ಆಯುಕ್ತರ ಆದೇಶ ಎತ್ತಿ ಹಿಡಿದ ಹೈಕೋರ್ಟ್‌


Team Udayavani, Jul 3, 2018, 12:18 PM IST

highcourt.jpg

ಬೆಂಗಳೂರು: ಸ್ವಾಧೀನ ಪತ್ರ (ಆಕ್ಯುಪೆನ್ಸಿ ಸರ್ಟಿಫಿಕೇಟ್‌) ಹೊಂದಿಲ್ಲದ ಬಾರ್‌ ಆಂಡ್‌ ರೆಸ್ಟೋರೆಂಟ್‌ಗಳು ಲೈವ್‌ಬ್ಯಾಂಡ್‌ ಚಟುವಟಿಕೆಗಳನ್ನು ನಿಲ್ಲಿಸುವಂತೆ ನಗರ ಪೊಲೀಸ್‌ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಸೋಮವಾರ ಎತ್ತಿಹಿಡಿದಿದೆ.

ಈ ಸಂಬಂಧ ನಗರ ಪೊಲೀಸ್‌ ಆಯುಕ್ತರು ನೀಡಿದ ನೋಟಿಸ್‌ ರದ್ದುಗೊಳಿಸಬೇಕು ಎಂದು ಕೋರಿ ರೆಸಿಡೆನ್ಸಿ ರಸ್ತೆಯ ನರ್ತಕಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಸೇರಿದಂತೆ ನಗರದ ಹಲವು ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳು ಸಲ್ಲಿಸಿದ್ದ ವಿಚಾರಣೆ ನಡೆಸಿದ ನ್ಯಾ. ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯಪೀಠ, ಸ್ವಾಧೀನಪತ್ರ ಹೊಂದಿರದಿದ್ದರೂ ಲೈವ್‌ಬ್ಯಾಂಡ್‌ ಚಟುವಟಿಕೆ ಮುಂದುವರಿಸಲು ಅನುಮತಿ ನೀಡಬೇಕು  ಎಂಬ ಅರ್ಜಿದಾರರ ಮನವಿಯನ್ನು ಇದೇ ವೇಳೆ ತಳ್ಳಿಹಾಕಿತು. 

ಜೊತೆಗೆ ಕಾನೂನಿನ ಅನ್ವಯ 1977ರ ನಂತರ ನಿರ್ಮಾಣಗೊಂಡಿರುವ ಕಟ್ಟಡಗಳು ಸ್ವಾಧೀನಾನುಭವ ಪತ್ರ ಪಡೆಯುವುದು ಕಡ್ಡಾಯ. ಅದರಂತೆ ಪೊಲೀಸ್‌ ಆಯುಕ್ತರ ಸೂಚನೆಯಂತೆ ಸ್ವಾಧೀನಾನುಭವ ಪತ್ರ ಪಡೆದುಕೊಂಡು ಲೈವ್‌ ಬ್ಯಾಂಡ್‌ ಚಟುವಟಿಕೆ ಮುಂದುವರಿಸುವಂತೆ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ನ್ಯಾಯಪೀಠ ನಿರ್ದೇಶನ ನೀಡಿತು. 

ಅಲ್ಲದೆ, ಕರ್ನಾಟಕ ಪೌರ ನಿಗಮಗಳ ಕಾಯ್ದೆ-1976 ಪ್ರಕಾರ, 1977ರ ನಂತರ ನಿರ್ಮಾಣಗೊಂಡ ಎಲ್ಲ ಕಟ್ಟಡಗಳು ಸಂಬಂಧಪಟ್ಟ ಅಧಿಕಾರಿಯಿಂದ ಸ್ವಾಧೀನಾನುಭವ ಪತ್ರ ಪಡೆಯುವುದು ಕಡ್ಡಾಯ. ಅದರಂತೆ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ನೀಡುವುದು ಸಂಬಂಧ ಪಟ್ಟ ಇಲಾಖೆಗೆ ಬಿಟ್ಟದ್ದು. ಈ ವಿಚಾರದಲ್ಲಿ ಹೈಕೋರ್ಟ್‌ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿತು.

ಜತೆಗೆ, 1977ರ ನಂತರ ನಿರ್ಮಾಣ ಮಾಡಿದ ಕಟ್ಟಡಗಳಲ್ಲಿ ಲೈವ್‌ ಬಾಂಡ್‌ ನಡೆಸುತ್ತಿದ್ದರೆ, ಆ ಕಟ್ಟಡಗಳ ಮಾಲೀಕರು ಸಂಬಂಧಪಟ್ಟ ಅಧಿಕಾರಿಯಿಂದ ಸ್ವಾಧೀನಾನುಭವ ಪತ್ರವನ್ನು ಪಡೆಯುವುದು ಕಡ್ಡಾಯ. ಅದರಂತೆ ಅರ್ಜಿದಾರರು ಸ್ವಾಧೀನಾನುಭವ ಪತ್ರ ಕೋರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು.

ನಂತರ ಅಧಿಕಾರಿಯಿಂದ ನೀಡುವ ಸ್ವಾಧೀನಾನುಭವ ಪತ್ರವನ್ನು ಪೊಲೀಸರಿಗೆ ಸಲ್ಲಿಸಿ, ಲೈವ್‌ಬ್ಯಾಂಡ್‌ ನಡೆಸಲು ಅನುಮತಿ ಕೋರಬೇಕು. ಪೊಲೀಸರು ಆ ಅರ್ಜಿಗಳನ್ನು 30 ದಿನಗಳಲ್ಲಿ ಪರಿಗಣಿಸಬೇಕು. ಅಲ್ಲಿಯವರಿಗೆ ಅರ್ಜಿದಾರರು ಲೈವ್‌ ಬ್ಯಾಂಡ್‌ ಚಟುವಟಿಕೆ ನಡೆಸಬಾರದು ಎಂದು ಸೂಚಿಸಿದ ಹೈಕೋರ್ಟ್‌ ಅರ್ಜಿ ಇತ್ಯರ್ಥಪಡಿಸಿತು.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.