ಸರ್ಕಾರ ಅಸ್ಥಿರಗೊಳಿಸುವ ಕುತಂತ್ರ ಫಲಿಸದು


Team Udayavani, Nov 26, 2019, 3:06 AM IST

sarkara-ast

ಬೆಂಗಳೂರು: ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಕಾಂಗ್ರೆಸ್‌, ಜೆಡಿಎಸ್‌ ಕುತಂತ್ರ ಫಲಿಸುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಅವರಿಗೆ ಬಲ ತುಂಬಲು ಗೃಹಲಕ್ಷ್ಮೀ ಬಡಾವಣೆಯ ಬಿಜೆಪಿ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಅಪವಿತ್ರ ಮೈತ್ರಿ ಸರ್ಕಾರದಿಂದ ಹೊರಬಂದ ಶಾಸಕರನ್ನು ಸೋಲಿಸಲು ಕಾಂಗ್ರೆಸ್‌, ಜೆಡಿಎಸ್‌ಗಳು ಕುತಂತ್ರ ನಡೆಸಿವೆ. ಇದರೊಂದಿಗೆ ಬಿಜೆಪಿ ಸರ್ಕಾರ ಅಸ್ಥಿರಗೊಳಿಸುವುದಕ್ಕೆ ಕೈ ಹಾಕಿವೆ. ಅವರ ಪ್ರಯತ್ನ ವಿಫಲವಾಗುವಂತೆ ಮೈಮರೆಯದೇ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಮಹಾಲಕ್ಷ್ಮೀ ಲೇಔಟ್‌ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಮಾತನಾಡಿ, ಕ್ಷೇತ್ರದ ನಿವಾಸಿಗಳೊಂದಿಗೆ ಉತ್ತಮ ಒಡನಾಟ ಹೊಂದಲು ಹಾಗೂ ಸಂಕಷ್ಟಗಳಿಗೆ ನಿರಂತರವಾಗಿ ಸ್ಪಂದಿಸುವ ದೃಷ್ಟಿಯಿಂದ ಕಚೇರಿ ತೆರಯಲಾಗಿದೆ. ಸ್ವಾರ್ಥ ಸಾಧನೆಗಾಗಿ ನಾನು ರಾಜೀನಾಮೆ ನೀಡಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ಸಿಗದ ಹಿನ್ನಲೆಯಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಸಿಡಿದು ಹೊರಬಂದಿದ್ದೇನೆ. ನನ್ನ ವಿರುದ್ಧ ಅಪಪ್ರಚಾರ ಮಾಡುವವರಿಗೆ ತಕ್ಕ ಉತ್ತರ ನೀಡಿ ಎಂದು ಹೇಳಿದರು.

ಕ್ಷೇತ್ರದಲ್ಲಿ ಬಡವರು ಜೀವನ ಕಟ್ಟಿಕೊಳ್ಳಲು ಅಗತ್ಯವಿರುವ ಸಹಾಯ ಸಹಕಾರ ನೀಡುವುದು ನನ್ನ ಮಹದಾಸೆಯಾಗಿದೆ. ಶಾಸಕನಾಗಿ ನನ್ನನ್ನು ಆಯ್ಕೆ ಮಾಡಿದರೆ ಅಶಕ್ತರಿಗೆ ಆಸರೆ ಒದಗಿಸಲಾಗುವುದು ಎಂದು ಹೇಳಿದರು. ಕಮಲಾನಗರ, ಬಸವೇಶ್ವರನಗರ, ಇತರೆಡೆಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ ಮಾಜಿ ಶಾಸಕ ಜಗ್ಗೇಶ್‌ ಮಾತನಾಡಿ, ಸ್ನಾನಕ್ಕೆ ನದಿ ನೀರು ಶ್ರೇಷ್ಠ. ಅದರಲ್ಲೂ ಎರಡು ನದಿಗಳು ಕೂಡುವ ಸಂಗಮ ಸ್ಥಳದಲ್ಲಿ ಸ್ನಾನ ಮಾಡುವುದು ಪವಿತ್ರ ಎಂಬ ಭಾವನೆಯಿದೆ. ಜೆಡಿಎಸ್‌ನ ಗೋಪಾಲಯ್ಯ ಎಂಬ ನದಿ ಬಿಜೆಪಿಯ ನದಿಯೊಂದಿಗೆ ಸಮ್ಮಿಲನವಾಗಿರುವುದರಿಂದ ಶ್ರೇಷ್ಠತೆ ಹೆಚ್ಚಿದೆ.

ಗೋಪಾಲಯ್ಯರನ್ನು ವಿಜಯಶಾಲಿಯನ್ನಾಗಿ ಮಾಡಿ ಎಂದು ಮನವಿ ಮಾಡಿದರು. ಸಚಿವ ಸುರೇಶ್‌ ಕುಮಾರ್‌, ಸಂಸದ ತೇಜಸ್ವಿ ಸೂರ್ಯ, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಪಾಲಿಕೆ ಮಾಜಿ ಉಪಮೇಯರ್‌ ಎಸ್‌.ಹರೀಶ್‌, ನಗರ ಬಿಜೆಪಿ ಹೋಟೆಲ್‌ ಮಾಲೀಕರ ಪ್ರಕೋಷ್ಠದ ಸಂಚಾಲಕ ರಾಘವೇಂದ್ರ ಶೆಟ್ಟಿ ಪ್ರಚಾರ ನಡೆಸಿದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.