ಹೋಲಿ ಏಂಜಲ್ಸ್‌ ಶಾಲೆಯ 3 ದಶಕಗಳ ಸಾಧನೆ ಹಾದಿ


Team Udayavani, Aug 13, 2018, 12:40 PM IST

holi-angels.jpg

ಬೆಂಗಳೂರು: ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂಬ ಮಹದಾಸೆಯಿಂದ ಹುಟ್ಟಿಕೊಂಡ ಶಿಕ್ಷಣ ಸಂಸ್ಥೆಗಳು ರಾಜಧಾನಿ ವ್ಯಾಪ್ತಿಯಲ್ಲಿ ಹಲವಾರಿವೆ. ಇಂತಹ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಹೋಲಿ ಏಂಜಲ್ಸ್‌ ಶಿಕ್ಷಣ ಸಂಸ್ಥೆ ಕೂಡ ಒಂದಾಗಿದೆ.

ವಿಜಯನಗರದ ಹಂಪಿನಗರ ಬಡಾವಣೆಯಲ್ಲಿರುವ ಹೋಲಿ ಏಂಜಲ್ಸ್‌ ಶಾಲೆ, ಕಳೆದ ಮೂರು ದಶಕಗಳಿಂದ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೂಡುಗೆ ನೀಡುತ್ತಾ, ಪೋಷಕರ ನಂಬಿಕೆಯನ್ನು ಉಳಿಸಿಕೊಂಡು ಬಂದಿದೆ. ಹೀಗಾಗಿ, ವಿದ್ಯಾರ್ಥಿಗಳ ಹಾಗೂ ಪೋಷಕರ ಅಚ್ಚುಮೆಚ್ಚಿನ ಶಿಕ್ಷಣ ಕೇಂದ್ರವಾಗಿ ಮನೆ ಮಾತಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಸರ್ವರಿಗೂ ಗುಣಮಟ್ಟದ ಶಿಕ್ಷಣ ತಲುಪಿಸಬೇಕು ಎಂಬ ಸದುದ್ದೇಶದಿಂದ ಟಿ.ಪುರುಷೋತ್ತಮ್‌ ಅವರು 1989ರಲ್ಲಿ ಹೋಲಿ ಏಂಜಲ್ಸ್‌ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದರು. ರಾಜ್ಯಮಟ್ಟದ ಪಠ್ಯಕ್ರಮದೊಂದಿಗೆ ಆರಂಭವಾದ ಹೋಲಿ ಏಜಂಲ್ಸ್‌ ಶಿಕ್ಷಣ ಸಂಸ್ಥೆಯಲ್ಲಿ, ಆರಂಭಿಕ ದಿನಗಳಲ್ಲಿ ಕೇವಲ 90 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದರು.

ಆದರೆ ವರ್ಷ ಕಳೆದಂತೆ ಈ ಸಂಖ್ಯೆಯಲ್ಲಿ ದ್ವಿಗುಣಗೊಳುತ್ತಾ ಸಾಗಿತು. ಪ್ರಸ್ತುತ ರಾಜ್ಯದಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಹೋಲಿ ಏಂಜಲ್ಸ್‌ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 6 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಆಗಿರುವ ಹೆಚ್ಚಳವು, ಶಿಕ್ಷಣ ಕ್ಷೇತ್ರದಲ್ಲಿ ಹೋಲಿ ಏಂಜಲ್ಸ್‌ ಶಿಕ್ಷಣ ಸಂಸ್ಥೆಯ ಸಾಧನೆಗೆ ಹಿಡಿದ ಕೈಗನ್ನಡಿ.

ವಿಶೇಷ ಎಂದರೆ, ಈ ಶಾಲೆಯಲ್ಲಿ ರಾಜ್ಯ ಪಠ್ಯಕ್ರಮದ ಜತೆಗೆ 2003ರಿಂದ ಐಸಿಎಸ್‌ಇ ಪಠ್ಯಕ್ರಮವನ್ನು ಕೂಡ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಕಲಿಕೆಗೆ ಮತ್ತಷ್ಟು ಅನುಕೂಲವಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಹೋಲಿ ಏಂಜಲ್ಸ್‌ ಶಾಲೆ ತ್ವರಿತವಾಗಿ ಪ್ರಗತಿಯ ಉತ್ತುಂಗಕ್ಕೇರುವಲ್ಲಿ ಸಂಸ್ಥೆಯ ಸಂಸ್ಥಾಪಕರಾಗಿರುವ ಟಿ.ಪುರುಷೋತ್ತಮ್‌ ಅವರ ಸಾಧನೆ, ಶ್ರಮ ಹೆಚ್ಚಿದೆ.

