ವಜ್ರ ಮಹೋತ್ಸವ ವೆಚ್ಚದ ವಿವರ ಒದಗಿಸಲು ಹೈಕೋರ್ಟ್ ಸೂಚನೆ
Team Udayavani, Oct 27, 2017, 11:03 AM IST
ಬೆಂಗಳೂರು: ರಾಜ್ಯ ಸರ್ಕಾರ ವಿಧಾನಸೌಧ ವಜ್ರ ಮಹೋತ್ಸವ ಆಚರಣೆಗೆ ಎಷ್ಟು ಹಣವನ್ನು ಯಾವ ಯಾವ ಉದ್ದೇಶಗಳಿಗೆ ಖರ್ಚು ಮಾಡಿದೆ ಎಂಬ ಸಮಗ್ರ ವಿವರ ಮತ್ತು ಹೆಚ್ಚುವರಿ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ಅರ್ಜಿದಾರ ವಕೀಲ ಎಸ್.ಎಸ್.ಅರವಿಂದ ಅವರಿಗೆ ಸೂಚಿಸಿದೆ.
ವಿಧಾನಸೌಧದ ವಜ್ರ ಮಹೋತ್ಸವ ಆಚರಣೆಗೆ ರಾಜ್ಯ ಸರ್ಕಾರ 10 ಕೋಟಿ ರೂ. ಖರ್ಚು ಮಾಡಲು ತೀರ್ಮಾನಿಸಿದ್ದನ್ನು ಪ್ರಶ್ನಿಸಿ ವಕೀಲ ಎಸ್.ಎಸ್.ಅರವಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಗುರುವಾರ ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಹೆಚ್ಚುವರಿ ಮುಖ್ಯ ನ್ಯಾ. ಎಚ್.ಜಿ.ರಮೇಶ್ ಹಾಗೂ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿದಾರರಿಗೆ ಈ ನಿರ್ದೇಶನ ನೀಡಿ ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿತು.
ಇದಕ್ಕೂ ಮುನ್ನ ಬುಧವಾರದ ವಿಚಾರಣೆ ವೇಳೆ ವಜ್ರ ಮಹೋತ್ಸವದಂತಹ ಸರ್ಕಾರಿ ಕಾರ್ಯಕ್ರಮಗಳಿಗೆ ಸಾರ್ವಜನಿಕ ಹಣ ವ್ಯಯಿಸದಂತೆ ನಿರ್ಬಂಧಿಸಲು ಕಾನೂನು ಲಭ್ಯವಿದ್ದರೆ ನ್ಯಾಯಾಲಯಕ್ಕೆ ಒದಗಿಸುವಂತೆ ಅರ್ಜಿದಾರರಿಗೆ ಪೀಠ ಸೂಚಿಸಿತ್ತು. ಅದರಂತೆ ಗುರುವಾರ ಸುಪ್ರೀಂಕೋರ್ಟ್ ತೀರ್ಪಿನ ಪ್ರತಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿದಾರ ವಕೀಲ ಎಸ್.ಎನ್. ಅರವಿಂದ, ಸರ್ಕಾರಿ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಸಾರ್ವಜನಿಕ ಹಣವನ್ನು ವೃಥಾ ವ್ಯಯಿಸಬಾರದು.
ಅದರ ಬದಲಿಗೆ ಕೆಲಸದ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ಈ ಹಿಂದೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದನ್ನು ಪರಿಶೀಲಿಸಿದ ನ್ಯಾಯಪೀಠ, ವಿಧಾನ ಸೌಧ ವಜ್ರ ಮಹೋತ್ಸವಕ್ಕಾಗಿ ರಾಜ್ಯ ಸರ್ಕಾರ ಎಷ್ಟು ಹಣ ವೆಚ್ಚ ಮಾಡಿದೆ. ಯಾವ ಯಾವ ಉದ್ದೇಶಗಳಿಗೆ ಹಣ ವ್ಯಯಿಸಿದೆ ಎಂಬುದರ ಕುರಿತ ಮಾಹಿತಿಯನ್ನು ಒದಗಿಸಲಾಗಿಲ್ಲ. ಹೀಗಾಗಿ ಈ ಕುರಿತ ಹೆಚ್ಚುವರಿ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಒದಗಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.