ಪಕ್ಷಗಳ ಜಾಹೀರಾತು “ಖಯಾಲಿ’ಗೆ ಹೈಕೋರ್ಟ್ ಕಿಡಿ
Team Udayavani, Feb 8, 2019, 6:07 AM IST
ಬೆಂಗಳೂರು: ರಾಜಕೀಯ ಪಕ್ಷಗಳ ಜಾಹೀರಾತು “ಖಯಾಲಿ’ ಬಗ್ಗೆ ಕೆಂಡ ಕಾರಿರುವ ಹೈಕೋರ್ಟ್, ರ್ಯಾಲಿಗಳ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಎಲ್ಲೆಂದರಲ್ಲಿ ಜಾಹೀರಾತು ಫಲಕ, ಬ್ಯಾನರ್ ಹಾಕುವುದರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಬಿಬಿಎಂಪಿಗೆ ತಾಕೀತು ಮಾಡಿದೆ.
ನಗರದಲ್ಲಿ ಅನಧಿಕೃತ ಜಾಹೀರಾತುಗಳ ಹಾವಳಿ ನಿಯಂತ್ರಿಸಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಮೂರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಎಲ್.ನಾರಾಯಣ ಸ್ವಾಮಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಬಿಬಿಎಂಪಿಗೆ ಈ ಸೂಚನೆ ನೀಡಿತು.
ಅರ್ಜಿ ವಿಚಾರಣೆ ವೇಳೆ ರಾಜಕೀಯ ಪಕ್ಷಗಳು ರ್ಯಾಲಿ ಸಂದರ್ಭದಲ್ಲಿ ಆ ಕುರಿತು ಜಾಹೀರಾತು ಫಲಕಗಳನ್ನು ಅಳವಡಿಸುತ್ತವೆ. ಆ ಬಗ್ಗೆ ಯಾವ ಕ್ರಮ ಜರುಗಿಸಲಾಗಿದೆ? ಎಂದು ಬಿಬಿಎಂಪಿಯನ್ನು ಪ್ರಶ್ನಿಸಿತು. ಅಲ್ಲದೆ, ರಾಜಕೀಯ ಪಕ್ಷಗಳು ತನಗೆ ಸೇರಿದ ಪ್ರದೇಶಗಳಲ್ಲಿ ಜಾಹೀರಾತುಗಳನ್ನು ಅಳವಡಿಸಲಿ.
ಅದು ಬಿಟ್ಟು ಸಾರ್ವಜನಿಕ ಪ್ರದೇಶದಲ್ಲಿ ಅಳವಡಿಸಿ, ಅಲ್ಲಿನ ಸೌಂದರ್ಯ ವಿರೂಪಗೊಳಿಸುವುದು ಸರಿಯಲ್ಲ. ಅಂತಹ ಕೆಲಸದಲ್ಲಿ ತೊಡಗಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ತಪ್ಪಿತಸ್ಥರನ್ನು ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಬಿಬಿಎಂಪಿಗೆ ಮೌಖೀಕವಾಗಿ ಸೂಚಿಸಿತು.
ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸೋಮವಾರ ಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಪರ ವಕೀಲರು ಭರವಸೆ ನೀಡಿದರು. ಅಲ್ಲದೆ, ಜಾಹೀರಾತು ಬೈಲಾ ಕರಡನ್ನು ಅಂತಿಮಗೊಳಿಸಿ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಬೈಲಾ ಕುರಿತು ರಾಜ್ಯ ಸರ್ಕಾರ ಬಿಬಿಎಂಪಿ ಬಳಿ ಕೆಲವೊಂದು ಸ್ಪಷ್ಟೀಕರಣ ಕೇಳಿತ್ತು.
ಆ ಸ್ಪಷ್ಟೀಕರಣ ಸೇರಿದಂತೆ ಎಲ್ಲಾ ಮಾಹಿತಿ ಒಳಗೊಂಡ ಜಾಹೀರಾತು ಬೈಲಾ ಕರಡನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಆ ಕರಡು ಆಧಾರದ ಮೇಲೆ ಸರ್ಕಾರ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬಿಬಿಎಂಪಿ ಪರ ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದರು.
ಇದೇ ವೇಳೆ ನಗರ ಪೊಲೀಸ್ ಇಲಾಖೆ ಪ್ರಮಾಣಪತ್ರ ಸಲ್ಲಿಸಿ, ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ 2018ರ ಡಿ.8ರಿಂದ 2019ರ ಫೆ.5ರವರೆಗೆ ದಾಖಲಿಸಿದ ಪ್ರಕರಣಗಳ ಕುರಿತು ಮಾಹಿತಿ ನೀಡಿತು. ಜಾಹೀರಾತು ಕಂಪನಿಗಳ ಪರ ವಕೀಲರು ವಾದಿಸಿ, ಜಾಹೀರಾತು ಕ್ಷೇತ್ರದಲ್ಲಿ ಸಾವಿರಾರು ಜನ ಉದ್ಯೋಗ ಮಾಡುತ್ತಿದ್ದಾರೆ.
ಬಿಬಿಎಂಪಿಯು ಜಾಹೀರಾತು ಅಳವಡಿಕೆಯನ್ನು ನಿಷೇಧ ಮಾಡಿದ ಹಿನ್ನೆಲೆಯಲ್ಲಿ ಅವರೆಲ್ಲಾ ಉದ್ಯೋಗ ಕಳೆದುಕೊಂಡಿದ್ದಾರೆ. ಅವರ ಜೀವನಾಧಾರದ ಹಿತದೃಷ್ಟಿಯಿಂದ ಸೂಕ್ತ ಆದೇಶ ಹೊರಡಿಸಬೇಕು ಎಂದು ನ್ಯಾಯಪೀಠವನ್ನು ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರವು ಜಾಹೀರಾತು ಬೈಲಾವನ್ನು ಅಂತಿಮಗೊಳಿಸುವವರೆಗೂ ನ್ಯಾಯಾಲಯ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದು ಸೂಕ್ತವಲ್ಲ ಎಂದು ಸ್ಪಷ್ಟಪಡಿಸಿ ಅರ್ಜಿ ವಿಚಾರಣೆಯನ್ನು ಫೆ.21ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.