ವಾಲಿದ ನಾಲ್ಕಂತಸ್ತಿನ ಕಟ್ಟಡ

Team Udayavani, Feb 11, 2018, 12:03 PM IST

valida-kattada.jpg

ಬೆಂಗಳೂರು: ಸುರಕ್ಷತಾ ಕ್ರಮಗಳನ್ನು ಪಾಲಿಸದೆ, ನಿಯಮ ಉಲ್ಲಂಘಿಸಿ ನಿರ್ಮಿಸುತ್ತಿದ್ದ 4 ಅಂತಸ್ತಿನ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದು, ಅಕ್ಕಪಕ್ಕದ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಜಯನಗರ 5ನೇ ಬ್ಲಾಕ್‌, ಮಾರೇನಹಳ್ಳಿ ಕೆರೆ ಅಂಗಳದಲ್ಲಿ ರಾಜು ಎಂಬುವವರು ನಿಯಮ ಬಾಹಿರವಾಗಿ ಕಟ್ಟಡ ನಿರ್ಮಿಸುತ್ತಿರುವುದರಿಂದ ಪಾಯ ಸಡಿಲಗೊಂಡು ಕಟ್ಟಡ ವಾಲಿದೆ. ಇದರಿಂದ ತೀವ್ರ ಆತಂಕಕ್ಕೊಳಗಾದ ಸುತ್ತಮುತ್ತಲಿನ ಮನೆಯವರು ಮನೆಗಳನ್ನು ಖಾಲಿ ಮಾಡಿ ಬೀದಿಯಲ್ಲಿ ನಿಲ್ಲುವಂತಹ ಸ್ಥಿತಿ ನಿರ್ಮಾಣವಾಗಿದೆ.

ವಾಲಿದ ಕಟ್ಟಡ: ಕೆರೆಯ ಅಂಗಳದಲ್ಲಿರುವ 20*24 ಅಡಿ ಜಾಗದಲ್ಲಿ ನೆಲ ಹಾಗೂ ಮೂರು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಮಾಲೀಕರು ಪಾಲಿಕೆಯಿಂದ ಅನುಮತಿ ಪಡೆದಿದ್ದಾರೆ. ಆದರೆ, ನಿಯಮ ಉಲ್ಲಂಘಿಸಿ ನಾಲ್ಕು ಅಂತಸ್ತು ನಿರ್ಮಿಸಿದ್ದರಿಂದ ಪಾಯ ಸಡಿಲಗೊಂಡು ಕಟ್ಟಡ ವಾಲಿದೆ. ಇದರಿಂದ ಎಚ್ಚೆತ್ತ ಪಾಲಿಕೆ ಅಧಿಕಾರಿಗಳು ಕೂಡಲೇ ಕಟ್ಟಡ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ.

ಕ್ಯಾರೇ ಅನ್ನದ ಮಾಲೀಕರು: ನಿಯಮ ಉಲ್ಲಂಘಿಸಿ ಹೆಚ್ಚುವರಿ ಅಂತಸ್ತು ನಿರ್ಮಿಸುತ್ತಿರುವ ಸಂಬಂಧ ಈ ಹಿಂದೆ ಪಾಲಿಕೆಯ ಅಧಿಕಾರಿಗಳು ಕಟ್ಟಡ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸಿದ್ದರು. ಆದರೆ, ಇದಕ್ಕೆ ಮಾಲೀಕರು ಕ್ಯಾರೇ ಅಂದಿಲ್ಲ. ಶನಿವಾರ  ಕಟ್ಟಡ ವಾಲಿಕೊಂಡಿದ್ದರಿಂದ ಪಾಲಿಕೆಯ ಅಧಿಕಾರಿಗಳು ಸುತ್ತಮುತ್ತಲಿನ ಭಾಗದ ಜನರಿಗೆ ಮುಂಜಾಗ್ರತಾ ಕ್ರಮವಾಗಿ ಕೂಡಲೇ ಮನೆಗಳನ್ನು ಖಾಲಿ ಮಾಡುವಂತೆ ನೋಟಿಸ್‌ ನೀಡಿದ್ದಾರೆ.

