ಮೇ 30ರಂದು ಹೋಟೆಲ್ ಬಂದ್
Team Udayavani, May 26, 2017, 12:18 PM IST
ಬೆಂಗಳೂರು: ಕೇಂದ್ರ ಸರ್ಕಾರವು ಜುಲೈ 1ರಿಂದ ಜಾರಿಗೆ ತರಲಿರುವ ಸರಕು ಮತ್ತು ಸೇವಾ ತೆರಿಗೆಯಲ್ಲಿ(ಜಿಎಸ್‌ಟಿ) ಸಾಮಾನ್ಯ ಹೋಟೆಲ್‌ಗಳಿಗೆ ದುಬಾರಿ ತೆರಿಗೆ ವಿಧಿಸಿರುವುದನ್ನು ಖಂಡಿಸಿ ಮೇ 30ರಂದು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು ಹೋಟೆಲ್ ಉದ್ಯಮ ಬಂದ್ ಮಾಡಿ ಪ್ರತಿಭಟಿಸಲು ಕರೆ ನೀಡಿದೆ.
ಬೆಂಗಳೂರು ಹೋಟೆಲ್ ಸಂಘದ ಸದಸ್ಯತ್ವ ಪಡೆದಿರುವ ಸುಮಾರು 2500ರಿಂದ 3000 ಹೋಟೆಲ್, ಲಾಡ್ಜ್ ಹಾಗೂ ರೆಸ್ಟೋರೆಂಟ್‌ಗಳು ಸಂಘದ ಕಾರ್ಯಕಾರಿ ಸಭೆಯ ನಿರ್ಧಾರದಂತೆ ಮೇ 30ರ ಬೆಳಗ್ಗೆ 5 ಗಂಟೆಯಿಂದ ರಾತ್ರಿ 11ರ ತನಕ ಬಂದ್ ಆಗಲಿದೆ.
ಒಂದು ದಿನದ ಮಟ್ಟಿಗೆ ಹೋಟೆಲ್‌ಗಳನ್ನು ಬಂದ್ ಮಾಡುವ ಮೂಲಕ ಜಿಎಸ್‌ಟಿಯಲ್ಲಿ ಎಸಿ ಹೋಟೆಲ್‌ಗೆ ಶೇ.18ರಷ್ಟು ಮತ್ತು ನಾನ್ ಎಸಿ ಹೋಟೆಲ್‌ಗಳಿಗೆ ಶೇ.12ರಷ್ಟು ದುಬಾರಿ ತೆರಿಗೆ ಅಳವಡಿಸಿರುವುದನ್ನು ವಿರೋಧಿಸಲಿದ್ದಾರೆ. ಬಂದ್‌ಗೆ ಸಂಬಂಧಿಸಿದಂತೆ “ಉದಯವಾಣಿ’ಯೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಟಾರ್, 50 ಲಕ್ಷಕ್ಕಿಂತ ಕಡಿಮೆ ವಹಿವಾಟಿನ ಹೋಟೆಲ್‌ಗೆ ಶೇ.5ರಷ್ಟು,
-ಅದಕ್ಕಿಂತ ಜಾಸ್ತಿ ವಹಿವಾಟು ಮಾಡುವ ನಾನ್ ಎಸಿ ಹೋಟೆಲ್‌ಗೆ ಶೇ.12ರಷ್ಟು ಮತ್ತು ಎಸಿ ಹೋಟೆಲ್‌ಗೆ ಶೇ.18ರಷ್ಟು ತೆರಿಗೆ ನಿಗದಿ ಮಾಡಿರುವುದು ಅವೈಜ್ಞಾನಿಕವಾಗಿದೆ. ಇದರಿಂದ ಒಂದು ಊಟಕ್ಕೆ 12ರಿಂದ 18 ರೂ. ಹೆಚ್ಚು ಮಾಡಬೇಕಾಗುತ್ತದೆ. ಆಗ ಸಾಮಾನ್ಯ ಹೋಟೆಲ್‌ಗೆ ಬರುವ ಗ್ರಾಹಕರ ಸಂಖ್ಯೆ ಇಳಿಮುಖವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.