ಪಾಲಿಕೆ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

Team Udayavani, Aug 13, 2017, 11:21 AM IST

park-death-priyanka.jpg

ಕೆ.ಆರ್‌.ಪುರ: ಕೆ.ಆರ್‌.ಪುರದ  ಆಕಾಶ್‌ ನಗರದ ಎಂವಿಜೆ ಬಡಾವಣೆಯ ಪಾರ್ಕ್‌ನಲ್ಲಿ ಬಿಬಿಎಂಪಿ ತಂದಿಟ್ಟಿ ಕಬ್ಬಿಣದ ರಾಡ್‌ಗಳಿಗೆ 13 ವರ್ಷದ ಬಾಲಕಿ ಬಲಿಯಾಗಿದ್ದಾಳೆ. ಆಟವಾಡಲೆಂದು ಉದ್ಯಾನಕ್ಕೆ ತೆರಳಿದ್ದ ಬಾಲಕಿಯ ತಲೆಯ ಮೇಲೆ ರಾಡ್‌ ಬಿದ್ದು ದುರ್ಘ‌ಟನೆ ಸಂಭವಿಸಿದೆ. 

ಕೆ.ಆರ್‌.ಪುರ ಸಮೀಪದ ಎಂಟಿಬಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಪ್ರಿಯಾಂಕ(13) ಮೃತ ಬಾಲಕಿ.  ಕೃಷ್ಣಪ್ಪ ಲೇಔಟ್‌ ವಾಸಿಗಳಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಸುಬ್ರಮಣ್ಯಮ್‌ ಹಾಗೂ ವಿಜಯ್‌ ಕುಮಾರಿ ದಂಪತಿಯ ಪುತ್ರಿಯಾದ ಪ್ರಿಯಾಂಕ. ಎಂವಿಜೆ ಪಾರ್ಕ್‌ನಲ್ಲಿ ನವೀಕರಣ ಕಾಮಗಾರಿ ಕೈಗೊಂಡಿರುವ ಬಿಬಿಎಂಪಿ, ಪಾರ್ಕ್‌ಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಿತ್ತಾದರೂ, ಈ ಬಗ್ಗೆ ಯಾವುದೇ ಕಠಿಣ ಕ್ರಮ ಕೈಗೊಂಡಿರಲಿಲ್ಲ.

ಹೀಗಾಗಿಯೇ ಶನಿವಾರ ಸಂಜೆ 4ಗಂಟೆ ಸಮಯದಲ್ಲಿ ಪ್ರಿಯಾಂಕ ಉದ್ಯಾನವನಕ್ಕೆ ಆಟವಾಡಲು ತೆರಳಿದ್ದಳು. ಅಲ್ಲಿ ಉಯ್ನಾಲೆ ನಿರ್ಮಿಸಲೆಂದು ತಂದಿಟ್ಟಿದ್ದ ಕಬ್ಬಿಣದ ರಾಡ್‌ಗಳ ಬಳಿ ಪ್ರಿಯಾಂಕ್‌ ಆಟವಾಡುತ್ತಿದ್ದಳು ಎನ್ನಲಾಗಿದೆ. ಆಗ ರಾಡ್‌ವೊಂದು ತಲೆ ಮೇಲೆ ಜೋರಾಗಿ ಬಿದ್ದಿದೆ. ಗಂಭೀರ ಗಾಯಗೊಂಡ ಬಾಲಕಿಗೆ ತೀವ್ರ ರಕ್ತ ಸ್ರಾವವಾಗಿದೆ.

ರಕ್ತದ ಮಡುವಲ್ಲಿ ಬಿದ್ದಿದ್ದ ಬಾಲಕಿಯನ್ನು ಸ್ಥಳೀಯರು ಬೈಯ್ಯಪ್ಪನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ದಿದ್ದಾರೆ. ಆದರೆ, ಅಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಪ್ರಿಯಾಂಕ ಕೊನೆಯುಸಿರೆಳೆದಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಮಹದೇವಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Bowler-Siraj

IPL Auction: ಗುಜರಾತ್‌ ಟೈಟಾನ್ಸ್‌ ಪಾಲಾದ ಸಿರಾಜ್‌; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

court

Kasaragod: 300 ಪವನ್‌ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.