ಜನರ ನಿರೀಕ್ಷೆ ಈಡೇರಿಸುವುದೂ ನಾಗರಿಕ ಸೇವೆ


Team Udayavani, Sep 22, 2018, 1:13 PM IST

janara.jpg

ಬೆಂಗಳೂರು: ತಂತ್ರಜ್ಞಾನ ಯುಗದಲ್ಲಿ ನಾಗರಿಕ ಸೇವೆಯ ಉದ್ದೇಶ ಕೇವಲ ಉತ್ತಮ ಆಡಳಿತ ನೀಡುವುದಲ್ಲ; ಅದರ ಜತೆಗೆ ಜನರ ನಿರೀಕ್ಷೆಗಳನ್ನು  ಈಡೇರಿಸುವುದೂ ಆಗಿದೆ ಎಂದು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್‌.ವಿ.ರಂಗನಾಥ್‌ ಅಭಿಪ್ರಾಯಪಟ್ಟರು. 

ನಗರದ ಎಂ.ಎಸ್‌. ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಐಎಎಸ್‌ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ “ರಾಮಯ್ಯ ಆಫೀಸರ್ ಐಎಎಸ್‌ ಅಕಾಡೆಮಿ’ ಉದ್ಘಾಟಿಸಿ ಅವರು ಮಾತನಾಡಿದರು. 

ಮಾಹಿತಿ ತಂತ್ರಜ್ಞಾನ ಮತ್ತು ಇಂಟರ್‌ನೆಟ್‌ ಕ್ರಾಂತಿ ಪರಿಣಾಮ ಜನರ  ನಿರೀಕ್ಷೆಗಳು ಹೆಚ್ಚಿವೆ. ಹಾಗಾಗಿ, ಐಎಎಸ್‌ ಸೇರಿದಂತೆ ನಾಗರಿಕ ಸೇವೆಯ ಕಾರ್ಯವ್ಯಾಪ್ತಿ ಕೂಡ ವಿಸ್ತಾರಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಉತ್ತಮ ಆಡಳಿತ  ನೀಡುವ ಜತೆಗೆ ಜನರ ನಿರೀಕ್ಷೆಗಳನ್ನು ಈಡೇರಿಸಬೇಕಿದೆ. ಇದು ನಾಗರಿಕ ಸೇವೆಗೆ ಬರುತ್ತಿರುವವರ ಮುಂದಿರುವ ದೊಡ್ಡ ಸವಾಲು ಎಂದು ಹೇಳಿದರು. 

ಬೌದ್ಧಿಕ ವೃದ್ಧಿಗೆ ನೆರವು: ಗೋಕುಲ್‌ ಶಿಕ್ಷಣ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ (ವೈದ್ಯಕೀಯ) ಅಧಿಕಾರಿ ಎಂ.ಆರ್‌. ಶ್ರೀನಿವಾಸಮೂರ್ತಿ  ಮಾತನಾಡಿ, ಒಂದು ಮ್ಯಾರಥಾನ್‌ನಲ್ಲಿ ಸಾವಿರಾರು ಜನ ಒಮ್ಮೆಲೆ ಓಡುತ್ತಾರೆ. ಅದರಲ್ಲಿ ಇಬ್ಬರು ಬಹುಮಾನ ಗಳಿಸಬಹುದು.

ಉಳಿದವರು ಬಹುಮಾನ ಗಳಿಸದಿದ್ದರೂ ಆರೋಗ್ಯ ಸುಧಾರಣೆಗೆ ಕಾರಣ  ವಾಗುತ್ತದೆ. ಅದೇ ರೀತಿ, ಐಎಎಸ್‌ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಎಲ್ಲ ಅಭ್ಯರ್ಥಿಗಳು  ಉತ್ತೀರ್ಣರಾಗದೇ ಇರಬಹುದು. ಆದರೆ, ಈ ಪರೀಕ್ಷಾ ಸಿದ್ಧತೆ ಅಭ್ಯರ್ಥಿಗಳ ಬೌದ್ಧಿಕ ಪ್ರಗತಿಗೆ ಕಾರಣವಾಗುತ್ತದೆ ಎಂದರು. 

“ಐಎಎಸ್ ಪಾಸಾಗುವ ಮುನ್ನ ನಾನೇನೂ ಯಾವುದೋ ನ್ಯಾಷನಲ್‌ ಪಬ್ಲಿಕ್‌ ಸ್ಕೂಲ್‌ ವಿದ್ಯಾರ್ಥಿ ಆಗಿರಲಿಲ್ಲ. ಒಂದು ಸಣ್ಣ ಹಳ್ಳಿಯ ಸರ್ಕಾರಿ ಪ್ರಾಥಮಿಕ  ಶಾಲೆಯೊಂದರ ವಿದ್ಯಾರ್ಥಿಯಾಗಿದ್ದೆ. ಸರ್ಕಾರಿ ಕಾಲೇಜಿನಲ್ಲೇ ಶಿಕ್ಷಣ ಪೂರೈಸಿದೆ. ಆದರೆ, ಆಗ ಒಳ್ಳೆಯ ಶಿಕ್ಷಕರಿದ್ದರು.

ಅವರ ಮಾರ್ಗದರ್ಶನದಲ್ಲಿ ಚೆನ್ನಾಗಿ ಕಲಿತೆ’ ಎಂದು ಎಂ.ಆರ್‌. ಶ್ರೀನಿವಾಸಮೂರ್ತಿ ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಂಡರು. ಗೋಕುಲ್‌ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ ಡಾ.ಎಂ.ಆರ್‌. ಜಯರಾಂ ಮಾತನಾಡಿದರು. ನಿವೃತ್ತ ಐಎಎಸ್‌ ಅಧಿಕಾರಿ ಆರ್‌.ಎ.ಇಸ್ರೇಲ್‌ ಜೆಬಾಸಿಂಗ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.