ಜನರಿಂದ ದುಡ್ಡು ದೋಚುತ್ತಿರುವ ಸರ್ಕಾರ
Team Udayavani, Mar 23, 2018, 11:49 AM IST
ಬೆಂಗಳೂರು: ಅನ್ನಭಾಗ್ಯ ಕೊಟ್ಟು ಬಡವರ ಹೊಟ್ಟೆ ತುಂಬಿಸುತ್ತೇವೆ ಎಂದು ಬಡಾಯಿ ಕೊಚ್ಚುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತೂಂದೆಡೆ ಮದ್ಯ ಮಾರಾಟ ಹೆಚ್ಚಿಸಲು ಅದನ್ನು ಕಂಡ ಕಂಡಲ್ಲಿ ಮಾರಲು ಅವಕಾಶ ಮಾಡುಕೊಡುವ ಮೂಲಕ ಬಡವರನ್ನು ಕುಡುಕರನ್ನಾಗಿ ಮಾಡಿ ಅವರ ಜೇಬು ಖಾಲಿ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಮದ್ಯ ಮಾರಾಟ ಹೆಚ್ಚಾಗುತ್ತಿದ್ದು, ಬಡವರ ಮನೆ ಮಕ್ಕಳು ಕುಡಿತದ ಚಟಕ್ಕೆ ಬೀಳುತ್ತಿದ್ದಾರೆ. ಒಂದು ರೂಪಾಯಿಗೆ ಅಕ್ಕಿ ಕೊಟ್ಟು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೇವೆ ಎನ್ನುತ್ತಾ ಮದ್ಯದ ಹೆಸರಿನಲ್ಲಿ ಬಡವರ ಜೇಬಿನಿಂದ ತಿಂಗಳಿಗೆ ಸಾವಿರಾರು ರೂ. ದರೋಡೆ ಮಾಡುತ್ತಿದ್ದಾರೆ.
ಇಂತಹ ಸರ್ಕಾರದ ಬಗ್ಗೆ ಮಹಿಳೆಯರು ಎಚ್ಚರಿಕೆ ವಹಿಸಬೇಕು ಎಂದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆಯೂ ಕಿಡಿ ಕಾರಿದ ಕುಮಾರಸ್ವಾಮಿ, ಪಾಪ ರಾಹುಲ… ಗಾಂಧಿಗೆ ಕರ್ನಾಟಕದ ಬಗ್ಗೆ ಏನೂ ಗೊತ್ತಿಲ್ಲ. ಜೆಡಿಎಸ್ ಪಕ್ಷವನ್ನು ಬಿಜೆಪಿಯ “ಬಿ’ ಟೀಂ ಎಂದು ಟೀಕೆ ಮಾಡುತ್ತೀರಾ? ನಾನು ಬಿಜೆಪಿ ಪಕ್ಕ ನಿಂತು ಕೆಮ್ಮಿದರೆ ಸಾಕು, ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗುತ್ತದೆ ಎಂದು ಸೂಕ್ಷ್ಮವಾಗಿ ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ವಾಗ್ಧಾಳಿ ನಡೆಸಿದ ಅವರು, ನಂಜನಗೂಡು ಉಪ ಚುನಾವಣೆಗೆ ಅಭ್ಯರ್ಥಿ ಹಾಕಲು ಸಾಧ್ಯವಾಗದೆ ಜೆಡಿಎಸ್ ಅಭ್ಯರ್ಥಿಯನ್ನು ಹೈಜಾಕ್ ಮಾಡಿದ ಸಿದ್ದರಾಮಯ್ಯ ಅಂಥವರು ನೂರು ಜನ ಬಂದರೂ ರಾಜ್ಯದಲ್ಲಿ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ ಎಂದರು. ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಹಿಂದೆ ಬಿಬಿಎಂಪಿಯಲ್ಲಿ ಅಧಿಕಾರಕ್ಕೆ ಬರಲು ರಾಮಲಿಂಗಾರೆಡ್ಡಿ ಮತ್ತು ದಿನೇಶ್ ಗುಂಡೂರಾವ್ ಮನೆಗೆ ಬಂದು ಬೆಂಬಲ ಕೊಡಿ ಎಂದು ಕೋರಿದರು. ಆದರೆ, ಅಧಿಕಾರಕ್ಕೆ ಬಂದ ಮೇಲೆ ಬಿಬಿಎಂಪಿಯಲ್ಲಿ ಜೆಡಿಎಸ್ ಬಗ್ಗೆ ಕಾಂಗ್ರೆಸ್ ನಡೆದುಕೊಳ್ಳುತ್ತಿರುವ ರೀತಿ ಸರಿಯೇ? ನಮ್ಮನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೂ ಪರವಾಗಿಲ್ಲ. ಬೆಂಗಳೂರನ್ನಾದರೂ ಸರಿಯಾಗಿ ಕಾಂಗ್ರೆಸ್‌ನವರು ನೋಡಿಕೊಳ್ಳಲಿ.
-ಎಚ್.ಡಿ.ಕುಮಾರಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.