ಎಸ್ಸಿ, ಎಸ್ಟಿ ಹಾಸ್ಟೆಲ್‌ಗ‌ಳ ಪರಿಸ್ಥಿತಿಗೆ ಹೈಕೋರ್ಟ್‌ ಬೇಸರ


Team Udayavani, Dec 13, 2017, 12:56 PM IST

highcourt3.jpg

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸೇರಿದಂತೆ ಇನ್ನಿತರೆ ಸರ್ಕಾರಿ ಹಾಸ್ಟೆಲ್‌ಗ‌ಳಿಗೆ ಹೋಗಿ ಸಂಬಂಧಪಟ್ಟ ಕಾರ್ಯದರ್ಶಿಗಳು ಭೇಟಿ ನೀಡಲಿ ಅಲ್ಲಿನ ವಾಸ್ತವ ಗೊತ್ತಾಗುತ್ತೆ ಎಂದು ಹೈಕೋರ್ಟ್‌ ವಿಭಾಗೀಯ ಪೀಠ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಿದ್ಯಾರ್ಥಿಗಳ ಹಾಸ್ಟೆಲ್‌ಗ‌ಳಲ್ಲಿ ಮೂಲಸೌಕರ್ಯಗಳ ಕೊರತೆಯಿದೆ. ಸರ್ಕಾರದಿಂದ ಬಿಡುಗಡೆಯಾದ ಹಣ  ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ  ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್‌.ಜಿ. ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ  ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಸರ್ಕಾರ ಎಸ್‌ಸಿಪಿಟಿಎಸ್‌ಪಿ ಕಾಯಿದೆ ಅಡಿ  2017-18ರ ಬಜೆಟ್‌ನಲ್ಲಿ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಹಾಸ್ಟೆಲ್‌ಗ‌ಳ ನಿರ್ವಹಣೆ ಹಾಗೂ ಅಭಿವೃದ್ಧಿಗೆ 1369.39 ಕೋಟಿ  ರೂ. ಮೀಸಲಿಟ್ಟಿದೆ. ಇದಲ್ಲದೆ ಸಾವಿರಾರು ಕೋಟಿ ನೀಡುತ್ತಿದೆ. ಅನುದಾನ ಸಮರ್ಪಕವಾಗಿ ಬಳಕೆಯಾಗಿಲ್ಲ. ರಾಜ್ಯದಲ್ಲಿರುವ 2000ಕ್ಕೂ ಅಧಿಕ ಹಾಸ್ಟೆಲ್‌ಗ‌ಳಲ್ಲಿ ಸರಿಯಾದ ಮೂಲ ಸೌಲಭ್ಯಗಳನ್ನು ಕಲ್ಪಿಸಿಲ್ಲ.

ಪರಿಣಾಮ ವಿದ್ಯಾರ್ಥಿಗಳು ಸಿಗಬೇಕಾದ ನ್ಯಾಯಯುತ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ. ಜೊತೆಗೆ ಮಕ್ಕಳ ಹಕ್ಕುಗಳು  ಉಲ್ಲಂಘನೆಯಾಗುತ್ತಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರ ಅನುದಾನ ನೀಡುತ್ತದೆ ಸರಿ. ಆದರೆ ವಿದ್ಯಾರ್ಥಿಗಳಿಗೆ ನೀಡಿದ ಹಣ ಸದ್ಬಳಕೆಯಾಗಬೇಕು. ಸಂಬಂಧಪಟ್ಟ ಇಲಾಖೆ ಕಾರ್ಯದರ್ಶಿಗಳು  ಹಾಸ್ಟೆಲ್‌ಗ‌ಳಿಗೆ ಖುದ್ದು ಭೇಟಿ ನೀಡಿದರೇ, ಅಲ್ಲಿನ ವಾಸ್ತವ ಸ್ಥಿತಿ ಗೊತ್ತಾಗಲಿದೆ ಎಂದು ಅಭಿಪ್ರಾಯಪಟ್ಟಿತು.

ಈ ಸಂಬಂಧ ಪ್ರತಿವಾದಿಗಳಾದ ಸರ್ಕಾರದ ಮುಖ್ಯಕಾರ್ಯದರ್ಶಿ, ಸಮಾಜಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಇಲಾಖಾ ಆಯುಕ್ತರು, ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್‌ ಜಾರಿಗೊಳಿಸಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತುರ್ತು ನೋಟಿಸ್‌ ಜಾರಿಗೊಳಿಸಿತು.

ಎಸ್‌ಸಿಪಿಟಿಎಸ್‌ಪಿ ಯೋಜನೆಯಡಿಯಲ್ಲಿ ಬಿಡುಗಡೆಯಾದ ಹಣ ಸರಿಯಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಅನುದಾನದ ಖರ್ಚು ಹಾಗೂ ಹಾಸ್ಟೆಲ್‌ಗ‌ಳ ಬಗೆಗಿನ ವಾಸ್ತವ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸುವಂತೆ ನಿರ್ದೇಶಿಸುವಂತೆ ಕೋರಿ ಅರ್ಜಿದಾರರಾದ ಬೆಂಗಳೂರಿನ  ವಿನಯ್‌ ವೇಣುಗೋಪಾಲ್‌ ಕೋರಿದ್ದಾರೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.