ಖಾಸಗಿ ಕಾರ್ಮಿಕರ ನಿವೃತ್ತಿ ವಯಸ್ಸು 60ಕ್ಕೆ ಹೆಚ್ಚಳ 


Team Udayavani, Mar 25, 2017, 3:45 AM IST

vidhana-soudha-750.jpg

ಬೆಂಗಳೂರು: ಖಾಸಗಿ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ನಿವೃತ್ತಿ ವಯಸ್ಸನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ 58 ರಿಂದ 60ಕ್ಕೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದ್ದು, ಅದಕ್ಕಾಗಿ 1961ರ ಕರ್ನಾಟಕ ಔದ್ಯೋಗಿಕ ಉದ್ಯೋಗಿಗಳ (ಸ್ಥಾಯಿ ಆದೇಶಗಳು) ನಿಯಮಾವಳಿಯ ಅನುಸೂಚಿ-1ಕ್ಕೆ ತಿದ್ದುಪಡಿ ತರಲು ಅನುಮೋದನೆ ನೀಡಿದೆ.

ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಖಾಸಗಿ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಹೆಚ್ಚಿಸುವ ಬಗ್ಗೆ 2017-18ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಆದರೆ, ಮಾರ್ಚ್‌ ಅಂತ್ಯದೊಳಗೆ ನಿವೃತ್ತರಾಗುವವರಿಗೂ ಈ ಅನುಕೂಲ ಕಲ್ಪಿಸುವ ಉದ್ದೇಶದಿಂದ ತಕ್ಷಣದಿಂದಲೇ ನಿವೃತ್ತಿ ವಯಸ್ಸು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಅದರಂತೆ ಸಚಿವ ಸಂಪುಟದಲ್ಲಿ ಅಂಗೀಕರಿಸಿದ ತಿದ್ದುಪಡಿ ಕುರಿತು ತಕ್ಷಣವೇ ಆದೇಶ ಹೊರಡಿಸಲು ಕಾರ್ಮಿಕ ಇಲಾಖೆಗೆ ಸೂಚಿಸಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಈಗಾಗಲೇ 60ಕ್ಕೆ ಏರಿಸಲಾಗಿದೆ. ಹೀಗಾಗಿ, ಖಾಸಗಿ ವಲಯದ ಕಾರ್ಮಿಕರ ನಿವೃತ್ತಿ ವಯಸ್ಸನ್ನೂ ಹೆಚ್ಚಿಸಬೇಕು ಎಂಬ ಬೇಡಿಕೆ ಹೆಚ್ಚಾಗಿತ್ತು. ಈ ಬಗ್ಗೆ 2017-18ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ ಬಳಿಕ ಕೆಲವು ಕೈಗಾರಿಕೆ ಮತ್ತು ಉದ್ದಿಮೆಗಳ ಮುಖ್ಯಸ್ಥರು ನಿವೃತ್ತಿ ವಯಸ್ಸನ್ನು ಹೆಚ್ಚಿಸದಂತೆ ಒತ್ತಡ ತಂದಿದ್ದರು. ಇನ್ನೊಂದೆಡೆ, ಮಾರ್ಚ್‌ನಿಂದಲೇ ಈ ನಿರ್ಧಾರ ಕೈಗೊಂಡರೆ ಅನುಕೂಲವಾಗುತ್ತದೆ ಎಂದು ಅನೇಕ ಕಾರ್ಮಿಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಹೀಗಾಗಿ, ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಗುಮಾಸ್ತರು ಮತ್ತು ಲಿಪಿಕ ನೌಕರರನ್ನು ಹೊರತುಪಡಿಸಿ, ಉಳಿದ ಕಾರ್ಮಿಕರ ನಿವೃತ್ತಿ ವಯಸ್ಸನ್ನು ತಕ್ಷಣದಿಂದಲೇ ಏರಿಸಲು ಸಂಪುಟಸಭೆ ನಿರ್ಣಯ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯದ 6,900 ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸುಮಾರು ಏಳು ಲಕ್ಷ ಮತ್ತು 4,032 ಕಾರ್ಖಾನೆಗಳ 14 ಲಕ್ಷ ಕಾರ್ಮಿಕರಿಗೆ ಪ್ರಯೋಜನವಾಗಲಿದೆ.

