![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 10, 2021, 11:26 AM IST
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯವಸ್ಥಿತ ಮಾರುಕಟ್ಟೆ ಕಲ್ಪಿಸುವುದರ ಜತೆಗೆ ಅವರ ಜೀವನ ಸುಧಾರಣೆಗೆ ಸರ್ಕಾರ ಮುಂದಾಗಿದೆ. ಇದರಿಂದಾಗಿ, ಹಲವು ವರ್ಷಗಳಿಂದ ಗುರುತಿನ ಚೀಟಿಯಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತ ರಾಗಿ ದಿನ ಕಳೆಯುತ್ತಿದ್ದ ಸಾವಿರಾರು ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತುಗಳನ್ನು ಪಡೆಯಲು ಅನುಕೂಲವಾಗಲಿದೆ.
ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆ ಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರು ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಯನ್ನು ನಡೆಸಿ, ಅರ್ಹ ಎಲ್ಲಾ ಬೀದಿ ಬದಿ ವ್ಯಾಪಾರಿ ಗಳಿಗೆ ಮಾರಾಟ ಪ್ರಮಾಣ ಪತ್ರವನ್ನು ವಿತರಿಸುವಂತೆ ಜಿಲ್ಲಾ ವಾರು ಕೌಶಲ್ಯಾಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಜಿಲ್ಲಾ ಕೌಶಲ್ಯ ಮಿಷನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:- ಭಾರತದಲ್ಲಿ 24ಗಂಟೆಗಳಲ್ಲಿ 8,503 ಕೋವಿಡ್ ಪ್ರಕರಣ ಪತ್ತೆ, 7,678 ಮಂದಿ ಗುಣಮುಖ
ಬೆರಳೆಣಿಕೆಯಷ್ಟು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಟ್ಟಣ ಮಾರಾಟ ಸಮಿತಿ ರಚನೆ ಆಗಿದೆ. ಆದರೆ ಹಲವು ಕಡೆಗಳಲ್ಲಿ ಪಟ್ಟಣ ವ್ಯಾಪಾರ ಸಮಿತಿ ರಚನೆ ಆಗಿಲ್ಲ.ಆ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿ ಗಳ ಅನುಕೂಲಕ್ಕಾಗಿ ಕೂಡಲೇ ಪಟ್ಟಣ ವ್ಯಾಪಾರ ಸಮಿತಿ ರಚನೆ ಮಾಡಿ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ.
ಹಾಗೆಯೇ ಪಟ್ಟಣ ಮಾರಾಟ ಸಮಿತಿಯ ಸಭೆ ನಡೆದಾಗ ಸಮಿತಿಯ ಸದಸ್ಯರುಗಳಿಗೆ ಭತ್ಯಗಳನ್ನು ನೀಡುವಂತೆ ತಿಳಿಸಿದೆ. ಬೀದಿ ಬದಿ ಮಾರುಕಟ್ಟೆ ವಲಯವನ್ನು ಅಭಿವೃದ್ಧಿಗಳಿಸುವಂತೆ ಕೂಡ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಬೀದಿ ಬದಿ ವ್ಯಾಪಾರಿಗಳಿಗೆ ಪೊಲೀಸರಿಂದಲೂ ಕಿರಿಕಿರಿಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನೋಂದಾಯಿತ ಬೀದಿ ಬದಿ ವ್ಯಾಪಾರಿಗಳ ಪಟ್ಟಿಯನ್ನು ಪೊಲೀಸ್ ಠಾಣೆಗೆ ನೀಡುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜಿಲ್ಲಾ ಕೌಶಲ್ಯ ಮಿಷನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆದಿರಲಿಲ್ಲ.
ಈ ಸಂಬಂಧ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಲ್ಲಿ ಮನವಿ ಮಾಡಿತ್ತು. ಜತೆಗೆ ರಾಜ್ಯ ಸರ್ಕಾರಕ್ಕೆ ಪತ್ರವನ್ನು ಬರೆದಿತ್ತು.ಇದೀಗ ಸರ್ಕಾರ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸುಮಾರು ರಾಜ್ಯ ವ್ಯಾಪಿ ಸುಮಾರು 3.5 ಲಕ್ಷಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಹೇಳಿದೆ.
ಎಷ್ಟಿದ್ದಾರೆ ಬೀದಿ ಬದಿ ವ್ಯಾಪಾರಿಗಳು?
2017 -18ನೇ ಸಾಲಿನಲ್ಲಿ ರಾಜ್ಯವ್ಯಾಪಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆದಿತ್ತು. ಆಗ ರಾಜ್ಯವ್ಯಾಪಿ ಸುಮಾರು 2.6 ಲಕ್ಷ ಜನರು ಹೆಸರು ನೋಂ ದಾಯಿಸಿಕೊಂಡಿದ್ದರು. ಅದರಲ್ಲಿ ಸರ್ಕಾರ 1.21 ಲಕ್ಷ ಜನರಿಗೆ ಮಾತ್ರ ಗುರುತಿನ ಚೀಟಿಯನ್ನು ನೀಡಿತ್ತು. ಹಾಗೆಯೇ ಬೆಂಗಳೂರಿನಲ್ಲಿ 63 ಸಾವಿರ ಜನ ಬೀದಿ ಬದಿ ವ್ಯಾಪಾರಿಗಳು ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಿದ್ದರು.
ಅದರಲ್ಲಿ ಸುಮಾರು 25 ಸಾವಿರ ಜನರಿಗೆ ಮಾತ್ರ ಸರ್ಕಾರ ಗುರುತಿನ ಚೀಟಿ ನೀಡಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಹೇಳಿದೆ.
“ ಗುರುತಿನ ಚೀಟಿಯಿಲ್ಲದ ಹಿನ್ನೆಲೆಯಲ್ಲಿ ಕೋವಿಡ್ ಸಂಕಷ್ಟದ ವೇಳೆ ಸಾವಿರಾರು ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಘೋಷಣೆ ಮಾಡಿದ್ದ ಸವಲತ್ತುಗಳಿಂದ ವಂಚಿತರಾಗಿದ್ದರು. ಈಗ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರು ಅರ್ಹ ಎಲ್ಲ ಬೀದಿ ಬದಿ ವ್ಯಾಪಾರಿಗಳಿಗೆ ಮಾರಾಟ ಪ್ರಮಾಣ ಪತ್ರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದು ಸಂತಸ ತಂದಿದೆ.” ●ರಂಗಸ್ವಾಮಿ, ಅಧ್ಯಕ್ಷರು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ
– ದೇವೇಶ ಸೂರಗುಪ್ಪ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.