ಸರ್ಕಾರ ನಿಮ್ಮೊಂದಿಗಿದೆ, ಆತ್ಮಹತ್ಯೆ ಮಾಡ್ಕೊಬೇಡಿ
Team Udayavani, Nov 17, 2018, 12:43 PM IST
ಬೆಂಗಳೂರು: ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ಸದಾ ರೈತರೊಂದಿಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆ ನಿರ್ಧಾರ ಕೈಗೊಳ್ಳಬಾರದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮನವಿ ಮಾಡಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆಯೋಜಿಸಿರುವ “ಕೃಷಿಮೇಳ-2018’ರ ಎರಡನೇ ದಿನ ನಡೆದ ಯಶಸ್ವಿ ರೈತರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಿಗದಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗಿಲ್ಲ. ಇದರಿಂದ ಸುಮಾರು 100 ತಾಲೂಕುಗಳಲ್ಲಿ ಬರದ ಛಾಯೆ ಆವರಿಸಿದೆ. ಆ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸರ್ಕಾರ ನಿಮ್ಮೊಂದಿಗಿದ್ದು, ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ತೆಗೆದುಕೊಳ್ಳಬಾರದು ಎಂದರು.
ಕೃಷ್ಣ ಹಾಗೂ ಘಟಪ್ರಭಾ ನದಿಗಳಿಗೆ ಬ್ಯಾರೇಜ್ ನಿರ್ಮಿಸಿ ನೀರಾವರಿ ಸೌಲಭ್ಯ ಕಲ್ಪಿಸಿದ್ದರಿಂದ ಆ ಭಾಗದ ರೈತರು ಆರ್ಥಿಕವಾಗಿ ಸಬಲರಾಗಿದ್ದಾರೆ. ಸುಮಾರು 45 ಸಾವಿರ ಎಕರೆ ಜಾಗದಲ್ಲಿ ಕೃಷಿ ಚಟುವಟಿಕೆಗಳು ನಡೆಯುತ್ತಿದ್ದು, ಉಳಿದ ಜಿಲ್ಲೆಗಳಿಗೂ ನೀರಾವರಿ ಸೌಲಭ್ಯ ಒದಗಿಸಿದರೆ ರೈತರು ಆರ್ಥಿಕವಾಗಿ ಅಭಿವೃದ್ಧಿಯಾಗಲಿದ್ದಾರೆ ಎಂದು ಹೇಳಿದರು.
ಕೃಷಿಕರು ಹಾಗೂ ವಿಜ್ಞಾನಿಗಳಿಂದ ಭಾರತ ಇಂದು ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿದೆ. 1960ರಲ್ಲಿ ದೇಶದಲ್ಲಿ ಅಗತ್ಯದಷ್ಟು ಆಹಾರ ಉತ್ಪನ್ನಗಳಿಲ್ಲದೆ ವಿದೇಶಗಳಿಂದ ಆಮದು ಮಾಡಿಕೊಳ್ಳುವ ಸ್ಥಿತಿ ಇತ್ತು. ಆದರಿಂದು ಅದಕ್ಕೆ ಮೂರು ಪಟ್ಟು ಉತ್ಪನ್ನಗಳನ್ನು ರಪು¤ ಮಾಡುವ ಸಾಮರ್ಥ್ಯವನ್ನು ಭಾರತ ಪಡೆದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಚಾಮರಾಜನಗರ ಹಾಗೂ ಮೈಸೂರು ಭಾಗದ ಯಶಸ್ವಿ ರೈತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ಸಂಸದ ಮುದ್ದಹನುಮೇಗೌಡ, ಕೃಷಿ ವಿಶ್ವವಿದ್ಯಾಲಯದ ಡೀನ್ (ಸ್ನಾತಕೋತ್ತರ) ಡಾ.ಬಿ.ಎನ್.ಸತ್ಯನಾರಾಯಣ, ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ, ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.