ವರ್ಷಾಂತ್ಯಕ್ಕೆ ಮೊದಲ ಹಂತ ಪೂರ್ಣ
Team Udayavani, Oct 28, 2017, 4:16 PM IST
ಬೆಂಗಳೂರು: ನಗರ ಸ್ವಾತಂತ್ರ್ಯ ಉದ್ಯಾನದಲ್ಲಿ ನಿರ್ಮಿಸುತ್ತಿರುವ ಬಹುಮಹಡಿ ಕಾರುಗಳ ನಿಲುಗಡೆ ಯೋಜನೆಯ ಮೊದಲ ಹಂತ ವರ್ಷಾಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಮೇಯರ್ ಸಂಪತ್ ರಾಜ್ ಹೇಳಿದರು.
ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಮೇಯರ್, ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತ ವಾಹನಗಳ ನಿಲುಗಡೆ ದೊಡ್ಡ ಸಮಸ್ಯೆಯಾಗಿದ್ದು, ರಸ್ತೆಗಳಲ್ಲೇ ವಾಹನಗಳ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಜನರಿಗೆ ಕಿರಿಕಿರಿಯಾಗಿದೆ. ಆದ್ದರಿಂದ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಡಿಸೆಂಬರ್ ಅಂತ್ಯದೊಳಗೆ ಮೊದಲ ಹಂತದ ಕಾಮಗಾರಿ ಮುಗಿಯಬೇಕು. ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಸೂಚಿಸಿದರು.
ಒಟ್ಟಾರೆ 79 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತಗಳಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಬಹುಮಹಡಿ ಕಾರುಗಳ ನಿಲುಗಡೆ ಯೋಜನೆ ಮೊದಲ ಹಂತದ ಕಾಮಗಾರಿ ಈಗಾಗಲೇ ಶೇ.40ರಷ್ಟು ಪ್ರಗತಿಯಾಗಿದ್ದು, ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರಿಂದ 150ರಿಂದ 200 ಕಾರುಗಳ ನಿಲುಗಡೆ ಹಾಗೂ 150 ದ್ವಿಚಕ್ರ ವಾಹನಗಳನ್ನು ಇಲ್ಲಿ ನಿಲುಗಡೆ ಮಾಡಬಹುದು ಎಂದರು.
ಮೊದಲ ಹಂತದ ಕಾಮಗಾರಿಗೆ ನವೆಂಬರ್ ಗಡುವು ನೀಡಲಾಗಿತ್ತು. ಆದರೆ, ನಿರಂತರ ಮಳೆಯಿಂದ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಜತೆಗೆ ಕಲ್ಲುಮಿಶ್ರಿತ ಮಣ್ಣು ಇರುವುದರಿಂದ ಕಾಮಗಾರಿ ಮಂದಗತಿಯಲ್ಲಿ ಸಾಗಿತು. ಅದೇನೇ ಇರಲಿ, ಡಿಸೆಂಬರ್ ಅಂತ್ಯಕ್ಕೆ ಮೊದಲ ಹಂತ ಹಾಗೂ ಮಾರ್ಚ್ ಒಳಗೆ ಎರಡನೇ ಹಂತ ಮುಗಿಯಲಿದೆ.
ಆಗ 500 ಕಾರುಗಳು ಮತ್ತು 500 ದ್ವಿಚಕ್ರ ವಾಹನಗಳ ನಿಲುಗಡೆ ಮಾಡಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು. ಭೂಮಿಯ ಮೇಲಿನಿಂದ ಸುಮಾರು 12 ಮೀಟರ್ ಆಳಕ್ಕಿಳಿದು ಅಲ್ಲಿಂದ ಬಹುಮಹಡಿ ಕಾರುಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ. 45 ಸಾವಿರ ಕ್ಯುಬಿಕ್ ಮೀಟರ್ ಮಣ್ಣು ಈಗಾಗಲೇ ಹೊರತೆಗೆಯಲಗಿದೆ. ಭೂಮಿ ಅಡಿ ಕಲ್ಲು ಇದ್ದುದರಿಂದ ಬ್ಲಾಸ್ಟ್ ಮಾಡಬೇಕಾಗಿತ್ತು.
ಆದರೆ, ಹೃದಯಭಾಗದಲ್ಲಿರುವುದರಿಂದ ಇದು ಸಾಧ್ಯವಿಲ್ಲ. ಹಾಗಾಗಿ, “ಡೈಮಂಡ್ ರೋಪ್’ ಬಳಸಿ ಬಂಡೆಗಳನ್ನು ಒಡೆಯಲಾಗಿದೆ. ಪ್ರತಿ ಮಹಡಿಯಲ್ಲಿ ಎರಡು ಶೌಚಾಲಯಗಳು ಹಾಗೂ ಲಿಫ್ಟ್ ವ್ಯವಸ್ಥೆ ಇರಲಿದೆ. ಅಂಗವಿಕಲರು, ಮಹಿಳೆಯರಿಗೆ ಅನುಕೂಲವಾಗುವಂತೆ ಲಿಫ್ಟ್ ಬಳಿ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.