ಪತಿಯ ವ್ಯಕ್ತಿತ್ವ ಹಾನಿ ಸಲ್ಲದು


Team Udayavani, Jun 12, 2018, 11:44 AM IST

highcourt.jpg

ಬೆಂಗಳೂರು: ಪತ್ನಿ ಮಾಡಿದ ಸುಳ್ಳು ಆರೋಪಗಳಿಂದ ಬೇಸತ್ತು ಆಕೆಯೊಂದಿಗಿನ ವೈವಾಹಿಕ ಸಂಬಂಧ ಕಡಿದುಕೊಳ್ಳಲು ಬಯಸಿದ್ದ ವ್ಯಕ್ತಿಗೆ ಹೈಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ. “ಪತಿಯ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಆರೋಪಗಳನ್ನು ಮಾಡಿ ಸಾಬೀತುಪಡಿಸಲು ವಿಫ‌ಲವಾದರೆ ಅದನ್ನು ಕ್ರೂರತೆ ಎಂದು ಪರಿಗಣಿಸಬೇಕಾಗುತ್ತದೆ’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಪತ್ನಿಯಿಂದ ವಿಚ್ಛೇದನ ಪಡೆಯಲು ಪತಿಗೆ ಅವಕಾಶ ಮಾಡಿಕೊಟ್ಟಿದೆ.

ಪತಿಯ ವಿರುದ್ಧ ಕೌಟುಂಬಿಕ ದೌರ್ಜನ್ಯ, ಅನೈತಿಕ ಸಂಬಂಧ, ಮದ್ಯ ವ್ಯಸನ ಸೇರಿದಂತೆ ಅನೇಕ ಆರೋಪಗಳನ್ನು ಮಾಡಿದ್ದ ಪತ್ನಿ, ಆತನಿಂದ ಜೀವನಾಂಶ ಬಯಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ, ಯಾವೊಂದು ಆರೋಪವನ್ನೂ ಸಾಬೀತುಪಡಿಸುವಲ್ಲಿ ವಿಫ‌ಲಳಾಗಿದ್ದರು. ಈ ನಡವಳಿಕೆಯಿಂದ ಬೇಸತ್ತ ಪತಿ, ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿರುವ ಪತ್ನಿಯಿಂದ ವಿಚ್ಛೇದನ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದ. ಈ ಅರ್ಜಿಯನ್ನು ನ್ಯಾ. ವಿನೀತ್‌ ಕೊಠಾರಿ ಹಾಗೂ ನ್ಯಾ. ಎಚ್‌.ಎನ್‌.ಪ್ರಭಾಕರ ಶಾಸ್ತ್ರೀ ಅವರಿದ್ದ ವಿಭಾಗೀಯ ಪೀಠ ಪುರಸ್ಕರಿಸಿದೆ.

“ಅರ್ಜಿದಾರನ ಪತ್ನಿ ಆತನ ವಿರುದ್ಧ ಮಾಡಿದ್ದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫ‌ಲರಾಗಿದ್ದು, ಇದರಿಂದ ಕಿರುಕುಳ ನೀಡುವ ಉದ್ದೇಶದಿಂದಲೇ ಆರೋಪಗಳನ್ನು ಮಾಡಿರುವುದು ಸಾಬೀತಾಗಿದೆ. ಅಲ್ಲದೆ, ಕೌಟುಂಬಿಕ ನ್ಯಾಯಾಲಯ ಆತನ ಜತೆ ಸಹಬಾಳ್ವೆ ನಡೆಸಲು ಸೂಚಿಸಿದ್ದರೂ ಆಕೆ ಪತಿಯೊಂದಿಗೆ ಸೇರುವ ಆಸಕ್ತಿ ತೋರಿಲ್ಲ. ಹೀಗಾಗಿ ಈ ಪ್ರಕರಣ ಹಿಂದೂ ವಿವಾಹ ಕಾಯ್ದೆಯ ಕಲಂ 13 (1) (ಐಎ)(ಐಬಿ)ಅನ್ವಯ ಅರ್ಜಿದಾರ ತನ್ನ ವಿವಾಹ ಅನೂರ್ಜಿತಗೊಳಿಸಲು ಅರ್ಹವಾಗಿದೆ’ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ.

ಆದರೆ, ವಿಚ್ಛೇದನ ಬಳಿಕ ಪತ್ನಿ ಜೀವನಾಂಶ ಪಡೆಯಲು ಅರ್ಹವಾಗಿದ್ದು, ಜೀವನಾಂಶವಾಗಿ ಆಕೆಗೆ 10 ಲಕ್ಷ ರೂ. ನೀಡಬೇಕು. ಈ ಮೊತ್ತವನ್ನು ಮುಂದಿನ ಮೂರು ತಿಂಗಳಲ್ಲಿ ಕೌಟುಂಬಿಂಕ ನ್ಯಾಯಾಲಯದಲ್ಲಿ ಠೇವಣಿ ಇಡಬೇಕು. ಅದೇ ರೀತಿ ಅಧೀನ ನ್ಯಾಯಾಲಯದ ಆದೇಶದಂತೆ ಪತ್ನಿಯೊಂದಿಗೆ ಇರುವ ಪುತ್ರನ ಜೀವನಾಂಶಕ್ಕಾಗಿ ಮಾಸಿಕ 7500 ರೂ. ನೀಡಬೇಕು ಎಂದು ನ್ಯಾಯಪೀಠ ಪತಿಗೆ ಸೂಚಿಸಿದೆ.

