ಬಡ್ತಿ ಮೀಡಲು ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲಿ ಸರ್ಕಾರ
Team Udayavani, Jul 1, 2017, 11:19 AM IST
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಎದುರಾದ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅಭಿಪ್ರಾಯಪಟ್ಟಿದ್ದಾರೆ.
“ಕರ್ನಾಟಕ ದಲಿತ ಸಂಘರ್ಷ ಸಮಿತಿ’ಯು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ 79ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, “ಸರ್ಕಾರಿ ನೌಕರರ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಆದ ದೊಡ್ಡ ಅನ್ಯಾಯ.
ತೀರ್ಪು ಮರುಪರಿಶೀಲನೆ ಒಂದೆಡೆಯಾದರೆ, ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ತಕ್ಷಣಕ್ಕೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲು ಅವಕಾಶವಿದೆ. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಬೇಕು,’ ಎಂದು ಹೇಳಿದರು.
ತಿದ್ದುಪಡಿ ತರಲಿ: ಬಡ್ತಿ ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಕೇವಲ ಕರ್ನಾಟಕಕ್ಕೆ ಅಲ್ಲ; ದೇಶಕ್ಕೆ ಅನ್ವಯ ಆಗಲಿದೆ. ಆದ್ದರಿಂದ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಈ ವಿಷಯವನ್ನು ಮಂಡಿಸಿ, ಅನುಮೋದನೆ ಪಡೆದು, ಸಂವಿಧಾನದ 117ನೇ ಕಲಂಗೆ ತಿದ್ದುಪಡಿ ತರಬೇಕು.
ಇದಕ್ಕೆ ಎಲ್ಲ ಸಂಸದರು ಪಕ್ಷಾತೀತವಾಗಿ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು. 1972ರಿಂದ ಈವರೆಗೆ ಬಡ್ತಿ ಮೀಸಲಾತಿ ವಿಚಾರದಲ್ಲಿ ಹಲವು ತಿದ್ದುಪಡಿಗಳಾಗಿವೆ. ಮತ್ತೂಂದು ತಿದ್ದುಪಡಿಯ ಅಗತ್ಯವೂ ಇದೆ. ಸುಪ್ರೀಂ ಕೋರ್ಟ್ ಕೂಡ ತನ್ನ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದರು.
ಮರುಪರಿಶೀಲನೆಗೆ ಸಿದ್ಧತೆ; ಸಚಿವ
ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಮಾತನಾಡಿ, “ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕಾನೂನು ತಜ್ಞರಿಂದ ಸಲಹೆಗಳನ್ನೂ ಪಡೆಯಲಾಗಿದೆ,’ ಎಂದರು. ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯ ಶ್ರೀಧರ ಕಲಿವೀರ, ಸಂಚಾಲಕರಾದ ಎಂ. ಸೋಮಶೇಖರ್, ವೆಂಕಟಗಿರಿಯಯ್ಯ, ದಾಸ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ಬಾಯ್ಮುಚ್ಕೋಂಡ್ ಇರ್ಬೇಕು ಅಂತ ಅಲ್ಲ
ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂದಾಕ್ಷಣ ಬಾಯಿಮುಚ್ಚಿಕೊಂಡು ಕೂರಬೇಕು ಎಂದರ್ಥವಲ್ಲ; ಸಾಂವಿಧಾನಾತ್ಮಕ ವಿಮರ್ಶೆಗೆ ಅವಕಾಶ ಇದೆ. ಆದ್ದರಿಂದ ಬಾಯಿಬಿಡಬೇಕಾಗುತ್ತದೆ. “ಬಡ್ತಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಮಾತನಾಡುವಂತಿಲ್ಲ’ ಎಂಬ ಸಚಿವ ಆಂಜನೇಯ ಅವರ ಮಾತಿಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ತೀಕ್ಷಣ್ಣ ಪ್ರತಿಕ್ರಿಯೆ ಇದು.
ವಿಚಾರ ಸಂಕಿರಣದಲ್ಲಿ ಮಾತನಾಡುತ್ತಿದ್ದ ಸಚಿವ ಆಂಜನೇಯ, “ಬಡ್ತಿ ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದರಿಂದ ಈ ಬಗ್ಗೆ ಯಾವುದೇ ಟೀಕೆ-ಟಿಪ್ಪಣಿ ಅಥವಾ ಪ್ರತಿಕ್ರಿಯೆ ನೀಡುವುದಿಲ್ಲ,’ ಎಂದು ಹೇಳಿ, ಕಾರ್ಯನಿಮಿತ್ತ ಕಾರ್ಯಕ್ರಮದಿಂದ ನಿರ್ಗಮಿಸಿದರು.
ನಂತರ ಮಾತನಾಡಿದ ನ್ಯಾ. ನಾಗಮೋಹನದಾಸ್, “ನ್ಯಾಯಾಂಗದ ತೀರ್ಪುಗಳನ್ನು ಸಾಂವಿಧಾನಾತ್ಮಕವಾಗಿ ವಿಮರ್ಶೆಗೊಳಪಡಿಸುವ ಹಕ್ಕು ಪ್ರತಿಯೊಬ್ಬ ನಾಗರಿಕರಿಗೂ ಇದೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂದರೆ, ಬಾಯಿಮುಚ್ಚಿಕೊಂಡು ಕೂರಬೇಕು ಎಂದರ್ಥವಲ್ಲ; ಅನ್ಯಾಯವಾದಾಗ ಬಾಯಿಬಿಡಬೇಕಾಗುತ್ತದೆ,’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.