ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರ ಬದ್ಧ
Team Udayavani, Feb 22, 2018, 10:59 AM IST
ಬೆಂಗಳೂರು: ನ್ಯಾ.ಎ.ಜೆ. ಸದಾಶಿವ ಆಯೋಗ ವರದಿಯ ಸಾಧಕ-ಬಾಧಕಗಳ ಪರಿಶೀಲನೆಗಾಗಿ ಉಪಸಮಿತಿ
ರಚಿಸಿದ್ದು, ಈ ಸಮಿತಿ ವರದಿ ನೀಡಿದ ತಕ್ಷಣ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ
ಸಿದ್ದರಾಮಯ್ಯ ಭರವಸೆ ನೀಡಿದರು.
ನಗರದ ಮಾಗಡಿ ರಸ್ತೆ ಜಂಕ್ಷನ್ ಬಳಿ ನಿರ್ಮಿಸಲು ಉದ್ದೇಶಿಸಿರುವ ಡಾ.ಬಾಬು ಜಗಜೀವನ್ ರಾಂ ಭವನ (ಅಧ್ಯಯನ ಮತ್ತು ಸಂಶೋಧನಾ ಕೇಂದ್ರ)ಕ್ಕೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಯಾವುದೇ ರೀತಿ ವಿರೋಧ ಇಲ್ಲ. ಆದರೆ, ಎಲ್ಲವೂ ಕಾನೂನಿನ ಚೌಕಟ್ಟಿ
ನಲ್ಲಿ ಆಗಬೇಕಾಗುತ್ತದೆ. ಆದ್ದರಿಂದ ಈ ಸಂಬಂಧದ ಸಾಧಕ- ಬಾಧಕಗಳ ಅಧ್ಯಯನಕ್ಕೆ ಉಪಸಮಿತಿ ರಚಿಸಲಾಗಿದೆ. ಈ ಸಮಿತಿ ವರದಿ ನೀಡಲಿದ್ದು, ಅದನ್ನು ಆಧರಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ಬಡ್ತಿ ಮೀಸಲಾತಿ; ಧಮ್ಕಿ ಹಾಕಿದ್ರು : ಬಡ್ತಿ ಮೀಸಲಾತಿ ಜಾರಿಗೊಳಿಸಲು ಶೇ. 82ರಷ್ಟು ಜನರನ್ನು ವಿರೋಧ
ಕಟ್ಟಿಕೊಳ್ಳುತ್ತೀರಾ’ ಎಂದು ಧಮ್ಕಿ ಹಾಕಿದರು. ಆದರೆ, “ಅದಾವುದಕ್ಕೂ ನಾನು ಕ್ಯಾರೆ ಎನ್ನಲಿಲ್ಲ ಎಂದರು.
ಸ್ವಾಭಿಮಾನದ ಬದುಕೂ ಅಭಿವೃದ್ಧಿ: ಇದಕ್ಕೂ ಮುನ್ನ ಲೋಕಸಭೆ ಮಾಜಿ ಸ್ಪೀಕರ್ ಮೀರಾ ಕುಮಾರ್ ಮಾತನಾಡಿ,
ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸ್ವಾಭಿಮಾನದಿಂದ ತಲೆಯೆತ್ತಿ ಬದುಕುವಂತಹ ವಾತಾವರಣ ಕಲ್ಪಿಸುವುದು
ನಿಜವಾದ ಅಭಿವೃದ್ಧಿ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿದರು. ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಶಾಸಕರಾದ ಮುನಿರತ್ನ, ವಿ.ಎಸ್. ಉಗ್ರಪ್ಪ, ಮೇಯರ್ ಸಂಪತ್‌ರಾಜ್ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಹಿರಿಯ ಚಿತ್ರಕಲಾವಿದ ಡಾ.ಚಂದ್ರಶೇಖರ್ ಅವರಿಗೆ 5 ಲಕ್ಷದ ಚೆಕ್, ಚಿನ್ನದ ಪದಕ ನೀಡಿ ಸನ್ಮಾನಿಸ ಲಾಯಿತು. ವಿವಿಧ ಕಾಮಗಾರಿ ಉದ್ಘಾಟಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.