![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jul 4, 2017, 3:45 AM IST
ಬೆಂಗಳೂರು: ರಾಜ್ಯದಲ್ಲಿ ಜಿಎಸ್‌ಟಿ ಜಾರಿ ಬಳಿಕ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಶೇ.4ರಷ್ಟು ತೆರಿಗೆ ಹೆಚ್ಚಳವಾಗಲಿದೆ. ಆದರೆ ಗೃಹೇತರ ಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ. ಈ ಹಿಂದೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಮೇಲೆ ಶೇ.5ರವರೆಗೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿತ್ತು. ಅದರಂತೆ ಒಂದೊಂದು ರಾಜ್ಯ ಒಂದೊಂದು ಪ್ರಮಾಣದಲ್ಲಿ ತೆರಿಗೆ ವಿಧಿಸಿತ್ತು. ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಮೇಲೆ ಶೇ.1ರಷ್ಟು ತೆರಿಗೆ ವಿಧಿಸಲಾಗಿತ್ತು. ಇದೀಗ ಜಿಎಸ್ ಟಿಯಡಿ ಗೃಹ ಬಳಕೆ ಸಿಲಿಂಡರ್ ಮೇಲೆ
ಶೇ.5ರಷ್ಟು ತೆರಿಗೆ ವಿಧಿಸಿರುವುದರಿಂದ ಗ್ರಾಹಕರು ಶೇ.4ರಷ್ಟು ಹೆಚ್ಚುವರಿ ತೆರಿಗೆ ಭರಿಸಬೇಕಾಗುತ್ತದೆ ಎಂದು
ಮೂಲಗಳು ತಿಳಿಸಿವೆ.
ಗೃಹೇತರ ಬಳಕೆ ಅಡುಗೆ ಅನಿಲ ಸಿಲಿಂಡರ್ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ತೆರಿಗೆ ಸೇರಿ ಸುಮಾರು ಶೇ.18ರಷ್ಟು ತೆರಿಗೆ ವಿಧಿಸಲಾಗಿತ್ತು. ಜಿಎಸ್‌ಟಿಯಡಿ ಗೃಹೇತರ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗೆ ಶೇ.18ರಷ್ಟು ತೆರಿಗೆ ವಿಧಿಸಿರುವುದರಿಂದ ಹೆಚ್ಚಿನ ಹೊರೆಯಾಗದು ಎಂದು ಹೇಳಿವೆ. ಜಿಎಸ್‌ಟಿ ಜಾರಿ ಬಳಿಕ ಗೃಹ ಬಳಕೆ ಹಾಗೂ ಗೃಹೇತರ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳವಾಗಿದ್ದರೂ ತೆರಿಗೆ ಪ್ರಮಾಣದ ಬಗ್ಗೆ ಸ್ಪಷ್ಟತೆ ಇಲ್ಲ.
ಜಿಎಸ್‌ಟಿ ಜಾರಿ ಕುರಿತು ಒಂದೆರಡು ಸಭೆ ನಡೆಸಿದ್ದರೂ ಹೆಚ್ಚುವರಿ ತೆರಿಗೆ ಬಗ್ಗೆ ಗೊಂದಲವಿದೆ. ಸದ್ಯ ಹಳೆಯ
ದರದಲ್ಲೇ ಸಿಲಿಂಡರ್ ವಿತರಿಸಲಾಗುತ್ತಿದೆ ಎಂದು ಬೆಂಗಳೂರಿನ ಅಡುಗೆ ಅನಿಲ ಸಿಲಿಂಡರ್ ವಿತರಕ
ಜಗದೀಶ್‌ಬಾಬು ತಿಳಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.