ಸರ್ಕಾರದ ನಿಯಮವೇ ಸರಿ ಇಲ್ಲ


Team Udayavani, Sep 15, 2017, 11:49 AM IST

apartment.jpg

ಬೆಂಗಳೂರು: ಅಪಾರ್ಟ್‌ಮೆಂಟ್‌ಗಳ ಫ್ಲ್ಯಾಟ್‌ಗಳಲ್ಲಿ ವಾಸವಿರುವ ಮಾಲೀಕರು ವಿದ್ಯುತ್‌ ಸಂಪರ್ಕ ಪಡೆಯಲು ಸ್ಥಳೀಯಾಡಳಿತಗಳಿಂದ ಸ್ವಾಧೀನ ಪತ್ರ ಪಡೆಯುವುದು ಕಡ್ಡಾಯ ಎಂಬ ಸರ್ಕಾರದ ನಿಯಮವೇ ಕಾನೂನುಬಾಹಿರ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.

ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವ ಫ್ಲ್ಯಾಟ್‌ ಮಾಲೀಕರಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಸ್ವಾಧೀನ ಪತ್ರ ಕಡ್ಡಾಯವಲ್ಲ ಎಂದು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗವು 2015ರಲ್ಲಿ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿರುವ ನ್ಯಾಯಮೂರ್ತಿ ವಿನೀತ್‌ ಕೊಠಾರಿ ಅವರಿದ್ದ ಏಕಸದಸ್ಯ ಪೀಠ, ಆಯೋಗದ ಆದೇಶ ರದ್ದು ಕೋರಿ ಬಿಬಿಎಂಪಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ.

ಅಪಾರ್ಟ್‌ಮೆಂಟ್‌ ನಿರ್ಮಾಣದಾರರು, ಮಾಲೀಕರು ಸ್ವಾಧೀನ ಪ್ರಮಾಣ ಪತ್ರವನ್ನು ಬಿಬಿಬಿಎಂಪಿಯೂ ಸೇರಿದಂತೆ ಸ್ಥಳೀಯಾಡಳಿತಗಳಿಂದ ಪಡೆದುಕೊಳ್ಳುವುದು ನಿಯಮಗಳಿಗೆ ಅನ್ವಯವಾಗಲಿದೆ. ಆದರೆ, ಅಪಾರ್ಟ್‌ಮೆಂಟ್‌ಗಳ ಫ್ಲ್ಯಾಟ್‌ಗಳಲ್ಲಿ ವಾಸ ಮಾಡುತ್ತಿರುವವರು, ಪ್ರತ್ಯೇಕವಾಗಿ ವಿದ್ಯುತ್‌ ಸಂಪರ್ಕ ಪಡೆದುಕೊಳ್ಳಲು ಸ್ಥಳೀಯಾಡಳಿತಗಳಿಂದ (ಬಿಬಿಎಂಪಿ) ಸ್ವಾಧೀನ ಪ್ರಮಾಣ ಪತ್ರ ಪತ್ರವನ್ನು ಪಡೆದುಕೊಳ್ಳಬೇಕು ಎಂಬ ನಿಯಮ ಕಾನೂನುಬಾಹಿರವಾಗಲಿದೆ.

ಕರ್ನಾಟಕ ವಿದ್ಯುತ್‌ ಕಾಯಿದೆ 2003ರ ಅನ್ವಯ ವಿದ್ಯುತ್‌ ಸಂಪರ್ಕ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು. ಅದರಂತೆ ಸ್ವಾಯತ್ತ ಸಂಸ್ಥೆ ಆಗಿರುವ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಹೊರಡಿಸಿರುವ ಆದೇಶ ಸರಿಯಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಏನಿದು ಪ್ರಕರಣ?
ಅಕ್ರಮ- ಸಕ್ರಮ ಯೋಜನೆ, ಹಾಗೂ ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಗಟ್ಟುವ ಸಲುವಾಗಿ ವಿದ್ಯುತ್‌ ಸಂಪರ್ಕ, ನೀರು ಪೂರೈಕೆಯನ್ನು ಪಡೆದುಕೊಳ್ಳುವ ಸಲುವಾಗಿ ಮನೆ ಮಾಲೀಕರು, ಕಟ್ಟಡ ನಿರ್ಮಾಣದಾರರು ಸ್ಥಳೀಯಾಡಳಿತಗಳಿಂದ ಸ್ವಾಧೀನ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಒಂದು ವೇಳೆ ಈ ಪ್ರಮಾಣಪತ್ರವಿಲ್ಲದೆ ಸಂಪರ್ಕ ಕಲ್ಪಸಿದರೆ ಎಕ್ಸಿಕ್ಯೂಟೀವ್‌ ಎಂಜಿನಿಯರ್‌ಗಳನ್ನು ಹೊಣೆ ಮಾಡಲಾಗುವುದು ಎಂದು 2014ರ ಜುಲೈ 18ರಂದು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು.

