ಟ್ರಾಫಿಕ್ ಹೆಚ್ಚಲು ಸರ್ಕಾರ ಕಾರಣ
Team Udayavani, May 4, 2018, 11:45 AM IST
ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾರಾಯಣಸ್ವಾಮಿ, ಬಿನ್ನಿಪೇಟೆಯಲ್ಲಿ ರ್ಯಾಲಿ ನಡೆಸುವ ಮೂಲಕ ಗುರುವಾರ ಪ್ರಚಾರ ನಡೆಸಿದರು.ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಬೆಂಗಳೂರು ನಗರ ಹಾಗೂ ಗಾಂಧಿನಗರದಲ್ಲಿ ಹದಗೆಟ್ಟ ರಸ್ತೆಗಳ ಪರಿಣಾಮ ದಿನೆ ದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆಯಿಂದ ನಾಗರಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕಳೆದ ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಸಂಚಾರ ದಟ್ಟಣೆ ನಿವಾರಿಸಲು ಯಾವುದೇ ರೀತಿಯಲ್ಲಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳದೆ ಜವಾಬ್ದಾರಿಯಿಂದ ನುಣಚಿಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಹಾಗೂ ಕಾರು ಸಹಿತ 50 ಲಕ್ಷಕ್ಕೂ ಅಧಿಕ ವಾಹನಗಳಿವೆ. ರಾಜ್ಯ ಸರಕಾರ ಪರಿಣಾಮಕಾರಿಯಾಗಿ ಸಮೂಹ ಸಾರಿಗೆ ಸೌಲಭ್ಯ ಕಲ್ಪಿಸದೆ ಇರುವುದರಿಂದ ಸಂಚಾರಿ ದಟ್ಟಣೆ ಸಮಸ್ಯೆ ಉಲ್ಬಣವಾಗಲು ಕಾರಣವಾಗಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲು ಈ ಬಾರಿ ಶಾಸಕನಾಗಿ ಆಯ್ಕೆ ಮಾಡುವಂತೆ ಕೋರಿದರು. ಜೆಡಿಎಸ್ ಮುಖಂಡ ಹಾಗೂ ಪಾಲಿಕೆ ಮಾಜಿ ಸದಸ್ಯ ಮಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.