ಪ್ರತಿಪಕ್ಷ ಮುಕ್ತ ಭಾರತ ಮಾಡುವ ಹುನ್ನಾರ


Team Udayavani, Aug 17, 2019, 3:03 AM IST

pratipaksha

ಬೆಂಗಳೂರು: ಈ ಹಿಂದೆ ಕೆಲವರು ಕಾಂಗ್ರೆಸ್‌ ಮುಕ್ತ ಭಾರತದ ಬಗ್ಗೆ ಮಾತನಾಡಿದ್ದರು. ಆದರೆ ಈಗ ಪಕ್ಷಾಂತರಕ್ಕೆ ನಿರೇರೆಯುತ್ತಾ ವಿರೋಧ ಪಕ್ಷ ಮುಕ್ತ ಭಾರತ ಮಾಡಲು ಹೊರಟಿದ್ದಾರೆ. ಅವರಿಗೆ ಈ ದೇಶದಲ್ಲಿ ಪ್ರಬಲ ವಿರೋಧ ಪಕ್ಷ ಬೇಕಾಗಿಲ್ಲ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ ಬಿಜೆಪಿ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದರು.

ಅಖೀಲ ಭಾರತ ವಕೀಲರ ಸಂಘ, ಶುಕ್ರವಾರ ಅಲೂಮ್ನಿ ಯುವಿಇಸಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಶಾಸಕರ ರಾಜೀನಾಮೆ ಹಕ್ಕು ಮತ್ತು ಪಕ್ಷಾಂತರ ನಿಷೇಧ ಕಾಯ್ದೆ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು ಪಕ್ಷಾಂತರ ಕಾಯಿಲೆ ಗೋವಾ, ಕರ್ನಾಟಕದ ನಂತರ ಇದೀಗ ಸೂಕ್ಷ್ಮರಾಜ್ಯ ಎನಿಸಿಕೊಂಡಿರುವ ಸಿಕ್ಕಿಂಗೂ ವ್ಯಾಪಿಸಿದೆ ಎಂದರು.

ಒಂದು ಸರ್ಕಾರ ಉರುಳಿಸಿ ಮತ್ತೂಂದು ಸರ್ಕಾರ ರಚಿಸಲು ಅನುಕೂಲ ಮಾಡಿಕೊಟ್ಟವರು ಸಚಿವ ಮತ್ತು ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ಆಸೆಯಿಂದಲೇ ಪಕ್ಷಾಂತರಗೊಂಡಿದ್ದಾರೆ. ಬಿಜೆಪಿ ಕೂಡ ಇದು ಅಪರೇಷನ್‌ ಕಮಲ ಅಲ್ಲ ಎಂದು ನಾಟಕವಾಡುತ್ತಿದ್ದು, ಸಂವಿಧಾನದ ಉಳಿವಿಗಾಗಿ ಜನ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

ಪಕ್ಷಾಂತರ ನಿಷೇಧ ಅಸಾಧ್ಯ: ಪಕ್ಷಾಂತರ ನಿಷೇಧದ ಬಗ್ಗೆ ಎಷ್ಟೇ ಕಾನೂನು ರೂಪಿಸಿದರೂ ಅದನ್ನು ತಡೆಗಟ್ಟುವುದು ಅಸಾಧ್ಯ. ದೇಶದ ಕಾನೂನಿಗೆ ಗೌರವ ಕೊಡದವರು ಕಾನೂನಿನ ಮೂಲಕವೇ ರಕ್ಷಣೆ ಪಡೆಯುತ್ತಾರೆ. ಹೀಗಾದರೆ ಕಾನೂನುಗಳು ಇದ್ದರೂ ಏನು ಪ್ರಯೋಜನವಾಗದು. ಜನರು ಪಕ್ಷಾಂತರಿಗಳಿಗೆ ಉತ್ತರ ನೀಡಬೇಕಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಈ ಹಿಂದೆ ದೇಶದಲ್ಲಿ ಘೋಷಿತ ತುರ್ತು ಪರಿಸ್ಥಿತಿಯಿತ್ತು. ಆದರೆ ಇಂದು ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ರಚನೆಯಾಗಿ ಮೂರು ವಾರಗಳಾದರೂ ಇನ್ನೂ ಕೂಡ ಸಚಿವ ಸಂಪುಟ ರಚನೆಯಾಗಿಲ್ಲ ಎಂದು ಟೀಕಿಸಿದರು.

ಜೆಡಿಎಸ್‌ ಮುಖಂಡ ವೈ.ಎಸ್‌.ವಿ.ದತ್ತ ಮಾತನಾಡಿ, ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಶಾಂತವೇರಿ ಗೋಪಾಲ ಗೌಡರು ಆಳುವ ಸರ್ಕಾರವನ್ನೇ ನಡುಗಿಸಿದ್ದರು. ಕೇವಲ 15 ಶಾಸಕರಿದ್ದರೂ ಎಲ್ಲರೂ ಒಂದು ತತ್ವ, ಸಿದ್ಧಾಂತಕ್ಕೆ ಅಂಟಿಕೊಂಡಿದ್ದರು. ಆದರೆ ಈಗಿನ ಪರಿಸ್ಥಿತಿ ಬೇರೆಯಾಗಿದೆ. ತತ್ವಸಿದ್ಧಾಂತಕ್ಕೆ ಎಳ್ಳು ನೀರು ಬಿಡಲಾಗಿದ್ದು, ಚುನಾವಣೆ ವ್ಯವಸ್ಥೆ ಕೂಡ ಅಡ್ಡ ದಾರಿ ಹಿಡಿದಿದೆ ಎಂದರು.

ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ ದಾಸ್‌ ಮಾತನಾಡಿ, ಪಕ್ಷಾಂತರ ಕಾಯಿಲೆ ರಾಷ್ಟ್ರವ್ಯಾಪಿ ಹರಡುತ್ತಿದ್ದು, ಈ ಸಂಬಂಧ ಕಠಿಣ ಕಾನೂನು ಅಗತ್ಯವಿದೆ ಎಂದರು. ಅಖೀಲ ಭಾರತ ವಕೀಲರ ಸಂಘದ ಅಧ್ಯಕ್ಷ ಹರೀಂದ್ರ, ಶಿವಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.