ಕೆಪಿಎಸ್‌ಸಿ ಅಕ್ರಮ ನೇಮಕ ಪ್ರಕರಣ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ
Team Udayavani, Apr 11, 2017, 12:23 PM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 2011ನೇ ಸಾಲಿನಲ್ಲಿ ನಡೆಸಿದ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಗೋನಾಳ್ ಭೀಮಪ್ಪ ವಿರುದ್ಧ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ಅಕ್ರಮ ನೇಮಕಾತಿ ಕುರಿತಂತೆ ತಮ್ಮ ವಿರುದ್ಧ ಬೆಂಗಳೂರಿನ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಗೋನಾಳ್ ಭೀಮಪ್ಪ ಹೈಕೋರ್ಟ್‌ನ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ, ಮಧ್ಯಂತರ ಆದೇಶದಲ್ಲಿ ತಡೆಯಾಜ್ಞೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಏ.17ಕ್ಕೆ ವಿಚಾರಣೆ ಮಂದೂಡಿತು.
ಅರ್ಜಿದಾರರ ಪರವಾಗಿ ವಾದಿಸಿದ ವಕೀಲರು, ಗೋನಾಳ್ ಭೀಮಪ್ಪ ಕೆಪಿಎಸ್‌ಸಿ ಅಧ್ಯಕ್ಷರಾಗಿಧಿದ್ದರಿಂದ ಅವರ ವಿರುದ್ಧದ ವಿಚಾರಣೆಗೆ ರಾಷ್ಟ್ರಪತಿಗಳ ಪೂರ್ವಾನುಮತಿ ಅಗತ್ಯವಿತ್ತು. ಆದರೆ ಈ ಪ್ರಕರಣದಲ್ಲಿ ರಾಜ್ಯಪಾಲರೇ ಪೂರ್ವಾನುಮತಿ ನೀಡಿರುವುದು ಕಾನೂನು ಬಾಹಿರವಾಗಿದೆ. ಜತೆಗೆ ಗೋನಾಳ್ ಭೀಮಪ್ಪ ವಿರುದ್ಧದ ದೂರುಗಳನ್ನು ಪ್ರಜ್ಞಾಪೂರ್ವಕ ಅಪರಾಧ ಕೃತ್ಯ ಎಂದು ಪರಿಗಣಿಸಿ ಅಧೀನ ನ್ಯಾಯಾಲಯ ವಿಚಾರಣೆ ನಡೆಸುತ್ತಿರುವ ಕ್ರಮವೂ ತಪ್ಪಾಗಿದೆ ಎಂದು ನ್ಯಾಯಾಲಯದ ಗಮನಸೆಳೆದರು.
ಈ ವಾದ ಪುರಸ್ಕರಿಸಿದ ನ್ಯಾಯಾಲಯ, ಗೋನಾಳ್ ಭೀಮಪ್ಪ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಿತು. ಹಾಗೇ ಈ ಅರ್ಜಿ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆ ಹಾಗೂ ಕರ್ನಾಟಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಸೇವಾ ನಿಯಮಗಳು) ಇಲಾಖೆಯ ಉಪ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.