ಗತ ವೈಭವ ಮರಳಿ ತರುವುದೇ ಗುರಿ

Team Udayavani, Apr 16, 2019, 3:00 AM IST

gata-vybha

ಬೆಂಗಳೂರು: ಗಾರ್ಡನ್‌ ಸಿಟಿಯ ಗತಕಾಲದ ವೈಭವವನ್ನು ಮರಳಿ ತರುವುದು ನನ್ನ ಪ್ರಮುಖ ಗುರಿಯಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ಮತದಾನದ ದಿನ ಹತ್ತಿರವಾಗುತ್ತಿರುವಂತೆ ತಮ್ಮ ಪ್ರಚಾರ ಬಿರುಸುಗೊಳಿಸಿರುವ ಹರಿಪ್ರಸಾದ್‌, ಸೋಮವಾರ ಪದ್ಮನಾಭನಗರ, ಬೊಮ್ಮನಹಳ್ಳಿ ಹಾಗೂ ಗೋವಿಂದರಾಜ ನಗರದಲ್ಲಿ ಭರ್ಜರಿ ಪ್ರಚಾರ ನಡೆಸಿದರು.

ಬೆಳಗ್ಗೆ ಪದ್ಮನಾಭನಗರದ ಚಿಕ್ಕಲ್ಲಸಂದ್ರ ದೇವಸ್ಥಾನದಿಂದ ಪ್ರಾರಂಭವಾದ ರೋಡ್‌ ಶೋ, ಪದ್ಮನಾಭನಗರ ಕ್ಷೇತ್ರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ಮಧ್ಯಾಹ್ನ ಬೊಮ್ಮನಹಳ್ಳಿ ವೃತ್ತದ ಬಳಿ ಇರುವ ಎಚ್‌.ಪಿ.ಪವರ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಕರ್ನಾಟಕ ಬಹುಜನ ಸಂಘರ್ಷ ಸಮಿತಿ ಮುಖಂಡರ ಸಭೆಯಲ್ಲಿ ಹರಿಪ್ರಸಾದ್‌ ಭಾಗವಹಿಸಿದ್ದರು.

ಸಂಜೆ ರಾಜಾಜಿನಗರದ 6ನೇ ಬ್ಲಾಕ್‌ನ ಬಿಬಿಎಂಪಿ ಸಮುದಾಯ ಭವನದ ಬಳಿ ಇರುವ ಗಣೇಶ ದೇವಸ್ಥಾನದಿಂದ ಪ್ರಾರಂಭವಾದ ರೋಡ್‌ ಶೋ, ಗೋವಿಂದರಾಜ ನಗರ ವಿಕ್ಷೇತ್ರಗಳಲ್ಲಿ ಸಾಗಿತು. ಮತಯಾಚನೆ ವೇಳೆ ಮಾತನಾಡಿದ ಅವರು, ಬೆಂಗಳೂರು ನಗರ, ಅದರಲ್ಲೂ ದಕ್ಷಿಣ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ನನ್ನದೇ ಆದ ಕನಸುಗಳಿವೆ.

ಬೆಂಗಳೂರು ದಕ್ಷಿಣ ಇಂದು ವಿದೇಶಗಳಲ್ಲೂ ಹೆಸರಾಗಿದೆ. ಈ ಭಾಗದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿ ಜತೆಗೆ ಇನ್ನೂ ಹಲವು ಯೋಜನೆಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಗಮನ ಸೆಳೆದು ಅನುದಾನ ತರುವುದು ನನ್ನ ಜವಾಬ್ದಾರಿ ಎಂದರು.

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಲಾಲ್‌ಬಾಗ್‌ ಮಾದರಿಯ ಪಾರ್ಕ್‌ ನಿರ್ಮಿಸಲು ಅಗತ್ಯ ಸ್ಥಳಾವಕಾಶವಿದೆ. ಈ ರೀತಿಯ ಉದ್ಯಾನ ನಿರ್ಮಿಸುವ ಮೂಲಕ “ಗಾರ್ಡನ್‌ ಸಿಟಿ’ ಹೆಸರು ಮತ್ತೆ ಮರುಕಳಿಸುವಂತೆ ಮಾಡುವುದು ನನ್ನ ಗುರಿಯಾಗಿದೆ ಎಂದರು.

ನಗರದಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮೇಕೆದಾಟು ಬಳಿ ನಿರ್ಮಿಸಲು ಚಿಂತಿಸಲಾಗಿರುವ ಅಣೆಕಟ್ಟೆಯಿಂದ ನೀರು ತರುವುದು ಸೂಕ್ತ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಬಿ.ಕೆ. ಹರಿಪ್ರಸಾದ್‌ ಅವರ ಪರವಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯರು ನಡೆಸಿದ ಬೈಕ್‌ ರ್ಯಾಲಿ ಎಲ್ಲರ ಗಮನ ಸೆಳೆಯಿತು.

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.