಅವರಿಗೆ ನ್ಯಾಷನಲ್ ಹೈಸ್ಕೂಲ್ ಮೈದಾನದ ಬಗ್ಗೆ ವಿಶೇಷ ಪ್ರೀತಿ. ಬೆಂಗಳೂರಿನಲ್ಲಿ ಹಾಗೂ ನಗರದ ದಕ್ಷಿಣ ಭಾಗದಲ್ಲಿ ಪಕ್ಷದಿಂದ ಯಾವುದೇ ಸಾರ್ವಜನಿಕ ಸಭೆ ಆಯೋಜಿಸಲು ನ್ಯಾಷನಲ್ ಹೈಸ್ಕೂಲ್ ಮೈದಾನವನ್ನೇ ಆಯ್ಕೆ ಮಾಡುತ್ತಿದ್ದರು. ಹಾಗಾಗಿ ಸಾಕಷ್ಟು ಕಾರ್ಯಕ್ರಮಗಳಿಗೆ ಈ ಮೈದಾನ ಸಾಕ್ಷಿಯಾಗಿದೆ. ಪ್ರಧಾನಿ ಆದಿಯಾಗಿ ಗಣ್ಯಾತಿಗಣ್ಯರು ಭಾಷಣ ಮಾಡಿ ಮೈದಾನಕ್ಕೆ ವಿಶೇಷ ಮಹತ್ವ ತಂದುಕೊಡುವಲ್ಲಿ ಅವರ ಪಾತ್ರ ದೊಡ್ಡದಿತ್ತು ಎನ್ನುತ್ತಾರೆ ಬಿಜೆಪಿ ನಗರ ಘಟಕದ ಅಧ್ಯಕ್ಷ ಪಿ.ಎನ್.ಸದಾಶಿವ.
ಬೆಂಗಳೂರಿನಲ್ಲಿ ಎರಡು ಬಾರಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ನಡೆದಾಗಲೂ ಎರಡೂ ಬಾರಿ ಇದೇ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆದಿತ್ತು. ಒಮ್ಮೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಇನ್ನೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿಯವರು ರಥಯಾತ್ರೆಯೊಂದಿಗೆ ಬೆಂಗಳೂರಿಗೆ ಆಗಮಿಸಿದಾಗಲೂ ಇದೇ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಿದ್ದರು.
ಈ ಭಾಗದಲ್ಲಿ ಬಿಜೆಪಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿರುವುದು, ಕುಟುಂಬ ಸಮೇತರಾಗಿ ಸಾರ್ವಜನಿಕರು ಪಾಲ್ಗೊಳ್ಳುವ ವಾತಾವರಣವಿದ್ದ ಕಾರಣ ಇದೇ ಮೈದಾನವನ್ನು ಅನಂತ ಕುಮಾರ್ ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಅವರು ಕಡೆಯ ಬಾರಿ ಇದೇ ಮೈದಾನದಲ್ಲಿ ಕೇರಳ ಹಾಗೂ ಕೊಡಗಿಗೆ ಉಚಿತವಾಗಿ ಎರಡು ಕೋಟಿ ರೂ. ಮೌಲ್ಯದ ಔಷಧಿ ಹೊತ್ತ ವಾಹನಗಳಿಗೆ ಚಾಲನೆ ನೀಡಿದ್ದರು ಎಂದು ಸ್ಮರಿಸಿದರು.
12 ವರ್ಷಗಳಿಂದ ಅದಮ್ಯ ಚೇತನ ವಾರ್ಷಿಕ ಉತ್ಸವ ಕೂಡ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲೇ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿ ಸಾಮೂಹಿಕವಾಗಿ ವಂದೇ ಮಾತರಂ ಹೇಳುತ್ತಿದ್ದ ಪದ್ಧತಿ ಇದೆ. ಆದರೆ ಸಾಮೂಹಿಕವಾಗಿ ವಂದೇ ಮಾತರಂ ಹಾಡುವ ಮೂಲಕವೇ ಅನಂತ ಕುಮಾರ್ ಅವರಿಗೆ ವಿದಾಯ ಹೇಳಿದ್ದು, ನೋವಿನ ಸಂಗತಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.