ನಾಲ್ಕನೇ ದಿನವೂ ಮುಂದುವರಿದ ನಿರಷನ
Team Udayavani, Oct 17, 2017, 11:59 AM IST
ಬೆಂಗಳೂರು: ಕೈ ಉತ್ಪನ್ನಗಳನ್ನು ಜಿಎಸ್‌ಟಿ ಮುಕ್ತಗೊಳಿಸಲು ಹಿರಿಯ ರಂಗಕರ್ಮಿ ಪ್ರಸನ್ನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಾಲ್ಕನೆ ದಿನವೂ ಮುಂದುವರೆದಿದೆ.
ಮೂರನೇ ದಿನವಾದ ಸೋಮವಾರ ರಾಯಚೂರಿನ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ಅಭಯ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕರಮುಕ್ತ ಚಳವಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು. ಲಕ್ಷಾಂತರ ಕೃಷಿ ಕಾರ್ಮಿಕರ ಹಿತಕ್ಕಾಗಿ ಕೈಉತ್ಪನ್ನಗಳಿಗೆ ಜಿಎಸ್‌ಟಿ ಕರವನ್ನು ಪೂರ್ಣವಾಗಿ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅವರು ಪ್ರಸನ್ನ ಅವರನ್ನು ಭೇಟಿ ನೀಡಿ ಸಮಾಲೋಚನೆ ನಡೆಸಿದ್ದು, ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದರು. ಅಲ್ಲದೇ ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹೇಳಿದರು.
ಮಾಜಿ ಕೇಂದ್ರ ಸಚಿವ ಬ್ರಿಜೇಶ್ ಕಾಳಪ್ಪ ಅವರು ಪ್ರಸನ್ನರ ಜತೆಗೆ ಮಾತುಕತೆ ನಡೆಸಿ ಈಗಾಗಲೇ ನೋಟು ಅಮಾನ್ಯಿಕರಣದಿಂದ ತತ್ತರಿಸಿರುವ ಗ್ರಾಮೀಣ ಜನತೆಗೆ ಜಿಎಸ್‌ಟಿ ಕರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದು, ಕೇಂದ್ರದ ಮೇಲೆ ಒತ್ತಡ ಏರುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajapete: ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕಠಿನ ಕ್ರಮ: ಸಿಎಂ ಸಿದ್ದರಾಮಯ್ಯ
ಹಸುವಿನ ಕೆಚ್ಚಲು ಕೊಯ್ದು ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ: ಆರ್.ಅಶೋಕ್
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Bengaluru: ಅಡಮಾನ ಆಸ್ತಿ ಮಾರಾಟ ಮಾಡಲು ಶೀಘ್ರದಲ್ಲೇ ಇ-ಖಾತೆ
Metro: ನಾನ್ ಪೀಕ್ ಅವರ್: ಮೆಟ್ರೋ ಶೇ.5 ಅಗ್ಗ ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.