ಶಿರಾದಲ್ಲಿ ಮಾನವರಹಿತ ಕುರಿ, ಮೇಕೆ ವಧಾಗಾರ:
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚೀಲನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಅತ್ಯಾಧುನಿಕ ತಂತ್ರಜ್ಞಾನದ ಮತ್ತು ಮಾನವ ಕೆಲಸ ರಹಿತ ಅತ್ಯಾಧುನಿಕ ಕುರಿ ಮತ್ತು ಮೇಕೆಗಳ ವಧಾಗಾರ ಸ್ಥಾಪಿಸಲು ಸಚಿವ ಸಂಪುಟಸಭೆ ಅನುಮೋದನೆ ನೀಡಿದೆ. ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಕುರಿ ಮತ್ತು ಮೇಕೆ ಸಾಕಣೆಯನ್ನು ರೈತರು ಮುಖ್ಯ ಕಸುಬಾಗಿ ಪರಿಗಣಿಸಿದ್ದು, ಅವರಿಗೆ ಕುರಿ ಮತ್ತು ಮೇಕೆಗಳ ವಧಾಗಾರ ವ್ಯವಸ್ಥೆ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಅತ್ಯಾಧುನಿಕ ವಧಾಗಾರ ಸ್ಥಾಪಿಸುವ ಕುರಿತು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಚೀಲನಹಳ್ಳಿ ಗ್ರಾಮದ ಸರ್ವೇ ನಂ. 14ರಲ್ಲಿ 20 ಎಕರೆ ಜಮೀನನ್ನು ಏಳು ವರ್ಷದ ಹಿಂದೆ ಮೀಸಲಿಡಲಾಗಿತ್ತು. ಇದೀಗ ಸುಮಾರು 25.23 ಕೋಟಿ ರೂ.ವೆಚ್ಚದಲ್ಲಿ ಆ ಜಾಗದಲ್ಲಿ ಅತ್ಯಾಧುನಿಕ ವಧಾಗಾರ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇಲ್ಲಿನ ಕೆಲಸಗಳು ಮಾನವ ರಹಿತವಾಗಿರುತ್ತವೆ. ಇದರಿಂದ ಆ ಭಾಗದಲ್ಲಿ ಕುರಿ ಸಾಕಣೆ ಅಭಿವೃದ್ಧಿ ಜತೆಗೆ ಕುರಿ, ಮೇಕೆ ಮಾಂಸಗಳ ರಫ್ತಿಗೂ ಅನುಕೂಲವಾಗಲಿದೆ.

ಸಿಬಿಎಸ್‌ಇ, ಐಸಿಎಸ್‌ಇ ಶಾಲೆಗಳಿಗೆ ಕಡಿವಾಣ
ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಶಾಲೆಗಳನ್ನು ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಕರ್ನಾಟಕ ಶಿಕ್ಷಣ ನೀತಿ-1983ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಇತ್ತೀಚೆಗೆ ತುಮಕೂರು ಜಿಲ್ಲೆಯ ಸಿಬಿಎಸ್‌ಇ ವಸತಿ ಶಾಲೆಯೊಂದರಲ್ಲಿ ವಿಷಾಹಾರ ಸೇವಿಸಿ ಮಕ್ಕಳು ಮೃತಪಟ್ಟ ಪ್ರಕರಣದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಸರ್ಕಾರ ಮುಂದಾಗಿದ್ದು, ಶಿಕ್ಷಣ ನೀತಿಗೆ ತಿದ್ದುಪಡಿ ತರಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಪ್ರಸ್ತುತ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಿಕ್ಷಣ ಸಂಸ್ಥೆಗಳ ಮೇಲೆ ರಾಜ್ಯ ಸರ್ಕಾರಕ್ಕೆ ಯಾವುದೇ ಹಿಡಿತ ಇರಲಿಲ್ಲ. ಹೀಗಾಗಿ ಒಂದು ಬಾರಿ ನಿರಾಕ್ಷೇಪಣಾ ಪತ್ರ ಪಡೆದ ಬಳಿಕ ಆ ಶಾಲೆಗಳು ತಮ್ಮ ಇಷ್ಟಕ್ಕೆ ಬಂದಂತೆ ಕೆಲಸ ನಿರ್ವಹಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಆ ಶಿಕ್ಷಣ ಸಂಸ್ಥೆಗಳನ್ನೂ ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ತೆಗೆದುಕೊಂಡು ರಾಜ್ಯ ಸರ್ಕಾರ 2016ರಲ್ಲಿ ಜಾರಿಗೆ ತಂದಿರುವ ಮಕ್ಕಳ ಸುರಕ್ಷತಾ ನೀತಿಯನ್ನು ಆ ಶಾಲೆಗಳಿಗೂ ಅನ್ವಯ ಮಾಡುವುದರ ಜತೆಗೆ ಶುಲ್ಕ ನಿಗದಿ ಬಗ್ಗೆಯೂ ಗಮನಹರಿಸಲು ತೀರ್ಮಾನಿಸಿದೆ.