ಇದನ್ನು ಪ್ರಶ್ನಿಸಿ ವಿದ್ಯುತ್‌ ಗ್ರಾಹಕರ ಹಿತರಕ್ಷಣಾ ವೇದಿಕೆ ಹಾಗೂ ಪರವಾನಿಗೆ ಹೊಂದಿದ ವಿದ್ಯುತ್‌ ಗುತ್ತಿಗೆದಾರರ ಸಂಘ ಕರ್ನಾಟಕ ವಿದ್ಯುತ್‌ ಪ್ರಾಧಿಕಾರದ ಮೊರೆ ಹೋಗಿದ್ದವು, ಈ ಹಿನ್ನೆಲೆಯಲ್ಲಿ ಪ್ರಾಧಿಕಾರ  ವಿದ್ಯುತ್‌ ಸಂಪರ್ಕ ಪಡೆಯುವುದು ಎಲ್ಲರ ಹಕ್ಕು. ಸಂಪರ್ಕ ಕಲ್ಪಿಸಿ ಎಂದು ಅರ್ಜಿ ಸಲ್ಲಿಸುವವರಿಗೆ ನಿಯಮಗಳ ಅನ್ವಯ ಸಂಪರ್ಕ ನೀಡಬೇಕು, ಇಲ್ಲವೆಂದು ಹೇಳಲು ಸಾಧ್ಯವಾಗುವುದಿಲ್ಲ.

ಸ್ವಾಧೀನ ಪ್ರಮಾಣ ಪತ್ರವನ್ನೂ ಕಡ್ಡಾಯಗೊಳಿಸುವಂತಿಲ್ಲ ಎಂದು 2015ರ ಸೆಪ್ಟೆಂಬರ್‌ 9 ರಂದು ಬೆಸ್ಕಾಂ, ಹುಬ್ಬಳ್ಳಿ ಎಲೆಕ್ಟ್ರಿಕಲ್‌, ಸೇರಿದಂತೆ ವಿದ್ಯುತ್‌ ಪೂರೈಕೆ ಕಂಪೆನಿಗಳಿಗೆ ಆದೇಶ ಹೊರಡಿಸಿತ್ತು.ಈ ಆದೇಶ ಹೊರಡಿಸುವ ಮುನ್ನ ತಮ್ಮ ವಾದವನ್ನು ಪರಿಗಣಿಸಿಲ್ಲ ಹೀಗಾಗಿ ಕೆಇಆರ್‌ಸಿ ಆದೇಶ ರದ್ದುಗೊಳಿಸಿ ಪರಿಷ್ಕೃತ ಆದೇಶ ಹೊರಡಿಸುವಂತೆ ನಿರ್ದೇಶಿಸುವಂತೆ ಕೋರಿ ಬಿಬಿಎಂಪಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಟಾಪ್ ನ್ಯೂಸ್

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng

Actor Darshan: 6 ತಿಂಗಳ ಬಳಿಕ ದರ್ಶನ್‌ ಭೇಟಿ: ಪವಿತ್ರಾ ಭಾವುಕ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

6-bng

Actor Darshan: 6 ತಿಂಗಳ ಬಳಿಕ ದರ್ಶನ್‌ ಭೇಟಿ: ಪವಿತ್ರಾ ಭಾವುಕ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

5-mudhol

Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.