ಸರ್ಕಾರ ವೃಂದಾವನ ರಕ್ಷಣೆ ಹೊಣೆ ಹೊರಲಿ: ಶ್ರೀ

Team Udayavani, Jul 25, 2019, 3:02 AM IST

sarka

ಕೆಂಗೇರಿ: ವ್ಯಾಸರಾಜರ ಸ್ಮಾರಕವಾಗಿರುವ ನವ ವೃಂದಾವನ ಸ್ಥಳವನ್ನು ಸಂರಕ್ಷಿಸುವ ಗುರುತರ ಜವಾಬ್ದಾರಿ ಸರ್ಕಾರದ್ದಾಗಿದ್ದು, ವೃಂದಾವನ ಸ್ಥಳಕ್ಕೆ ಸೂಕ್ತ ರಕ್ಷಣೆ ನೀಡಬೇಕು ಎಂಬ ನಿರ್ಣಯವನ್ನು ಅಖಿಲ ಭಾರತ ಮಾಧ್ವ ಮಹಾಮಂಡಲ ಕೈಗೊಂಡಿದೆ ಎಂದು ಉಡುಪಿಯ ಪೇಜಾವರ ಮಠದ ಪೀಠಾಧ್ಯಕ್ಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

ಕೊಪ್ಪಳ ಜಿಲ್ಲೆಯ ಆನೆಗೊಂದಿಯಲ್ಲಿ ನಿಧಿ ಆಸೆಗಾಗಿ ಧ್ವಂಸ ಮಾಡಲಾಗಿದ್ದ ಶ್ರೀ ವಾಸರಾಜರ ವೃಂದಾವನ ಮರು ನಿರ್ಮಾಣ ಕಾರ್ಯದಲ್ಲಿ ಪೇಜಾವರ ಶ್ರೀಗಳು ಸ್ವತಃ ತೊಡಗಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಮಾಧ್ವ ಮಹಾಸಭಾ ವತಿಯಿಂದ ಬುಧವಾರ ಕೆಂಗೇರಿಯಲ್ಲಿ ಶ್ರೀಗಳಿಗೆ ಗೌರವ ಅಭಿನಂದನೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ವ್ಯಾಸರಾಜರು ನಮ್ಮೆಲ್ಲರ ಹೆಮ್ಮೆಯ ವ್ಯಕ್ತಿಯಾಗಿದ್ದು, ನಮಗೆಲ್ಲರಿಗೂ ಅವರು ಮಾರ್ಗದರ್ಶನ ಮಾಡಿದ್ದಾರೆ. ಲೌಕಿಕವಾಗಿ, ಆಧ್ಯಾತ್ಮಿಕವಾಗಿ ವ್ಯಾಸರಾಜರ ಸಾಧನೆ ಅನನ್ಯವಾದುದು ಎಂದರು.

ಸಾಮಾನ್ಯ ಜನರಿಗಾಗಿ ದಾಸ ಸಾಹಿತ್ಯವನ್ನು ಉತ್ತೇಜಿಸಿ, ಕನಕ, ಪುರಂದರರಂತಹ ದಾಸ ಶ್ರೇಷ್ಠರನ್ನು ವ್ಯಾಸರಾಜರು ನಮಗೆ ಕೊಟ್ಟಿದ್ದಾರೆ. ಶಾಸ್ತ್ರಗಳ ವಿಚಾರದಲ್ಲಂತೂ ಅವರದು ಅದ್ಭುತವಾದ ಸಾಧನೆ. ಇಂತಹ ಮಹನೀಯರ ವೃಂದಾವನವನ್ನು ರಕ್ಷಿಸಲು ಮಾಧ್ವ ಮಠಗಳ ಪೀಠಾಧ್ಯಕ್ಷರ ಜತೆಗೆ ಸರ್ಕಾರ ಹಾಗೂ ಸಾರ್ವಜನಿಕರೂ ಕೈಜೋಡಿಸಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಅಖಿಲ ಕರ್ನಾಟಕ ಮಾಧ್ವ ಮಹಾಸಭಾದ ಗೌರವಾಧ್ಯಕ್ಷ ವಿದ್ಯಾವಾಚಸ್ಪತಿ ಡಾ.ಅರಳು ಮಲ್ಲಿಗೆ ಪಾರ್ಥಸಾರಥಿ, 89ರ ಇಳಿ ವಯಸ್ಸಿನಲ್ಲೂ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ನಮ್ಮ ಧರ್ಮ, ಪರಂಪರೆಯ ರಕ್ಷಣೆಗಾಗಿ ಪಾದರಸದಂತೆ ಕಾರ್ಯನಿರ್ವಹಿಸುತ್ತಿದ್ದಾರೆ.

ಆನೆಗೊಂದಿಯ ಶ್ರೀ ವ್ಯಾಸರಾಜರ ವೃಂದಾವನವನ್ನು ಕಿಡಿಗೇಡಿಗಳು ನಾಶ ಪಡಿಸಿರುವ ವಿಷಯ ತಿಳಿದು, ದೂರದ ಮುಂಬೈನಿಂದ ಹುಬ್ಬಳ್ಳಿಗೆ ಬಂದ ಶ್ರೀಗಳು, ಅಲ್ಲಿಂದ ಸರಿರಾತ್ರಿಯೇ ಆನೆಗೂಂದಿ ತಲುಪಿ, ಇತರ ಮಾಧ್ವ ಯತಿಗಳ ಜತೆಗೂಡಿ ವೃಂದಾವನ ಪುನರ್‌ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡು ನಮಗೆಲ್ಲ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಾಸಭಾ ಅಧ್ಯಕ್ಷ ಡಾ.ಕೆ.ರಾಮಕೃಷ್ಣ, ನಿರ್ದೇಶಕರಾದ ಮುರಳೀಧರ, ಕನ್ನಡ ತಿಂಡಿ ಕೇಂದ್ರದ ಡಾ.ಕೆ.ವಿ.ರಾಮಚಂದ್ರ, ಕಲ್ಪತರು ಸಾಂಸ್ಕೃತಿಕ, ಸಾಮಾಜಿಕ ಮತ್ತು ಕ್ರೀಡಾ ಟ್ರಸ್ಟ್‌ ಅಧ್ಯಕ್ಷ ನ.ಶ್ರೀ.ಸುಧೀಂದ್ರರಾವ್‌, ಗುಂಡಣ್ಣ, ಡಾ.ರಾಜಲಕ್ಷ್ಮೀ ಪಾರ್ಥಸಾರಥಿ, ಡಾ.ವಿದ್ಯಾಶ್ರೀ ಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.