ಸ್ತ್ರೀ ಪ್ರವೇಶಕ್ಕೆ ಸರ್ಕಾರದ ಕುಮ್ಮಕ್ಕು
Team Udayavani, Jan 4, 2019, 6:41 AM IST
ಬೆಂಗಳೂರು: ಮಹಿಳೆಯರಿಬ್ಬರು ಶಬರಿಮಲೆ ಸನ್ನಿಧಾನ ಪ್ರವೇಶಿಸಿರುವುದನ್ನು ವಿರೋಧಿಸಿ ಗುರುವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕರ್ತರು ಪ್ರತಿಭಟಿಸಿದರು.
ಅಯ್ಯಪ್ಪ ಭಕ್ತರ ಪಾಲಿಗೆ ಜ.2 ಕರಾಳ ದಿನ. ಸನ್ನಿಧಾನದ ಹಿಂಬಾಗಿಲ ಪ್ರವೇಶದ ಹಿಂದೆ ಕೇರಳ ಸರ್ಕಾರದ ಕುಮ್ಮಕ್ಕಿದೆ. ಶಬರಿಮಲೆ ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರಲು ಪ್ರೇರೆಪಣೆ ನೀಡುತ್ತಿರುವ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತದ ಸದಸ್ಯೆ ಯು.ಬಿ.ಆರತಿ ಮಾತನಾಡಿ, ಹಿಂದೂ ಭಾವನೆಗಳಿಗೆ ಧಕ್ಕೆತರುವ ರೀತಿಯಲ್ಲಿ ಕೇರಳ ಸರ್ಕಾರ ನಡೆದುಕೊಳ್ಳುತ್ತಿದೆ. ಮತಾಂತರಿಗಳು ಶಬರಿಮಲೆ ಸನ್ನಿಧಿಯನ್ನು ಅಪವಿತ್ರಗೊಳಿಸುವ ಕೆಲಸದಲ್ಲಿ ತೊಡಗಿದ್ದು, ಪಿಣರಾಯಿ ವಿಜಯನ್ ಸರ್ಕಾರ ಇದಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ದೂರಿದರು.
ವಿಶ್ವ ಹಿಂದೂ ಪರಿಷತ್ ಮುಖಂಡ ಬಾಬುನಾಥ್ ಮಾತನಾಡಿ, ಕೇರಳ ಸರ್ಕಾರ ಮಾವೋವಾದಿ ಮಹಿಳೆಯರನ್ನು ಸನ್ನಿಧಾನ ಅಪವಿತ್ರ ಮಾಡುವ ಕಾರ್ಯಕ್ಕೆ ಬಳಸಿಕೊಂಡಿದೆ. ಅಧಿಕಾರ ದುರುಪಯೋಗ ಮಾಡಿಕೊಂಡು ಹಿಂದೂ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಚಾಲಕ ಉಲ್ಲಾಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.