Crime: ಪತ್ನಿಯನ್ನು ಕೊಂದಿದ್ದ ಪತಿ ಕೂಡ ಆತ್ಮಹತ್ಯೆಗೆ ಶರಣು
Team Udayavani, Aug 18, 2024, 11:29 AM IST
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಬೇಸತ್ತು ರಾಡ್ನಿಂದ ಹಲ್ಲೆ ನಡೆಸಿ ಪತ್ನಿಯನ್ನು ಕೊಲೆಗೈದಿದ್ದ ಪತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹುಳಿಮಾವು ನಿವಾಸಿ ಮಹೇಶ್ ಕುಮಾರ್ (45) ಆತ್ಮಹತ್ಯೆಗೆ ಶರಣಾದವ.
ಮಹೇಶ್ ಕ್ರೇನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರೆ, ಈತನ ಪತ್ನಿ ಮೀನಾ ಹೌಸ್ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಪತ್ನಿ ಮೀನಾ ಅಕ್ರಮ ಸಂಬಂಧ ಹೊಂದಿರುವ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಪತ್ನಿ ಮೀನಾಗೆ ಮಹೇಶ್ ರಾಡ್ನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ. ಶನಿವಾರ ಕಮ್ಮನಹಳ್ಳಿಯ ಖಾಲಿ ನಿವೇಶನದ ಬಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಹುಳಿಮಾವು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪತ್ನಿಯನ್ನು ಕೊಲೆ ಮಾಡಿದ ನೋವಿನಿಂದ ಬಳಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.