ಹೈಕೋರ್ಟ್‌ಗೆ ಮೇಲ್ಮನವಿ: “ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಪ್ರವೀಣ್‌, ಪತ್ನಿ ನೇಹಾ ತನ್ನ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದಾಳೆ. ಹೀಗಾಗಿ ಆಕೆಯೊಂದಿಗೆ ಬಾಳ್ವೆ ನಡೆಸಲು ಇಷ್ಟವಿಲ್ಲ. ಆದ್ದರಿಂದ ನನಗೆ ವಿಚ್ಛೇದನ ಕೊಡಿ’ ಎಂದು ಕೋರಿದ್ದರು. ಈ ಅರ್ಜಿಯನ್ನು ಹೈಕೋರ್ಟ್‌ ಮಾನ್ಯ ಮಾಡಿದೆ.

ಪ್ರಕರಣವೇನು?: ಬೆಳಗಾವಿ ಮೂಲದ ಸಾಫ್ಟ್ವೇರ್‌ ಎಂಜಿನಿಯರ್‌ ಪ್ರವೀಣ್‌ ಹಾಗೂ ನೇಹಾ (ಇಬ್ಬರ ಹೆಸರೂ ಬದಲಿಸಲಾಗಿದೆ) 2003ರ ಡಿಸೆಂಬರ್‌ ತಿಂಗಳಿನಲ್ಲಿ ವಿವಾಹವಾಗಿದ್ದರು. ಆರು ವರ್ಷ ಇವರು ಸಹಬಾಳ್ವೆ ನಡೆಸಿದ್ದು, ದಂಪತಿಗೆ ಒಬ್ಬ ಪುತ್ರನಿದ್ದಾನೆ. 2009ರಲ್ಲಿ ತವರುಮನೆಗೆ ತೆರಳಿದ್ದ ನೇಹಾ, ಗಂಡನ ಮನೆಗೆ ವಾಪಸಾಗಿರಲಿಲ್ಲ. ಅಲ್ಲದೆ, ಪತಿಯಿಂದ ಜೀವನಾಂಶ ಕೋರಿ ಮತ್ತು ಕೌಟುಂಬಿಕ ದೌರ್ಜನ್ಯದಡಿ ಬೆಳಗಾವಿ ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರತ್ಯೇಕ ದಾವೆ ಹೂಡಿದ್ದರು.

“ಪತಿ ಮದ್ಯ ವ್ಯಸನಿಯಾಗಿದ್ದು, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಾನೆ. ಆತನ ವ್ಯಸನ ಬಿಡಿಸಲು “ಪುನರ್ವಸತಿ ಕೇಂದ್ರಕ್ಕೆ’ ಸೇರಿಸಲು ಯತ್ನಿಸಲಾಗಿತ್ತು. ಆತ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸಹದ್ಯೋಗಿಗಳೊಂದಿಗೆ ದುರ್ವರ್ತನೆ ತೋರಿದ ಕಾರಣಕ್ಕೆ ಶಿಕ್ಷೆಯ ರೂಪದಲ್ಲಿ ಪುಣೆಗೆ ವರ್ಗಾವಣೆಗೊಂಡಿದ್ದ. ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದ.

ಬೇರೊಬ್ಬ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ’ ಎಂಬಿತ್ಯಾದಿ ಆರೋಪಗಳನ್ನು ಪತ್ನಿ ಮಾಡಿದ್ದರು. ಇನ್ನೊಂದೆಡೆ ಪತಿಯ ವಿರುದ್ಧವೇ ಕಳ್ಳತನದ ಪ್ರಕರಣ ದಾಖಲಿಸಿದ್ದು, ಪೊಲೀಸರು ಈ ಕುರಿತು ಬಿ ರಿಪೋರ್ಟ್‌ ಸಲ್ಲಿಸಿದ್ದರು. ಪತ್ನಿಯ ಈ ಆರೋಪಗಳಿಂದ ಬೇಸತ್ತಿದ್ದ ಪ್ರವೀಣ್‌ ಕೂಡ ವಿಚ್ಛೇದನ ಕೋರಿ ಬೆಳಗಾವಿಯ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ನೇಹಾ ಜೀವನಾಂಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೌಟುಂಬಿಕ ನ್ಯಾಯಾಲಯ, ಪುತ್ರನ ವೆಚ್ಚಕ್ಕಾಗಿ ಮಾಸಿಕ 7500 ರೂ. ನೀಡಬೇಕು ಎಂದು ಪ್ರವೀಣ್‌ಗೆ ಸೂಚಿಸಿತ್ತು. ಅಲ್ಲದೆ, ಪತಿಯೊಂದಿಗೆ ಸಹಬಾಳ್ವೆ ನಡೆಸುವಂತೆ ನಿರ್ದೇಶನ ನೀಡಿತ್ತು. ಆದರೆ, ನೇಹಾ, ಪತಿ ವಿರುದ್ಧ ಮಾಡಿದ ಆರೋಪಗಳನ್ನು ಸಾಬೀತುಪಡಿಸಲು ವಿಫ‌ಲರಾಗಿದ್ದರು ಎಂಬ ಕಾರಣಕ್ಕೆ ಪ್ರಕರಣ ವಜಾಗೊಳಿಸಿ ಪತಿಯೊಂದಿಗೆ ಕೂಡಿ ಬಾಳುವಂತೆ ಸಲಹೆ ನೀಡಿತ್ತು. ಇನ್ನೊಂದೆಡೆ ಪತ್ನಿಯಿಂದ ವಿಚ್ಛೇದನ ಕೋರಿ ಪ್ರವೀಣ್‌ ಸಲ್ಲಿಸಿದ್ದ ಅರ್ಜಿಯನ್ನೂ ವಜಾಗೊಳಿಸಿತ್ತು.

* ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.