ರಾಘವೇಶ್ವರ ಶ್ರೀ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
Team Udayavani, Dec 7, 2018, 6:55 AM IST
ಬೆಂಗಳೂರು: ಶ್ಯಾಮ ಶಾಸ್ತ್ರಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ
ಭಾರತೀ ಸ್ವಾಮೀಜಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಿಜೆಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ಪ್ರಕರಣ ರದ್ದು ಹಾಗೂ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾ.ಅಶೋಕ್ ನಿಜಗಣ್ಣನವರ್, ಅರ್ಜಿಯ ಮುಂದಿನ ವಿಚಾರಣೆವರೆಗೆ ಪುತ್ತೂರು ಸಿಜೆಎಂ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಿ, ವಿಚಾರಣೆಯನ್ನು 2019ರ ಜ.10ಕ್ಕೆ ಮುಂದೂಡಿದರು. ವಿಚಾರಣೆ ವೇಳೆ,ಸ್ವಾಮೀಜಿ ಪರ ವಕೀಲ ಪಿ.ಎನ್. ಮನಮೋಹನ್ ವಾದ ಮಂಡಿಸಿ, ಕಾನೂನು ಪ್ರಕಾರ ಅಪರಾಧ ಅಥವಾ ಘಟನೆ ಸಂಭವಿಸಿದ ಪೊಲೀಸ್ ಠಾಣೆ ವ್ಯಾಪ್ತಿಯ ಉಸ್ತುವಾರಿ ಠಾಣಾಧಿಕಾರಿಯ ವರದಿ ಆಧರಿಸಿ ಮಾತ್ರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸ ಬಹುದು. ಆದರೆ, ಈ ಪ್ರಕರಣದಲ್ಲಿ ಠಾಣಾಧಿಕಾರಿ ಚಾರ್ಜ್ ಶೀಟ್ ಸಲ್ಲಿಸಿಲ್ಲ, ಬದಲಿಗೆ ಸಿಐಡಿ ಪೊಲೀಸರು ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ಸಿಐಡಿ ಸಂಬಂಧಪಟ್ಟ ಪೊಲೀಸ್ ಠಾಣೆಯ ಉಸ್ತುವಾರಿ ಠಾಣಾಧಿಕಾರಿ ಅಲ್ಲ. ಹಾಗಾಗಿ, ಸ್ವಾಮೀಜಿ ವಿರುದ್ಧ ದೂರು ದಾಖಲಿಸಿಕೊಳ್ಳಲು ಹೇಳಿದ ಮತ್ತು ವಿಚಾರಣೆ ಮುಂದುವರಿಸುತ್ತಿರುವ ಸಿಜೆಎಂ ನ್ಯಾಯಾಲಯದ ಕ್ರಮ ಲೋಪದಿಂದ ಕೂಡಿದೆ. ಆದ್ದರಿಂದ ಎಫ್ಐಆರ್, ಚಾರ್ಜ್ಶೀಟ್ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ಎಲ್ಲವೂ ರದ್ದುಪಡಿಸಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ, ಸ್ವಾಮೀಜಿ ವಿರುದ್ಧದ ವಿಚಾರಣೆಗೆ ತಡೆ ನೀಡಿ ಆದೇಶಿಸಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.