ಸಂಸ್ಥೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿರುವ ಪುರುಷೋತ್ತಮ್‌ ಅವರಿಗೆ ಪತ್ನಿ ಹಾಗೂ ಶಾಲೆಯ ಕಾರ್ಯದರ್ಶಿಯಾಗಿರುವ ಪಾರ್ವತಿ ಪುರುಷೋತ್ತ‌ಮ್‌, ಅವರ ಪ್ರೋತ್ಸಾಹ ಕೂಡ ಇದೆ. ಇದರೊಂದಿಗೆ ಶಾಲೆ ಪ್ರಾಂಶುಪಾಲರಾಗಿರುವ ಪಿ.ಲೋಕೇಶ್‌ ಹಾಗೂ ನಿರ್ದೇಶಕರಾದ ಪಿ.ಚಂದ್ರಮೋಹನ್‌ ಅವರ ಕೂಡುಗೆಯನ್ನು ಕೂಡ ಮೆರೆಯುವಂತಿಲ್ಲ.

ಪೋಷಕರ ಸಲಹೆಗೆ ಮನ್ನಣೆ: ಸಂಸ್ಥೆಯ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳ ಪೋಷಕರ ನಡುವಿನ ಒಡನಾಟ ಈ ಸಂಸ್ಥೆಯ ಪ್ರಗತಿಗೆ ದಾರಿ ದೀಪದಂತಿದೆ. ಹೀಗಾಗಿ ನಗರದಲ್ಲಿರುವ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗಿಂತಲೂ ಹೋಲಿ ಏಂಜಲ್ಸ್‌ ವಿಭಿನ್ನ ಎಂದು ಮೆಚ್ಚುಗೆಗೆ ಪಾತ್ರವಾಗಿದೆ. ಪೋಷಕರ ಸಲಹೆ ಸೂಚನೆಗಳಿಗೂ ಇಲ್ಲಿ ಸೂಕ್ತ ಮನ್ನಣೆ ನೀಡುವ ಶಾಲೆ ಆಡಳಿತ ಮಂಡಳಿ, ಆ ಸಲಹೆಗಳನ್ನು ಅಳವಡಿಸಿಕೊಳ್ಳುತ್ತದೆ.

ಶಾಲೆಯಲ್ಲಿ ಕಲಿಯುತ್ತಿರುವ ಪ್ರತಿ ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯನ್ನು ಪೋಷಕರ ಗಮನಕ್ಕೆ ತರುವ ಪದ್ಧತಿ ಇಲ್ಲಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ನೆರವಾಗಿದೆ. ಈ ವ್ಯವಸ್ಥೆ ಜಾರಿಯಿಂದಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಪೋಷಕರ ನಡುವೆ ಉತ್ತಮ ಬಾಂಧವ್ಯ ಸೃಷ್ಟಿಯಾಗಿದೆ.

ಇಲ್ಲಿ ಶೈಕ್ಷಣಿಕ ಚಿಂತನೆ ಜತೆಗೆ ಸಾಮಾಜಿಕ, ಸಂಸ್ಕೃತಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತಲಾಗುತ್ತಿದೆ. ಈ ಕಾರಣದಿಂದಾಗಿ ಹೋಲಿ ಏಂಜಲ್ಸ್‌ ಶಿಕ್ಷಣ ಸಂಸ್ಥೆ ಉತ್ತುಂಗದ ಹಾದಿಯಲ್ಲಿ ಸಾಗಿದೆ. ಶಾಲೆಯ ಮುಖ್ಯಶಿಕ್ಷಕಿ ಸಿ.ರಾಧಿಕಾ ಅವರು ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಾ, ಆಗಾಗ ಸಲಹೆ ಸೂಚನೆಗಳನ್ನು ನೀಡುತ್ತಿದ್ದು, ಇದು ಶಿಕ್ಷಕರಲ್ಲಿ ಉತ್ತಮ ಬೋಧನೆಗೆ ಸಹಕಾರಿಯಾಗಿದೆ. ಅಲ್ಲದೆ, ವಿದ್ಯಾರ್ಥಿಗಳಲ್ಲಿ ಶಿಸ್ತಿನ ಜತೆಗೆ ನಿರಂತರ ಅಧ್ಯಯನಕ್ಕೆ ಕಾರಣವಾಗಿದೆ.

ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು: ಶಿಕ್ಷಣ ಚುಟುವಟಿಕೆಗಳ ಜತೆಗೆ ಇಲ್ಲಿ ಕ್ರೀಡೆ, ಸಂಸ್ಕೃತಿಕ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿ ವರ್ಷ ವಿದ್ಯಾರ್ಥಿಗಳಿಗಾಗಿ ಕ್ರೀಡೋತ್ಸವ ಆಯೋಜಿಸಲಾಗುತ್ತಿದ್ದು, ಈ ಮೂಲಕ ಶಾಲಾ ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವನೆ ಬೆಳೆಸುವ ಕೆಲಸ ಕೂಡ ಶಾಲೆಯಲ್ಲಿ ನಡೆದಿದೆ. ದೈಹಿಕ ಶಕ್ತಿ ವೃದ್ಧಿಸುವ ಈ ಕ್ರಮ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರವಾಗಿದ್ದು, ಪೋಷಕರ ಮೆಚ್ಚುಗೆ ಗಳಿಸಿದೆ.

ಎನ್‌ಸಿಸಿಗೂ ಆದ್ಯತೆ: ಹೋಲಿ ಏಂಜಲ್ಸ್‌ ಶಾಲಾ ಆಡಳಿತ ಮಂಡಳಿ, ಶಾಲೆಯಲ್ಲಿ ಎನ್‌ಸಿಸಿಗೆ ಹೆಚ್ಚು ಒತ್ತು ನೀಡಿದೆ. ಶಾಲೆಯ ಎನ್‌ಸಿಸಿ ವಿಭಾಗದಲ್ಲಿ ಸಕ್ರಿಯರಾಗಿರುವ ಹಲವು ವಿದ್ಯಾರ್ಥಿಗಳು, ವಿವಿಧ ಕ್ಯಾಂಪ್‌ಗ್ಳಲ್ಲಿ ಭಾಗವಹಿಸಿ ಸಾಧನೆ ತೋರಿದ್ದಾರೆ. ಅನೇಕ ಪ್ರಶಸ್ತಿಗಳನ್ನು ಗೆದ್ದು ಶಾಲೆಗೂ ಕೀರ್ತಿ ತಂದಿದ್ದಾರೆ. ಪರಿಸರ ಸಂರಕ್ಷಣೆ, ರಸ್ತೆ ಸುರಕ್ಷತಾ ಸಪ್ತಾಹ ಮಾತ್ರವಲ್ಲದೆ ಗಣರಾಜ್ಯೋತ್ಸವದ ಪರೇಡ್‌ನ‌ಲ್ಲಿ ಭಾಗವಹಿಸಿ ಶಾಲೆಗೆ ಹೆಸರು ತಂದಿದ್ದಾರೆ.

ಅತ್ಯುತ್ತಮ ಸಾಧನೆ: ನುರಿತ ಶಿಕ್ಷಕ ವರ್ಗ ಈ ಶಾಲೆಯಲ್ಲಿದೆ. ಇದು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಪ್ರಾಂಶುಪಾಲರ ವ್ಯವಸ್ಥಿತ ಶಿಕ್ಷಣ ಕಾರ್ಯಚಟುವಟಿಕೆಗಳು, ಜತೆಗೆ ಮುಖ್ಯ ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಬಲ ನೀಡಿದೆ.

ಈ ಹಿನ್ನೆಲೆಯಲ್ಲಿ ಪ್ರಾರಂಭಿಕ ವರ್ಷದಿಂದಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮತ್ತು ಐಸಿಎಸ್‌ಇ ಪಠ್ಯ ಕ್ರಮದಲ್ಲಿ ಹೋಲಿ ಏಂಜಲ್ಸ್‌ ಶಾಲಾ ವಿದ್ಯಾರ್ಥಿಗಳು ಶೇ.100ರಷ್ಟು ಫ‌ಲಿತಾಂಶ ದಾಖಲಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಫ‌ಲಿತಾಂಶದಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದು, ಅನೇಕ ವಿದ್ಯಾರ್ಥಿಗಳು ಶೇ.98.40 ಅಂಕಗಳನ್ನು ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಗುಣ ಮಟ್ಟದ ಶಿಕ್ಷಣದ ಜತೆಗೆ ಪ್ರತಿಭಾವಂತ ರಾಷ್ಟ್ರಕ್ಕೆ ವಿದ್ಯಾರ್ಥಿಗಳನ್ನು ಕೊಡುಗೆಯಾಗಿ ನೀಡಬೇಕು ಎಂಬುದು ಹೋಲಿ ಏಂಜಲ್ಸ್‌ ಸಂಸ್ಥೆಯ ಆಶಯವಾಗಿದೆ. ಪ್ರತಿ ವರ್ಷ ಉತ್ತಮ ಫ‌ಲಿತಾಂಶ ಬರುತ್ತಿದ್ದು, ಈ ಮೂಲಕ ಸಂಸ್ಥೆ ರಾಷ್ಟ್ರಮಟದಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ.
-ಪಿ.ಲೋಕೇಶ್‌, ಹೋಲಿ ಏಂಜಲ್ಸ್‌ ಸಂಸ್ಥೆ ಪ್ರಾಂಶುಪಾಲರು

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.