ತೆರವು ಕಾರ್ಯ ಆರಂಭ: ಶನಿವಾರ ಸಂಜೆಯಿಂದಲೇ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಾಗಿರುವ ಪಾಲಿಕೆ ಸಿಬ್ಬಂದಿ, ಈಗಾಗಲೇ ಒಂದು ಮಹಡಿಯ ಮೇಲ್ಛಾವಣಿ ತೆರವುಗೊಳಿಸಿದ್ದಾರೆ. ಭಾನುವಾರವೂ ತೆರವು ಕಾರ್ಯ ಮುಂದುವರಿಯಲಿದ್ದು, ತೆರವಿಗೆ ತಗಲುವ ವೆಚ್ಚವನ್ನು ಕಟ್ಟಡ ಮಾಲೀಕರಿಂದಲೇ ಕೊಡಿಸಲಾಗುವುದು ಮತ್ತು ಕಟ್ಟಡಕ್ಕೆ ನೀಡಲಾಗಿರುವ ನಕ್ಷೆ ಮಂಜೂರಾತಿ ರದ್ದುಪಡಿಸಲಾಗುವುದು ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

ನಷ್ಟವಾದರೆ ಪಾಲಿಕೆ ಹೊಣೆಯಲ್ಲ!: ಕಳೆದ ನಾಲ್ಕೈದು ತಿಂಗಳಿಂದ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಇದೀಗ ವಾಲಿಕೊಂಡ ಕಟ್ಟಡವು ಅಕ್ಕ ಪಕ್ಕದ ಮನೆಗಳ ಮೇಲೆ ಉರುಳಿ ಬಿದ್ದು, ಆಸ್ತಿ ನಷ್ಟವಾದರೆ ಅದಕ್ಕೆ ಪಾಲಿಕೆ ಹೊಣೆಯಲ್ಲ ಎಂಬ ನೋಟಿಸ್‌ ಜಾರಿಗೊಳಿಸಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಆಯುಕ್ತರ ಮಾತಿಗೆ ಕ್ಯಾರೇ ಎನ್ನದ ಅಧಿಕಾರಿಗಳು: ಕಳೆದ ವರ್ಷ ಬೆಳ್ಳಂದೂರು ಗೇಟ್‌ ಬಳಿ ಕಾನೂನು ಬಾಹಿರವಾಗಿ ಹಾಗೂ ಕಳಪೆ ಸಾಮಗ್ರಿಗಳನ್ನು ಬಳಸಿ ಕಟ್ಟಡ ನಿರ್ಮಿಸಿದ್ದರಿಂದ ಕಟ್ಟಡ ಕುಸಿದು ಹಲವು ಜನ ಪ್ರಾಣ ಕಳೆದುಕೊಂಡಿದ್ದರು. ಈ ವೇಳೆ ಬಿಬಿಎಂಪಿ ಆಯುಕ್ತರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮಾಲೀಕರು ನಿಯಮಗಳನ್ನು ಪಾಲಿಸುತ್ತಿರುವ ಹಾಗೂ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ, ಈವರೆಗೆ ವರದಿ ಸಲ್ಲಿಕೆಯಾಗಿಲ್ಲ.

ನಗರದಲ್ಲಿ ಕಟ್ಟಡ ನಿರ್ಮಾಣ ನಿಯಮಗಳ ಉಲ್ಲಂಘನೆಗೆ ಪಾಲಿಕೆಯ ಆಯುಕ್ತರು ಪರೋಕ್ಷವಾಗಿ ಬೆಂಬಲಿಸುತ್ತಾರೆ ಎಂಬ ಆರೋಪವಿದೆ. ಅದಕ್ಕೆ ಪೂರಕವೆಂಬಂತೆ ಕೆಲವೊಂದು ವಾರ್ಡ್‌ಗಳಲ್ಲಿ ಪಾಲಿಕೆಯ ಅಧಿಕಾರಿಗಳೇ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುವಂತೆ ಮಾಲೀಕರಿಗೆ ಪ್ರೋತ್ಸಾಹಿಸುತ್ತಿರುವ ಘಟನೆಗಳು ನಡೆಯುತ್ತಿವೆ. ಆ ಹಿನ್ನೆಲೆಯಲ್ಲಿ ನಿಯಮ ಬಾಹಿರ ಕಟ್ಟಡಗಳ ಮಾಹಿತಿ ನೀಡುವಂತೆ ಆಯುಕ್ತರು ವರದಿ ಕೇಳಿದರೂ ಅಧಿಕಾರಿಗಳು ಈವರೆಗೆ ಅದಕ್ಕೆ ಮುಂದಾಗದಿರುವುದು ಪಾಲಿಕೆಯ ದುರಾಡಳಿತಕ್ಕೆ ಹಿಡಿತ ಕನ್ನಡಿಯಾಗಿದೆ.

ಹಲವು ತಿಂಗಳುಗಳಿಂದ ಕಟ್ಟಡ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿದ್ದರೂ, ಅದನ್ನು ತಡೆಯಲು ಅಧಿಕಾರಿಗಳು ಮುಂದಾಗದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಹೀಗಾಗಿ ಸಂಬಂಧಿಸಿದ ಸಹಾಯಕ ಎಂಜಿನಿಯರ್‌ ಹಾಗೂ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ಗಳ ಅಮಾನತಿಗೆ ಆದೇಶ ಹೊರಡಿಸಲಾಗುವುದು.
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತರು

ಟಾಪ್ ನ್ಯೂಸ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.