ಸಮವಸ್ತ್ರ ಮತ್ತು ಸೈಕಲ್‌ಗೆ 328.35 ಕೋಟಿ:
2017-18ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಹಾಗೂ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಿಸಲು 328.35 ಕೋಟಿ ರೂ. ವೆಚ್ಚ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆಯ ಜವಾಬ್ದಾರಿಯನ್ನು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ (ಕೆಎಚ್‌ಡಿಸಿ) ಈಗಾಗಲೇ ವಹಿಸಲಾಗಿದ್ದು, 2017-18ನೇ ಸಾಲಿನ ಸಮವಸ್ತ್ರ ಪೂರೈಕೆಗಾಗಿ ಸಂಸ್ಥೆಗೆ 156.35 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ. ಅಲ್ಲದೆ, 2017-18ನೇ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ 5.10 ಲಕ್ಷ ಮಕ್ಕಳಿಗೆ ಜೂನ್‌ ಒಳಗಾಗಿ ಸೈಕಲ್‌ ವಿತರಿಸಲು ತೀರ್ಮಾನಿಸಿರುವ ಸರ್ಕಾರ, ಅದಕ್ಕಾಗಿ 172 ಕೋಟಿ ರೂ. ಅನುದಾನ ಒದಗಿಸಲು ಸಂಪುಟದಲ್ಲಿ ಒಪ್ಪಿಗೆ ಸೂಚಿಸಿದೆ.

ಇತರ ಪ್ರಮುಖ ತೀರ್ಮಾನಗಳು:
– ಭೂಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅಳತೆಗೆ ಬಾಕಿ ಇರುವ 5.27 ಲಕ್ಷ ಪ್ರಕರಣಗಳನ್ನು ತ್ವರಿತಗೊಳಿಸುವ ಉದ್ದೇಶದಿಂದ ಖಾಲಿ ಇರುವ 1,076 ಭೂಮಾಪಕರ ಹುದ್ದೆಗಳಿಗೆ ನಿವೃತ್ತ ಭೂಮಾಪಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದು.
– ರಾಜ್ಯದ ಮುಂಡರಗಿ, ಕಂಪ್ಲಿ, ತೆಕ್ಕಲಕೋಟೆ, ಕೊತ್ತೂರು, ಮಹಾಲಿಂಗಪುರ, ತೇರದಾಳ, ಮುದುಗಲ್‌, ಸೀರಲಕೊಪ್ಪ, ಮುಲ್ಕಿ (ಒಟ್ಟು 9) ಪಟ್ಟಣಗಳಿಗೆ 205.7 ಕೋಟಿ ರೂ.ವೆಚ್ಚದಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ನಿರ್ಮಿಸುವುದು.
– ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 9,456 ಅರೆ ವೈದ್ಯಕೀಯ ಸಿಬ್ಬಂದಿಯನ್ನು ವಿಶೇಷ ನೇಮಕಾತಿ ಮೂಲಕ ಭರ್ತಿ ಮಾಡುವುದು.

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.