ಎಫ್ಆರ್‌ಡಿಐ ಮಸೂದೆ ಜನಸಾಮಾನ್ಯರಿಗೆ ಮಾರಕ

Team Udayavani, Dec 13, 2017, 12:55 PM IST

Suck-Tank-1.jpg

ಬೆಂಗಳೂರು: ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಸತ್‌ನ ಮುಂದೆ ಮಂಡಿಸಿರುವ ಹಣಕಾಸಿನ ನಿರ್ಣಯ ಮತ್ತು ಠೇವಣಿ ವಿಮಾ ಮಸೂದೆಯು (ಎಫ್ಆರ್‌ಡಿಐ) ಜನಸಾಮಾನ್ಯರಿಗೆ ಮಾರಕವಾಗಿದ್ದು, ಅದಕ್ಕೆ ಒಪ್ಪಿಗೆ ಸಿಕ್ಕಿರೆ ಇಡೀ ದೇಶದ ಆರ್ಥಿಕ ವ್ಯವಸ್ಥೆ ಅಲ್ಲೋಕ ಕಲ್ಲೋಲವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್‌ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕಾಯ್ದೆಯಡಿ ಗ್ರಾಹಕರು ಇಟ್ಟಿರುವ ಠೇವಣಿ ಹಾಗೂ ಉಳಿತಾಯ ಖಾತೆಯಲ್ಲಿರುವ ಹಣವನ್ನು ಬ್ಯಾಂಕುಗಳು ತಮಗೆ ಬೇಕಾದಂತೆ ಬಳಸಿಕೊಳ್ಳುವ ಅಧಿಕಾರ  ಸಿಗಲಿದೆ. ಒಂದು ಹಂತದಲ್ಲಿ ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವೂ ಲಭ್ಯವಾಗಲಿದೆ . ಹೀಗಾಗಿ, ಇದೊಂದು ಆತಂಕಕಾರಿ ವಿಚಾರ ಎಂದು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಟು ಅಮಾನ್ಯ ಮೂಲಕ ಇಡೀ ದೇಶದ ಜನರ ಬಳಿಯಿದ್ದ ದುಡ್ಡು ಬ್ಯಾಂಕುಗಳಲ್ಲಿ ತುಂಬುವಂತೆ ಮಾಡಿದ ಕೇಂದ್ರ ಸರ್ಕಾರ ಇದೀಗ ಆ ಹಣವನ್ನು ಬ್ಯಾಂಕುಗಳು ತಮಗೆ ಬೇಕಾದಂತೆ ಬಳಕೆ ಮಾಡಿಕೊಂಡು ಗ್ರಾಹಕರಿಗೆ ಷೇರು ಸರ್ಟಿಫಿಕೇಟ್‌ ಕೊಟ್ಟು ಇಂತಿಷ್ಟು ವರ್ಷದ ನಂತರ ಮರಳಿ ಪಡೆಯಬಹುದು ಎಂಬ ಷರತ್ತು ವಿಧಿಸುವ ಸಾಧ್ಯತೆಯೂ ಇರಲಿದೆ ಎಂದು ತಿಳಿಸಿದರು.

ನೋಟು ಅಮಾನ್ಯ ಹಾಗೂ ಜಿಎಸ್‌ಟಿಯಂತ ಕ್ರಮಗಳನ್ನು ಹೊಗಳಿಕೊಂಡಂತೆ  ಈ ಕ್ರಮವನ್ನೂ ಹೊಗಳಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಬ್ಯಾಂಕುಗಳಲ್ಲಿ ಜನಸಾಮಾನ್ಯರ ಹಣಕ್ಕೆ ಖಾತರಿಯೇ ಇರುವುದಿಲ್ಲ. ಇದು ಮತ್ತೂಂದು ರೀತಿಯ ದರೋಡೆ. ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದರಿಂದ ಬ್ಯಾಂಕುಗಳು ಸಂಕಷ್ಟದಲ್ಲಿದ್ದು ಅನುತ್ಪಾದಕ ಆಸ್ತಿ ಪ್ರಮಾಣ ಹೆಚ್ಚಾಗಿದೆ. 2012-13 ರಲ್ಲಿ 45849 ಕೋಟಿ ರೂ. ಲಾಭದಲ್ಲಿದ್ದ  ಬ್ಯಾಂಕುಗಳು 2016-17 ರಲ್ಲಿ 474 ಕೋಟಿ ರೂ. ಲಾಭಕ್ಕೆ ಇಳಿದಿದೆ. ಬಿಜೆಪಿ ಸರ್ಕಾರ ಬಂದ ನಂತರ  ಉದ್ಯಮಿಗಳ 2 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ.

ಇದೀಗ ಬ್ಯಾಂಕುಗಳನ್ನು ಉಳಿಸಲು ಪ್ರಾಧಿಕಾರ ರಚನೆ ಮಾಡಿ ಜನಸಾಮಾನ್ಯರ ಹಣದ ಬಗ್ಗೆ ಆ ಪ್ರಾಧಿಕಾರ ತೀರ್ಮಾನ ಕೈಗೊಳ್ಳುವಂತೆ ಮಾಡುವ ಹುನ್ನಾರ ನಡೆದಿದೆ. ಬ್ಯಾಂಕುಗಳ ಮೇಲೆ ಆರ್‌ಬಿಐ ನಿಯಂತ್ರಣವನ್ನೂ ತಪ್ಪಿಸುವ ಹುನ್ನಾರ ಇದರ ಹಿಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಸಂಖ್ಯಾ ಬಲ ಇರುವುದರಿಂದ ಒಪ್ಪಿಗೆ ಪಡೆದು ರಾಜ್ಯಸಭೆಯಲ್ಲಿ ಒಪ್ಪಿಗೆ ಸಿಗದಿದ್ದರೂ ಜಾರಿ ಮಾಡುವ ಹಿಟ್ಲರ್‌ ಧೋರಣೆಯನ್ನು ಪ್ರಧಾನಿ ನರೇಂದ್ರಮೋದಿ ತೋರುತ್ತಿದ್ದಾರೆ ಎಂದು ಕಿಡಿ ಕಾರಿದರು. ಕಾಂಗ್ರೆಸ್‌ ರಾಷ್ಟ್ರಮಟ್ಟದಲ್ಲಿ  ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಲಿದ್ದು ರಾಜ್ಯದ ಎಲ್ಲ ಸಂಸದರು ಸಂಸತ್‌ನಲ್ಲಿ ವಿರೋಧ ವ್ಯಕ್ತಪಡಿಸಲು ಸೂಚನೆ ನೀಡಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.