ಖಾಸಗಿ ಬ್ಯಾಂಕ್ ಹಿರಿಯ ಅಧಿಕಾರಿ ಪತ್ನಿ ನೇಣಿಗೆ ಶರಣು
Team Udayavani, Jan 10, 2017, 11:26 AM IST
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಖಾಸಗಿ ಬ್ಯಾಂಕ್ ಹಿರಿಯ ಅಧಿಕಾರಿಯೊಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿ ಸಮೀಪ ಘಟನೆ ನಡೆದಿದೆ.
ಇಲ್ಲಿನ ನಿವಾಸಿ ಪೂಜಾ (22) ಮೃತ ದುರ್ದೈವಿ. ಮನೆಯಲ್ಲಿ ಭಾನುವಾರ ಬೆಳಗ್ಗೆ ಪೂಜಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಧ್ಯಾಹ್ನ ಮೃತಳ ಸಂಬಂಧಿಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಎರಡು ವರ್ಷಗಳ ಹಿಂದೆ ಹಾಸನ ಜಿಲ್ಲೆ ಪೂಜಾ ಹಾಗೂ ಖಾಸಗಿ ಬ್ಯಾಂಕ್ ಹಿರಿಯ ಅಧಿಕಾರಿ ಶಿವರಾಜ್ ವಿವಾಹವಾಗಿದ್ದು, ಮದುವೆ ನಂತರ ಕೋಡಿಚಿಕ್ಕನಹಳ್ಳಿ ಬಳಿ ಅಪಾರ್ಟ್‌ಮೆಂಟ್‌ನಲ್ಲಿ ದಂಪತಿ ವಾಸವಾಗಿದ್ದರು. ಮದುವೆ ನಂತರ ಕೌಟುಂಬಿಕ ವಿಚಾರಗಳಿಗೆ ಸತಿ-ಪತಿ ನಡುವೆ ಮನಸ್ತಾಪವಾಗಿತ್ತು.
ಇತ್ತೀಚಿಗೆ ಶಿವರಾಜ್ ಸೋದರನ ಮದುವೆ ನಿಶ್ಚಯ ವಾಗಿದ್ದು, ಈ ಮದುವೆ ಸಿದ್ಧತಾ ಕಾರ್ಯಕ್ರಮಗಳಿಂದ ಪೂಜಾಳನ್ನು ಅವರು ದೂರವಿಟ್ಟಿದ್ದರು. ಜವಳಿ ಖರೀದಿ ಸಲುವಾಗಿ ಚಿಕ್ಕಪೇಟೆಗೆ ಭಾನುವಾರ ಶಿವರಾಜ್ ಕುಟುಂಬ ತೆರಳಿತು. ಆಗಲೂ ಆಕೆಯನ್ನು ಕರೆದಿರಲಿಲ್ಲ. ಈ ವಿಚಾರ ತಿಳಿದ ಪೂಜಾ, ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಬೆಳಗ್ಗೆ ತನ್ನ ಸೋದರ ಸಂಬಂಧಿಕರಿಗೆ ತಾನು ಬದುಕುವುದಿಲ್ಲ. ಇವತ್ತೇ ಕೊನೆ ದಿನವಾಗಿದೆ ಎಂದು ಪೂಜಾ ಎಸ್‌ಎಂಸ್ ಕಳುಹಿಸಿದ್ದಳು. ಈ ಸಂಗತಿ ತಿಳಿದ ಶಿವರಾಜ್, ಕೂಡಲೇ ಪತ್ನಿಗೆ ಮೊಬೈಲ್ ಹಲವು ಬಾರಿ ಕರೆ ಮಾಡಿದ್ದಾರೆ. ಆದರೆ, ಆಕೆಯಿಂದ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಅವರು, ತಕ್ಷಣವೇ ಬೊಮ್ಮನಹಳ್ಳಿ ಸಮೀಪ ನೆಲೆಸಿರುವ ತನ್ನ ಸಂಬಂಧಿಕರಿಗೆ ಕರೆ ಮಾಡಿ ಮನೆಗೆ ಹೋಗಿ ಪತ್ನಿ ಜತೆ ಮಾತನಾಡುವಂತೆ ಹೇಳಿದರು.
ಅದರಂತೆ ಅವರು ಬಂದಾಗ ಆತ್ಮಹತ್ಯೆ ಘಟನೆ ಗೊತ್ತಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಅಲ್ಲದೆ ಮೃತರ ಮನೆಯಲ್ಲಿ ಮರಣಪತ್ರ ಪತ್ತೆಯಾಗಿದ್ದು, ಇದರಲ್ಲಿ ತನ್ನ ಸಾವಿಗೆ ಪತಿ ಮತ್ತು ಮಾವನ ಕುಟುಂಬದವರು ಕಾರಣ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಶಿವರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ನೌಕರನ ಕತ್ತು ಕೊಯ್ದು ಕೊಲೆ
ಬೆಂಗಳೂರು: ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕತ್ತು ಕೊಯ್ದು ಕೊಂದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಪೀಣ್ಯ ಸಮೀಪ ಎಂಇಐ ಲೇಔಟ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಇಲ್ಲಿ ನಿವಾಸಿ ವರದರಾಜು (32) ಕೊಲೆಯಾದ ದುರ್ದೈವಿ. ವರದರಾಜು ಅವರ ಮನೆಗೆ ಸುಮಾರು ರಾತ್ರಿ 9.30ರಿಂದ 10 ಗಂಟೆಯೊಳಗೆ ಈ ಕೃತ್ಯ ನಡೆದಿದ್ದು, ಈ ಪ್ರಕರಣದಲ್ಲಿ ಮೃತನ ಪರಿಚಿತರು ಪಾಲ್ಗೊಂಡಿರುವ ಶಂಕೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
ಖಾಸಗಿ ಕಂಪನಿಯ ಉದ್ಯೋಗದಲ್ಲಿದ್ದ ವರದರಾಜು ಅವರು, ಎಂಇಐ ಲೇಔಟ್‌ನಲ್ಲಿ ವಾಸವಾಗಿದ್ದರು. ರಾತ್ರಿ ಮನೆಯಲ್ಲಿದ್ದ ಒಬ್ಬರೇ ಇದ್ದಾಗ ದುಷ್ಕರ್ಮಿಗಳ ಪ್ರವೇಶವಾಗಿದೆ. ಆಗ ಅವರ ಕತ್ತು ಕೊಯ್ದು ಕೊಂದು ಆರೋಪಿಗಳು ಪರಾರಿಯಾಗಿದ್ದು, ಮೃತರ ಸ್ನೇಹಿತರು ಮನೆಗೆ ಬಂದಾಗ ಪ್ರಕರಣಗಳ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.