Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್ ಬಿದ್ದು ವೃದ್ಧ ಕೋಮಾಕ್ಕೆೆ
Team Udayavani, Jul 8, 2024, 11:07 AM IST
ಬೆಂಗಳೂರು: ಫ್ಲೆಕ್ಸ್ ಬಿದ್ದು ವೃದ್ಧರೊಬ್ಬರು ಗಾಯಗೊಂಡಿ ರುವ ಘಟನೆ ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ.
ರಾಜಾನುಕುಂಟೆ ನಿವಾಸಿ ಭಕ್ತ ವತ್ಸಲ(70) ಗಾಯ ಗೊಂಡವರು. ಶನಿವಾರ ಮೊಮ್ಮಗಳನ್ನು ಶಾಲೆಯಿಂದ ಕರೆದುಕೊಂಡು ಬೈಕ್ನಲ್ಲಿ ಹೋಗುತ್ತಿದ್ದರು. ಅದೇ ವೇಳೆ ಫ್ಲೆಕ್ಸ್ ಬಿದ್ದಿದ್ದು, ಅವರ ತಲೆಗೆ ಪೆಟ್ಟಾಗಿ, ತೀವ್ರ ರಕ್ತಸ್ರಾವವಾಗಿದೆ. ಪರಿಣಾಮ ಕೋಮಾ ಸ್ಥಿತಿಗೆ ತಲುಪಿದ್ದಾರೆ. ಸ್ಥಳೀಯ ಶಾಸಕರ ಹುಟ್ಟುಹಬ್ಬಕ್ಕೆ ಹಾಕಿದಂತಹ ಫ್ಲೆಕ್ಸ್ ಬಿದ್ದು ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಘಟನೆ ನಡೆದ ಸ್ಥಳ ಪಾಲಿಕೆಗೆ ಸೇರಿಲ್ಲ: ಫ್ಲೆಕ್ಸ್ ಬಿದ್ದ ಸಿಂಗನಾಯ ಕನಹಳ್ಳಿಬಿಬಿಎಂಪಿ ವ್ಯಾಪ್ತಿಗೆ ಸೇರುವುದಿಲ್ಲ ಎಂದು ಪಾಲಿಕೆ ಸ್ಪಷ್ಟಪಡಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಪಾಲಿಕೆ, ಸಿಂಗನಾಯಕನಹಳ್ಳಿ ಯಲಹಂಕ ತಾಲೂಕು ವ್ಯಾಪ್ತಿಗೆ ಸೇರಲಿ ದೆ. ಕೆಲ ಮಾಧ್ಯಮಗಳಲ್ಲಿ ಬಿಬಿಎಂಪಿಗೆ ಸೇರಿದ್ದು ಎಂಬ ತಪ್ಪು ಮಾಹಿತಿ ಬಿತ್ತರವಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸುತ್ತಿದ್ದು, ಬ್ಯಾನರ್ ಅಳವಡಿಕೆ ಮಾಡಿರುವವ ಮೇಲೆ ಕೇಸು ದಾಖಲಿಸುವ ಜೊತೆಗೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.