Crime: ಅನೈತಿಕ ಸಂಬಂಧಕ್ಕೆ ಅಡ್ಡಿ ಆಗಿದ್ದ ಬಾಲಕಿ ಹತ್ಯೆಗೈದ ತಾಯಿ,ಪ್ರಿಯಕರ?
Team Udayavani, Jul 15, 2024, 12:17 PM IST
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಟ್ಯಾಕ್ಸಿ ಪಾರ್ಕಿಂಗ್ ಸ್ಥಳದಲ್ಲಿ ಪತ್ತೆಯಾಗಿದ್ದ 5 ವರ್ಷದ ಬಾಲಕಿಯ ಮೃತದೇಹದ ಗುರುತನ್ನು ರೈಲ್ವೆ ಪೊಲೀಸರು ಪತ್ತೆಯಾಗಿದ್ದಾರೆ.
ಮೃತ ಬಾಲಕಿ ಮರಿಯಮ್(5) ಎಂದು ಗುರುತಿಸಲಾಗಿದೆ. ಜು.3ರಂದು ಕೆಎಸ್‌ಆರ್ ರೈಲು ನಿಲ್ದಾಣದ ಟ್ಯಾಕ್ಸಿ ಪಾರ್ಕಿಂಗ್ ಸ್ಥಳದಲ್ಲಿ 5 ವರ್ಷದ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ರೈಲ್ವೆ ಪೊಲೀಸರು ತಾಂತ್ರಿಕ ತನಿಖೆ ನಡೆಸಿ ಆ ಬಾಲಕಿ ಮತ್ತು ಆಕೆಯ ತಂದೆ-ತಾಯಿಯ ಗುರುತನ್ನೂ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಲೆಯಾದ ಮರಿಯಮ್, ಹೀನಾ ಮತ್ತು ಶಿವು ದಂಪತಿಯ ಪುತ್ರಿ ಆಗಿದ್ದು, ಈ ಮಧ್ಯೆ ಹೀನಾ, ರಾಜು ಅಲಿಯಾಸ್ ಮಣಿಕಂಠ ಎಂಬಾತನ ಜತೆಗೆ ಅನೈತಿಕ ಸಂಬಂಧ ಹೊಂದಿದ್ದು, ಅದರಿಂದ ಪತಿ ಶಿವುನನ್ನು ತೊರೆದು ಪ್ರಿಯಕರ ರಾಜು ಜತೆ ಭಿಕ್ಷಾಟನೆ ಮಾಡಿ ಕೊಂಡು ಓಡಾಡುತ್ತಿದ್ದಳು. ಕೊಲೆಯಾದ ಮರಿಯಮ್ ಸಹ ಹೀನಾ ಮತ್ತು ರಾಜು ಜತೆಗೆ ಇದ್ದಳು. ಹೀಗಾಗಿ ಈ ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ?: ತಮ್ಮ ಅನೈತಿಕ ಸಂಬಂಧಕ್ಕೆ ಮರಿಯಮ್ ಅಡ್ಡಿಯಾಗಿದ್ದಳು ಎಂಬ ಕಾರಣಕ್ಕೆ ಹೀನಾ ಮತ್ತು ರಾಜು ಕೊಲೆ ಮಾಡಿ ರುವ ಶಂಕೆ ವ್ಯಕ್ತವಾಗಿದೆ. ಮರಿಯಮ್ ಮೃತದೇಹ ಪತ್ತೆ ಯಾದ ದಿನದಿಂದಲೂ ಈ ಇಬ್ಬರು ನಾಪತ್ತೆಯಾಗಿದ್ದಾರೆ. ಹೀಗಾಗಿ ರೈಲ್ವೆ ಪೊಲೀಸರು ಈ ಇಬ್ಬರ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ. ಈ ಇಬ್ಬರ ಬಗ್ಗೆ ಮಾಹಿತಿ ಇದ್ದರೆ ತಿಳಿಸುವಂತೆ ರೈಲ್ವೆ ಪೊಲೀಸರು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ. ಮಾಹಿತಿಗಾಗಿ ಮೊ.9480802113 ಮತ್ತು ಮೊ. 9480802102ಗೆ ಸಂಪರ್ಕಿಸುವಂತೆ ರೈಲ್ವೆ ಪೊಲೀಸರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.